ಉಡುಪಿ: ಡೆಂಗ್ಯೂ ಪ್ರಕರಣದಲ್ಲಿ ಇಳಿಕೆ
Team Udayavani, Aug 15, 2017, 7:35 AM IST
ಉಡುಪಿ: ಜಿಲ್ಲೆಯಲ್ಲಿ 2016ರಲ್ಲಿ 360 ಡೆಂಗ್ಯೂ ಪ್ರಕರಣ ಕಂಡುಬಂದಿದ್ದು, ಈ ವರ್ಷ ವ್ಯಾಪಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಪ್ರಕರಣಗಳ ಸಂಖ್ಯೆ 232ಕ್ಕೆ ಇಳಿದಿದೆ ಹಾಗೂ ಯಾವುದೇ ಡೆಂಗ್ಯೂ ಸಂಶಯಾಸ್ಪದ ಸಾವು ಸಂಭವಿಸಿಲ್ಲ ಎಂದು ಜಿಲ್ಲಾ ಮಲೇರಿಯಾ ಅಧಿಕಾರಿ ಡಾ| ಪ್ರೇಮಾನಂದ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಡೆಂಗ್ಯೂ ನಿಯಂತ್ರಣ ಸಮಿತಿ ಸಭೆಗೆ ಮಾಹಿತಿ ನೀಡಿದರು.
ಕಟ್ಟಡ ಮಾಲಕರಿಗೆ ದಂಡ: ಎಚ್ಚರಿಕೆ
ಡೆಂಗ್ಯೂ ನಿಯಂತ್ರಣ ಕುರಿತಂತೆ ಜಿಲ್ಲೆಯ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು. ಸೊಳ್ಳೆ ಉತ್ಪತ್ತಿ ತಾಣಗಳಾದ ಕಲ್ಲುಕೋರೆಗಳಲ್ಲಿ ಸೊಳ್ಳೆ ಬೆಳವಣಿಗೆ ತಡೆಯಲು ಮೀನುಗಳನ್ನು ಬಿಡುವ ಕುರಿತಂತೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಕ್ರಮ ಕೈಗೊಳ್ಳುವಂತೆ ಹಾಗೂ ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುವ ಕಟ್ಟಡಗಳಲ್ಲಿ ಸೊಳ್ಳೆ ಉತ್ಪತ್ತಿ ಕಂಡುಬಂದರೆ ಅಂತಹ ಕಟ್ಟಡ ಮಾಲಕರಿಂದ ದಂಡ ವಸೂಲಿ ಮಾಡುವ ಕುರಿತ ನಿರ್ಣಯವನ್ನು ತಮ್ಮ ಬೈಲಾಗಳಲ್ಲಿ ಅಳವಡಿಸಿಕೊಳ್ಳುವಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚಿಸಿದರು.
ಜಿಲ್ಲೆಯ ಪ್ರತಿ ಮನೆ ಮನೆಗೆ ಹಾಗೂ ಶಾಲೆಗಳಲ್ಲಿ ಡೆಂಗ್ಯೂ ಕುರಿತು ಅರಿವು ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಆರೋಗ್ಯ ಇಲಾಖೆ ಹಾಗೂ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.