ಮಾಸ್ಕ್ ಧರಿಸದಿದ್ದರೆ, ಸಾಮಾಜಿಕ ಅಂತರ ಪಾಲಿಸದಿದ್ದರೆ ದಂಡ: ಉಡುಪಿ ಜಿಲ್ಲಾಧಿಕಾರಿ ಆದೇಶ
Team Udayavani, May 10, 2020, 5:30 PM IST
ಉಡುಪಿ: ಕೋವಿಡ್ ನಿಯಂತ್ರಣದಲ್ಲಿ ಪರಿಣಾಮಕಾರಿ ವಿಧಾನಗಳನ್ನು ಅನುಸರಿಸುವ ಮೂಲಕ ಜಿಲ್ಲೆಯು ಹಸಿರು ವಲಯದಲ್ಲಿ ಗುರುತಿಸಿಕೊಂಡಿದೆ.
ಮೂರನೇ ಲಾಕ್ ಡೌನ್ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಹಲವು ರೀತಿಯ ವಾಣಿಜ್ಯ ಕಾರ್ಯಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ.
ಮತ್ತು ಬೆಳಿಗ್ಗೆ 7ರಿಂದ ಸಾಯಂಕಾಲ 7 ಗಂಟೆಗಳವರೆಗೆ ಸಾರ್ವಜನಿಕರ ಓಡಾಟಕ್ಕೂ ಜಿಲ್ಲೆಯಲ್ಲಿ ಅನುಮತಿಯನ್ನು ನೀಡಲಾಗಿದೆ.
ಆದರೆ ಈ ಸಂದರ್ಭದಲ್ಲಿ ಸೂಕ್ತ ಸುರಕ್ಷತಾ ವಿಧಾನಗಳನ್ನು ಎಲ್ಲರೂ ತಪ್ಪದೇ ಪಾಲಿಸುವಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಅದರಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವುದು ಹಾಗೂ ಸಾಮಾಜಿಕ ಅಂತರವನ್ನು ಪಾಲಿಸದೇ ಇರುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳಿಗೆ ದಂಡ ವಿಧಿಸುವಂತೆ ಜಿಲ್ಲಾಧಿಕಾರಿಯವರು ತಮ್ಮ ಹೊಸ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲೆ ಸದ್ಯಕ್ಕೆ ಹಸುರು ವಲಯದಲ್ಲಿ ಇದ್ದರೂ, ಕೋವಿಡ್ ವೈರಸ್ ವಿಚಾರಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಕಾರಣದಿಂದ ಸರಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಎಲ್ಲರ ಕರ್ತವ್ಯವಾಗಿದೆ. ಹಾಗಾಗಿ, ಅವಶ್ಯಕ ಸಾಮಾಗ್ರಿಗಳನ್ನು ಖರೀದಿಸಲು ಅಂಗಡಿಗೆ ತೆರಳುವವರು, ಕಛೇರಿ ಕೆಲಸಕ್ಕೆ ಸೇರಿದಂತೆ ಇನ್ನಿತರ ಕಾರಣಕ್ಕೆ ಸಂಚರಿಸುವವರು ಮುಂಜಾಗರೂಕತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಹಾಗಾಗಿ ಮಾಸ್ಕ್ ಗಳನ್ನು ಧರಿಸಿಕೊಂಡು ಓಡಾಡುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುತ್ತದೆ. ಇದಕ್ಕೆ ತಪ್ಪಿದಲ್ಲಿ ಅಂತಹ ವ್ಯಕ್ತಿಗಳಿಗೆ ದಂಡ ವಿಧಿಸುವ ಅವಕಾಶವನ್ನೂ ಜಿಲ್ಲಾಧಿಕಾರಿಯವರು ಪೊಲೀಸ್ ಇಲಾಖೆಗೆ ನೀಡಿದ್ದಾರೆ.
ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರವನ್ನು ಪಾಲಿಸದಿರುವುದೂ ಸೇರಿದಂತೆ ಕೋವಿಡ್ ವೈರಸ್ ನಿರೋಧಕ ಕ್ರಮಗಳನ್ನು ಅನುಸರಿಸದಿರುವ ವ್ಯಕ್ತಿಗಳಿಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200 ಹಾಗೂ ಜಿಲ್ಲೆಯ ಇತರೆ ಕಡೆಗಳಲ್ಲಿ ರೂ. 100 ದಂಡ ವಿಧಿಸುವಂತೆ ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.