ದ.ಕ. 98 ಅರ್ಜಿ ಇತ್ಯರ್ಥ, ಉಡುಪಿ 44 ಅರ್ಜಿ ಸ್ವೀಕಾರ
ಮಾಣಿಲ, ಕಿರಿಮಂಜೇಶ್ವರದಲ್ಲಿ ದ.ಕ., ಉಡುಪಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ
Team Udayavani, Jan 22, 2023, 6:00 AM IST
ವಿಟ್ಲ: ಮಾಣಿಲ ಗ್ರಾಮದಲ್ಲಿ ಶನಿವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಎಂ.ಆರ್. ರವಿಕುಮಾರ್ ಅವರ ಗ್ರಾಮ ವಾಸ್ತವ್ಯದಲ್ಲಿ 98 ಅರ್ಜಿಗಳನ್ನು ಇತ್ಯರ್ಥಗೊಳಿಸಲಾಯಿತು.
ಅಂಬೇಡ್ಕರ್ ಭವನ, ವಾಲ್ಮೀಕಿ ಭವನ, ಶ್ಮಶಾನಕ್ಕೆ ನಿವೇಶನ, ಗ್ರಾ.ಪಂ. ವ್ಯಾಪ್ತಿಯಲ್ಲಿ ಅವಶ್ಯವಿರುವುದಕ್ಕೆ ನಿವೇಶನವನ್ನು ಮಂಜೂರು ಮಾಡಲಾಯಿತು. ಸೀರೆಹೊಳೆಗೆ ಸೇತುವೆ, ವಿದ್ಯುತ್ ಲೈನ್ ಹಾದುಹೋಗುವ ಸಮಸ್ಯೆಗೆ ಪರಿಹಾರ ಸೂಚಿಸಲಾಯಿತು. ವೈಯಕ್ತಿಕ ಮತ್ತು ಸಾಮಾಜಿಕ, ಶೈಕ್ಷಣಿಕ ವಿಚಾರಗಳಲ್ಲಿ ಅಗತ್ಯ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು.
ಶಿಕ್ಷಕರ ಸಮಸ್ಯೆ ನಿವಾರಣೆಗೆ ಆದೇಶ
ಮಾಣಿಲ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ 84 ವಿದ್ಯಾರ್ಥಿಗಳಿದ್ದು, ಓರ್ವ ಶಿಕ್ಷಕ ಮಾತ್ರ ಇರುವುದಾಗಿ ದೂರ ಬಂದಿತ್ತು. ಬಂಟ್ವಾಳ ಕ್ಷೇತ್ರ ಶಿಕ್ಷಣಾ ಧಿಕಾರಿಯಿಂದ ಸ್ಪಷ್ಟನೆ ಕೇಳಿದಾಗ ಅನುದಾನಿತ ಶಾಲೆಗೆ ಯಾವುದೇ ಶಿಕ್ಷಕರನ್ನು ಹಾಕುವಂತಿಲ್ಲ ಎಂದರು. ಈ ಬಗ್ಗೆ ತತ್‌ಕ್ಷಣ ಆದೇಶವನ್ನು ಆಡಳಿತ ಮಂಡಳಿಗೆ ನೀಡಬೇಕಿತ್ತು ಎಂದು ಜಿಲ್ಲಾ ಧಿಕಾರಿ ಹೇಳಿದರು.
ಪ್ರಕರಣ ದಾಖಲಿಸಲು ಸೂಚನೆ
ಖಾಸಗಿ ವ್ಯಕ್ತಿಯೊಬ್ಬರಿಗೆ 25 ಎಕ್ರೆ ಜಮೀನು ಇದ್ದರೂ ಮತ್ತಷ್ಟು ಜಾಗ ಒತ್ತುವರಿ ಮಾಡುತ್ತಿದ್ದಾರೆ ಎಂಬ ಬಗ್ಗೆ ದೂರು ಕೇಳಿ ಬಂತು. ತಹಶೀಲ್ದಾರರು ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಿಸಬೇಕು. ಒತ್ತುವರಿ ತೆರವು ಮಾಡಿ ತಹಶೀಲ್ದಾರರಿಗೆ ಜಾಗ ಹಸ್ತಾಂತರಿಸಬೇಕು. ಈ ಬಗ್ಗೆ ವಿಟ್ಲ ಪೊಲೀಸರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ತೆರಿಗೆ ಪಾವತಿಸಬೇಡಿ!
