Udupi ಮಾನಹಾನಿ, ಜೀವ ಬೆದರಿಕೆ: ಆರೋಪ
Team Udayavani, Sep 13, 2023, 1:08 AM IST
ಉಡುಪಿ: ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ನನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಮಾನಹಾನಿ ಮಾಡಿದ್ದು ಮಾತ್ರವಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಜಿಲ್ಲಾ ಎಸ್‌ಪಿಗೆ ದೂರು ಸಲ್ಲಿಸಿದ್ದೇನೆ ಎಂದು ಬಿಜೆಪಿ ಅಲ್ಪಸಂಖ್ಯಾಕರ ಮೋರ್ಚಾದ ಜಿಲ್ಲಾಧ್ಯಕ್ಷ ದಾವುದ್ ಅಬುಬಕ್ಕರ್ ತಿಳಿಸಿದರು.
ನಕಲಿ ಚಿನ್ನ ಅಡವಿಟ್ಟು 20.62 ರೂ. ವಂಚಿಸಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಈ ಸಂಘದ ಸದಸ್ಯನೂ ಅಲ್ಲ ಮತ್ತು ಸಂಘದ ಕಚೇರಿ ಎಲ್ಲಿದೆ ಎಂಬುದೇ ನನಗೆ ತಿಳಿದಿಲ್ಲ. ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸೆ.5ರಂದು ನಾನು ಬೆಂಗಳೂರಿನಲ್ಲಿದ್ದೆ. ನನ್ನ ಕಾರು ಮಾರಾಟ ಮಾಡುವ ಸಂಬಂಧ ಮಹಮ್ಮದ್ ರಿಯಾಜ್ ಎಂಬುವರೊಂದಿಗೆ ಮಾತನಾಡಿದ್ದೆ. ನಾನು ಬೆಂಗಳೂರಿನಲ್ಲಿದ್ದಾಗ ಅವರು ನನ್ನ ಮನೆಗೆ ಹೋಗಿ ಕಾರಿನ ಕೀ ತೆಗೆದುಕೊಂಡು ಹೋಗಿದ್ದಾರೆ. ಅನಂತರ ಏನಾಯಿತು ಎಂಬುದು ಗೊತ್ತಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಬಿಜೆಪಿ ಅಲ್ಪಸಂಖ್ಯಾಕರ ಮೋರ್ಚಾದ ಗ್ರೇಟಾ, ಅಪ್ಸರ್ ಉಚ್ಚಿಲ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.