ಉಡುಪಿ ಜಿಲ್ಲೆಯ ಅಭಿವೃದ್ಧಿ ಕಾಮಗಾರಿ 8.60 ಕೋ.ರೂ. ಬಿಡುಗಡೆ: ಸಚಿವ ರವಿ
Team Udayavani, Oct 1, 2019, 6:56 PM IST
ಉಡುಪಿ: ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 16 ಕೋ.ರೂ. ಅನುದಾನದಲ್ಲಿ 8.60 ಕೋ.ರೂ. ಬಿಡುಗಡೆಯಾಗಿದೆ ಎಂದು ಸಚಿವ ಸಿ.ಟಿ. ರವಿ ಹೇಳಿದರು.
ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದೆ. ವಿಶ್ವ ಪಾರಂಪರಿಕ ತಾಣಗಳು, ನ್ಯಾಷನಲ್ ಪಾರ್ಕ್‌ಗಳು, ಜಲಪಾತಗಳು ಸಹಿತ ಸುಮಾರು 1,500ಕ್ಕೂ ಅಧಿಕ ಕೇಂದ್ರ, ರಾಜ್ಯ ಪುರಾತತ್ವ ಇಲಾಖೆ ವ್ಯಾಪ್ತಿಯಲ್ಲಿರುವ ಪಾರಂಪರಿಕ ತಾಣಗಳಿವೆ. ಇವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕು. ಜನರು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಲು ಯೋಜನೆಗಳನ್ನು ರೂಪಿಸಲಾಗುವುದು. ಸಂಸ್ಕೃತಿಯನ್ನು ಪಸರಿಸುವ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುವುದು ಎಂದರು.
ಉದ್ಯೋಗಾವಕಾಶಗಳ ಭರ್ತಿಗೆ ಯತ್ನ
ಸಚಿವನಾದ ಅನಂತರ ಇಲ್ಲಿಯವರೆಗೆ 12 ಜಿಲ್ಲೆಗಳಿಗೆ ಪ್ರವಾಸ ಮಾಡಿ ವಿವಿಧ ಸಮಸ್ಯೆಗಳನ್ನು ಆಲಿಸಿದ್ದೇನೆ. ರಾಜ್ಯದ ವಿವಿಧ ಇಲಾಖೆಗಳಲ್ಲಿನ ಶೇ. 81ರಷ್ಟು ಉದ್ಯೋಗಾವಕಾಶಗಳು ಖಾಲಿಯಿವೆ. ಈ ಬಗ್ಗೆ ಪರಿಣಿತರಲ್ಲಿ ಚರ್ಚಿಸಿ ಶೀಘ್ರ ಉದ್ಯೋಗಾವಕಾಶಗಳ ಭರ್ತಿಗೆ ಯತ್ನಿಸಲಾಗುವುದು ಎಂದರು.
ಅಂತಾರಾಷ್ಟ್ರೀಯ ಕ್ರೀಡೆಯಾಗಿ ಕಂಬಳ
ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಯೋಜನೆಗಳ ಉತ್ತೇಜನಕ್ಕೆ ಹಲವಾರು ಯೋಜನೆಗಳು ಆರಂಭಿಕ ಹಂತದಲ್ಲಿವೆ. ಮುಖ್ಯವಾಗಿ ಕಂಬಳವನ್ನು ಅಂತಾರಾಷ್ಟ್ರೀಯ ಕ್ರೀಡೆಯನ್ನಾಗಿ ರೂಪಿಸಲು ವಿಪುಲ ಅವಕಾಶ ಇದೆ. ಪ್ರವಾಸಿಗರಿಗೆ ಇದರತ್ತ ಮತ್ತಷ್ಟು ಆಕರ್ಷಿತರಾಗುವಂತೆ ಮಾಡಬೇಕು. ರಾಜ್ಯಾದ್ಯಂತ ರೂಪುರೇಷೆ ಸಿದ್ಧಪಡಿಸಿ, ಪ್ರವಾಸಿಗರು ಯಾವ ಸಮಯದಲ್ಲಿ ಬಂದರೆ ಅನುಕೂಲ ಎಂಬ ಬಗ್ಗೆ ಮಾಹಿತಿಯನ್ನು ಆಯಾಯ ಪ್ರದೇಶವಾರು ರೂಪಿಸಲಾಗುವುದು.
ಪ್ರವಾಸಿ ತಾಣಗಳ ಅಭಿವೃದ್ಧಿ
ಪ್ರವಾಸೋದ್ಯಮಕ್ಕೆ ಸಮಗ್ರ ಯೋಜನೆ ರೂಪಿಸುವ ನಿಟ್ಟಿನಲ್ಲಿ ಧಾರ್ಮಿಕ ಕ್ಷೇತ್ರಗಳ ಜತೆಗೆ ಇರುವ ಪ್ರವಾಸಿ ತಾಣಗಳನ್ನು ಸಂಪರ್ಕಿಸುವಂತೆ ಮಾಡಲಾಗುವುದು. ಈ ಮೂಲಕ ವ್ಯಾಪಾರ ವಹಿವಾಟು ಸಹಿತ ಇತರ ಅಭಿವೃದ್ಧಿ ಚಟುವಟಿಕೆಗಳು ಚುರುಕುಗೊಳ್ಳುವಂತೆ ಮಾಡಲಾಗುವುದು. ಐತಿಹಾಸಿಕ ಸ್ಮಾರಕ ತಾಣ ಮತ್ತು ಸ್ಮಾರಕಗಳನ್ನು ಉಳಿಸಲು ಅವುಗಳ ನಿರ್ವಹಣೆಯನ್ನು ಕೆಲವು ಎನ್‌ಜಿಒ ಸಂಸ್ಥೆಗಳಿಗೆ ನೀಡಲಾಗುವುದು.
ಪರಿಹಾರ ಪ್ರಕ್ರಿಯೆ ಶೀಘ್ರ ಪೂರ್ಣ
ಅತಿವೃಷ್ಟಿ ಹಾನಿಗೀಡಾದ 10 ರಾಜ್ಯಗಳಿಗೆ ಮಧ್ಯಂತರ ಪರಿಹಾರ ನೀಡಲಾಗಿದೆ. ಫಲಾನುಭವಿಗಳಿಗೆ ನೇರವಾಗಿ ಸವಲತ್ತು ಸಿಗುವಂತಾಗಲು ಅವರ ಖಾತೆಗೆ ನೇರವಾಗಿ ಜಮೆ ಮಾಡುವ ಕೆಲಸ ನಡೆಯುತ್ತಿದೆ. ಈ ಪ್ರಕ್ರಿಯೆ ಎಲ್ಲ ರಾಜ್ಯಗಳಿಗೂ ಅನ್ವಯವಾಗಲಿದ್ದು, ಯಾರಿಗೂ ತಾರತಮ್ಯ ಮಾಡಲಾಗಿಲ್ಲ. ಮತ್ತಷ್ಟು ಪರಿಹಾರಕ್ಕೆ ಬೇಡಿಕೆ ಬಂದಲ್ಲಿ ಮುಖ್ಯಮಂತ್ರಿಗಳು, ಸಚಿವ, ಶಾಸಕರೊಂದಿಗೆ ಪ್ರಧಾನಿ ಇತೆಗೆ ಚರ್ಚಿಸಲೂ ಸಿದ್ಧ ಎಂದರು.
ಶಾಸಕರಾದ ರಘುಪತಿ ಭಟ್, ಲಾಲಾಜಿ ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.