![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 30, 2022, 8:30 AM IST
ಉಡುಪಿ: ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಹಲವು ಸುರಕ್ಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೂರಕ ಕೆಲಸಗಳು ನಡೆಯುತ್ತಿದ್ದು, ಶೀಘ್ರ ಪ್ರವಾಸಿಗರಿಗೆ ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.
ಗುರುವಾರ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ ಸಂವಾದದಲ್ಲಿ ಅವರು ಪ್ರಶ್ನೆಗಳಿಗೆ ಉತ್ತರಿಸಿದರು. ಸೆಲ್ಫಿ ಪಾಯಿಂಟ್, ತಡೆಬೇಲಿ, ಸ್ವತ್ಛತೆ ಮೊದಲಾದ ಕೆಲಸಗಳು ನಡೆಯುತ್ತಿವೆ. ಪ್ರಸ್ತುತ ಸಮುದ್ರ ಪ್ರಕ್ಷುಬ್ಧವಾಗಿದ್ದು, ವಾತಾವರಣವನ್ನು ಗಮನಿಸಿಕೊಂಡು ಅನುಮತಿ ನೀಡಬೇಕಿದೆ ಎಂದರು.
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಮಾತನಾಡಿ, ಈ ಹಿಂದಿನ ಜಿಲ್ಲಾಧಿಕಾರಿಗಳು ಯೋಜಿಸಿ ಅರ್ಧಕ್ಕೆ ನಿಂತ ಯೋಜನೆಗಳ ಬಗ್ಗೆ ವಿಮರ್ಶಿಸಲಾಗುವುದು. ಪ್ರವಾಸಿ ತಾಣಗಳನ್ನು ಹೆಚ್ಚು ಪ್ರವರ್ಧಮಾನಕ್ಕೆ ತರುವ ಬಗ್ಗೆ ಬ್ಲಾಗರ್ಸ್ ಗಳಿಂದ ಸಲಹೆ ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳಲಾಗುವುದು. ಇದಕ್ಕಾಗಿ ಇನ್‌ಸ್ಟಾಗ್ರಾಂನಲ್ಲಿಯೂ ಖಾತೆ ತೆರೆಯಲಾಗಿದೆ ಎಂದರು.
ಅಕ್ಟೋಬರ್ ಅಂತ್ಯಕ್ಕೆ ಮರಳು ಲಭ್ಯ
ಜಿಲ್ಲೆಯಲ್ಲಿ ಕಲ್ಲು, ಮರಳು ಸಹಿತ ಇತರ ಯಾವುದೇ ಖನಿಜಗಳ ಅಕ್ರಮ ವ್ಯವಹಾರ ನಡೆಯದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ನಿರಂತರ ಕಾರ್ಯಾಚರಣೆ, ದಾಳಿ ನಡೆಸುತ್ತಿದ್ದಾರೆ. ದಂಡ ಸಂಗ್ರಹದಲ್ಲಿ ರಾಜ್ಯದಲ್ಲಿಯೇ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದೆ. ಮುಂದಿನ ದಿನಗಳಲ್ಲಿ ಕಂದಾಯ, ಪೊಲೀಸ್ ಇಲಾಖೆ ಮತ್ತು ಆರ್‌ಟಿಒ ಸಮನ್ವಯ ಸಾಧಿಸಿ ಕಾರ್ಯಾಚರಣೆ ನಡೆಸುವಂತೆ ಆನ್‌ಲೈನ್ ಎಂಟ್ರಿ ಪೋರ್ಟಲ್ ಜಾರಿಗೆ ತರಲಾಗುವುದು. ಈ ವರ್ಷ ಗ್ರಾ.ಪಂ. ಮಟ್ಟದಲ್ಲಿ ಮರಳುಗಾರಿಕೆಗೆ ಅವಕಾಶ ಮಾಡಿಕೊಡಲಾಗಿದೆ. ಸಾಂಪ್ರದಾಯಿಕವಾಗಿ ಮರಳು ತೆಗೆಯಬಹುದಾದ ದಿಬ್ಬಗಳನ್ನೂ ಗುರುತಿಸಿದ್ದೇವೆ. ಅಕ್ಟೋಬರ್ ಅಂತ್ಯಕ್ಕೆ ಜನರಿಗೆ ಮರಳು ಲಭ್ಯವಾಗಲಿದೆ ಎಂದು ಡಿಸಿ ತಿಳಿಸಿದರು.
ವಾರ್ತಾಧಿಕಾರಿ ಮಂಜುನಾಥ್, ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು. ಚೇತನ್ ಮಟಪಾಡಿ ನಿರೂಪಿಸಿ, ವಂದಿಸಿದರು.
ಪ್ರಮುಖ ಅಂಶಗಳು :
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.