Udupi ಡಿ.16: ಶ್ರೀ ವಿಶ್ವಪ್ರಸನ್ನತೀರ್ಥರ ಷಷ್ಟ್ಯಬ್ದ
Team Udayavani, Dec 10, 2023, 11:53 PM IST
ಉಡುಪಿ: ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಷಷ್ಟ್ಯಬ್ದ ಅಭಿವಂದನ ಸಮಾರಂಭ ಡಿ.16ರಂದು ಶ್ರೀಕೃಷ್ಣ ಮಠ ಮತ್ತು ಪೇಜಾವರ ಮಠದ ಮುಂಭಾಗದಲ್ಲಿ ನಡೆಯಲಿದೆ ಎಂದು ಶ್ರೀ ಪೇಜಾವರ ಗುರುವಂದನ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶ್‌ಪಾಲ್ ಎ. ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ರವಿವಾರ ತಿಳಿಸಿದರು.
ಶ್ರೀಕೃಷ್ಣ ಮಠದಲ್ಲಿ ಅಂದು ಬೆಳಗ್ಗೆ ಲಕ್ಷ ಕೃಷ್ಣ ಮಂತ್ರ ಜಪ ಯಾಗ ಮತ್ತು ಗೋ ಸೂಕ್ತ ಯಾಗ, ಮಧ್ಯಾಹ್ನ 12.30ರಿಂದ ರಾಜಾಂಗಣದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 3ರಿಂದ ಜೋಡುಕಟ್ಟೆಯಿಂದ ಆಕರ್ಷಕ ಶೋಭಾಯಾತ್ರೆ ನಡೆಯಲಿದೆ. 5ರಿಂದ ಶ್ರೀ ಪೇಜಾವರ ಮಠದ ಮುಂಭಾಗದಲ್ಲಿ ಬೃಹತ್ ಅಭಿವಂದನ ಸಮಾರಂಭ ನಡೆಯಲಿದೆ.
7.30ರಿಂದ ಪುಣೆಯ ಮಹೇಶ್ ಕಾಳೆ ಮತ್ತು ಬಳಗದವರಿಂದ ಹಿಂದೂಸ್ಥಾನಿ ಸಂಗೀತ ಮತ್ತು ಭಜನ್ಸ್ ಹಾಗೂ ಪ್ರಸಿದ್ಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ.
ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿ, ಆಶೀರ್ವಚನ ನೀಡಲಿದ್ದಾರೆ. ಅಷ್ಟ ಮಠಾಧೀಶರು ಶುಭ ಸಂದೇಶ ನೀಡಲಿದ್ದಾರೆ.
ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಶ್ರೀಪಾದ್ ಯೆಸ್ಸೋ ನಾಯ್ಕ, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗ ವಹಿಸಲಿದ್ದಾರೆ ಎಂದರು.
ಸಮಿತಿ ಉಪಾಧ್ಯಕ್ಷರಾದ ಸಿವಿಲ್ ಎಂಜಿ ನಿಯರ್ ಕಾಪು ವಾಸುದೇವ ಶೆಟ್ಟಿ, ಸಂಗೀತ ಸಭಾ ಉಡುಪಿ ಅಧ್ಯಕ್ಷ ಟಿ. ರಂಗ ಪೈ, ವಿದ್ಯೋದಯ ಟ್ರಸ್ಟ್ ಕಾರ್ಯದರ್ಶಿ ಕೆ. ಗಣೇಶ್ ರಾವ್, ವಿ.ಹಿಂ.ಪ ಜಿಲ್ಲಾಧ್ಯಕ್ಷ ಪಿ.ವಿಷ್ಣುಮೂರ್ತಿ ಆಚಾರ್ಯ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಯಕ್ಷಗಾನ ಕಲಾರಂಗದ ಉಪಾಧ್ಯಕ್ಷ ಎಸ್.ವಿ.ಭಟ್, ಪ್ರಧಾನ ಕಾರ್ಯದರ್ಶಿ ಜಿ.ವಾಸುದೇವ ಭಟ್ ಪೆರಂಪಳ್ಳಿ, ಸಂಘಟನ ಕಾರ್ಯದರ್ಶಿ ಚಂದ್ರೇಶ್ ಪಿತ್ರೋಡಿ, ಸದಸ್ಯರಾದ ರಾಘವೇಂದ್ರ ಭಟ್, ಸತೀಶ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.