ಪಾರಂಪರಿಕವಾಗಿ ಬಂದ ಹಲವು ಮನೆಗಳು, ಕೃಷಿಕರು ಕೃಷಿ ಉದ್ದೇಶಕ್ಕಾಗಿ ಬಳಸುವ ಕಟ್ಟಡಗಳ ದಾಖಲೆ ಬದಲಾವಣೆಗೆ ಭೂಪರಿವರ್ತನೆ ಹಾಗೂ 9/11 ಇಲ್ಲದೇ ಹೋದಲ್ಲಿ ಪಂಚಾಯತ್‌ನಿಂದ ಕದ ಸಂಖ್ಯೆ ಬದಲಾವಣೆ ಮಾಡುತ್ತಿಲ್ಲ ಎಂಬ ಸಮಸ್ಯೆಯನ್ನು ಜಿಲ್ಲಾ ಧಿಕಾರಿಗಳಿಗೆ ತಿಳಿಸಿದಾಗ
ಸಮಸ್ಯೆ ಸರಿಯಾಗುವ ತನಕ ತೆರಿಗೆ ಪಾವತಿಸುವುದು ಬೇಡ ಎಂದರು.
30 ವರ್ಷ ಹಳೆಯ ಪೆರುವಾಯಿ ಆರೋಗ್ಯ
ಕೇಂದ್ರದ ಕಟ್ಟಡ ನವೀಕರಿಸಲು ಸೂಚನೆ ನೀಡಲಾಗು ವುದು. ವಿಟ್ಲ ಸಮುದಾಯ ಆಸ್ಪತ್ರೆಯನ್ನು ಮೇಲ್ದರ್ಜೆ ಗೇರಿಸಲಾಗುವುದು ಎಂದು ಡಿಸಿ ಹೇಳಿದರು.
ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು. ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಲಾಯಿತು.
ಉಪ್ಪುಂದ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಅಭಿಯಾನ ಕಿರಿಮಂಜೇಶ್ವರ ಗ್ರಾಮದಲ್ಲಿ ಜ. 21ರಂದು ನಾಗೂರು ಒಡೆಯರ ಮಠ ಶ್ರೀಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಿತು. ಕಿರಿಮಂಜೇಶ್ವರ ಗ್ರಾ.ಪಂ. ಅಧ್ಯಕ್ಷೆ ಗೀತಾ ಉದ್ಘಾಟಿಸಿದರು. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧ್ಯಕ್ಷತೆ ವಹಿಸಿದ್ದರು.
ರಾ.ಹೆ. 66ರ ಯುಟರ್ನ್, ಚರಂಡಿ ಸಮಸ್ಯೆ, ಸರ್ವಿಸ್ ರಸ್ತೆ, ಶ್ಮಶಾನ ಸಮಸ್ಯೆ, ಕೊಡೇರಿ ಬಂದರು ಸಮಸ್ಯೆ ಇತ್ಯಾದಿಗಳಿಗೆ ಸಂಬಂಧಿಸಿ 44 ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಗ್ರಾಮಸ್ಥರಿಂದ ಸ್ವೀಕರಿಸಿದರು.
ಜಿಲ್ಲಾ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್., ಪ್ರೊಬೆಷನರಿ ಐಎಎಸ್ ಅಧಿಕಾರಿ ಯತೀಶ, ಡಿಎಫ್‌ಒ ಉದಯ, ಅಂತಾರಾಷ್ಟ್ರೀಯ ಯೋಗಪಟು ಧ್ವನಿ ಮರವಂತೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೈಂದೂರು ತಹಶೀಲ್ದಾರ್ ಶ್ರೀಕಾಂತ ಹೆಗ್ಡೆ ಸ್ವಾಗತಿಸಿದರು. ಕುಂದಾಪುರ ಸಹಾಯಕ ಕಮಿಷನರ್ ರಾಜು ಕೆ. ಪ್ರಸ್ತಾವನೆಗೈದರು. ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.