“ಮಹಿಳೆಯರು ಆಮಿಷಗಳಿಗೆ ಬಲಿಯಾಗದೆ ಮತ ಚಲಾಯಿಸಿ’
Team Udayavani, Mar 12, 2018, 6:45 AM IST
ಉಡುಪಿ: ಅದು ಪಲ್ಸ್ ಪೋಲಿಯೋ ಎರಡನೇ ಸುತ್ತಿನ ಕಾರ್ಯಕ್ರಮ. ಆದರೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಹಿಳೆಯರಲ್ಲಿ ಮತದಾನದ ಜಾಗೃತಿ ಮೂಡಿಸಲು ಪ್ರಯತ್ನಿಸಿದರು.
ಹೌದು. ಮಾ. 11ರಂದು ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜರಗಿದ ಪಲ್ಸ್ ಪೋಲಿಯೋ ಎರಡನೇ ಸುತ್ತಿನ ಕಾರ್ಯಕ್ರಮದ ಉದ್ಘಾಟನಾ ವೇದಿಕೆಯನ್ನು ಜಿಲ್ಲಾಧಿಕಾರಿಯವರು ಮಹಿಳಾ ಮತದಾರರಿಗೆ ಮತದಾನದ ಪಾಠ ಹೇಳಿಕೊಡಲು ಬಳಸಿಕೊಂಡರು. ಮಹಿಳೆಯರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.
ಸೀರೆ, ಮಿಕ್ಸಿ ಆಮಿಷ
ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ರಾಜಕೀಯ ಪಕ್ಷಗಳು ಸೀರೆ, ಮಿಕ್ಸಿ, ಕುಕ್ಕರ್ ಮೊದಲಾದ ವಸ್ತುಗಳನ್ನು ನೀಡುವ ಮೂಲಕ ಆಮಿಷ ಒಡ್ಡುತ್ತವೆ. ಆದರೆ ಮಹಿಳೆಯರು ರಾಜಕೀಯ ಪಕ್ಷಗಳ ಯಾವುದೇ ಆಮಿಷಗಳಿಗೆ ಒಳಗಾಗದೆ ಮುಕ್ತ ಮತ್ತು ನಿರ್ಭೀತಿಯಿಂದ ಮತ ಚಲಾಯಿಸಬೇಕು. ಎಂದು ಪ್ರಿಯಾಂಕಾ ಹೇಳಿದರು.
ಮತದಾನದ ಮೂಲಕ ಮಹಿಳೆಯರಿಗೆ ಸಮಾನತೆಯ ಹಕ್ಕು ದೊರೆತಿದೆ. ಈ ಹಕ್ಕನ್ನು ಯಾವುದೇ ಕಾರಣಕ್ಕೂ ರಾಜಕೀಯ ಪಕ್ಷಗಳ ಆಮಿಷಗಳಿಗೆ ಬಲಿ ಕೊಡಬಾರದು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬೇಕು. ಹೆಸರು ಇಲ್ಲದಿದ್ದರೆ ಸೇರಿಸಲು ಈಗಲೂ ಅವಕಾಶವಿದೆ. ಪ್ರತಿಯೊಬ್ಬ ಮಹಿಳೆ ಮತ ಚಲಾಯಿಸಬೇಕು. ಯೋಗ್ಯ ವ್ಯಕ್ತಿಗೆ ಮತ ನೀಡಿ. ಪ್ರಜಾಪ್ರಭುತ್ವ ನೀಡಿರುವ ಅಧಿಕಾರ ಚಲಾಯಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.
ಪ್ರತಿಜ್ಞಾ ವಿಧಿ
ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಎಲ್ಲರಿಗೂ ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗದೇ ಮತ ಚಲಾಯಿಸುವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಪಕ್ಷಗಳ ವಾಹನ ಬಳಸಬೇಡಿ
ಈ ಬಾರಿ ಯಾವುದೇ ಬಾಹ್ಯ ಹಸ್ತಕ್ಷೇಪಗಳಿಲ್ಲದೆ ನಿಯಮಬದ್ಧವಾಗಿ ಮತದಾನಕ್ಕೆ ಚುನಾವಣಾ ಆಯೋಗ ಹೆಚ್ಚಿನ ಒತ್ತು ನೀಡಿದ್ದು ಯಾರೂ ಕೂಡ ಯಾವುದೇ ಆಮಿಷ, ಒತ್ತಡಗಳಿಗೆ ಒಳಗಾಗಬಾರದು. ತಮ್ಮ ಮನಸಾಕ್ಷಿಗೆ ಯೋಗ್ಯ ಅನ್ನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಮನೆಯಲ್ಲಿರುವ ಅಶಕ್ತ ಮತ್ತು ಅಂಗವಿಕಲರು ಕೂಡ ಮತ ಚಲಾವಣೆಗೆ ಅನುಕೂಲವಾಗುವಂತೆ ಜಿಲ್ಲಾಡಳಿತದಿಂದಲೇ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ. ರಾಜಕೀಯ ಪಕ್ಷಗಳು ಕಳುಹಿಸುವ ವಾಹನಗಳನ್ನು ಕೂಡ ಬಳಸಬೇಡಿ. ಮತಗಟ್ಟೆಗಳಲ್ಲಿಯೂ ರೋಗಿಗಳು, ವೃದ್ಧರು ಮತ್ತು ವಿಕಲಚೇತನರಿಗೆ ಎಲ್ಲ ರೀತಿಯ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು.
– ಪ್ರಿಯಾಂಕಾ ಮೇರಿ ಫ್ರಾನ್ಸಿಸ್,
ಉಡುಪಿ ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.