ಮರಳು ಸಮಸ್ಯೆ: ನ. 10ರಂದು ಉಡುಪಿ ಜಿಲ್ಲೆ ಬಂದ್
Team Udayavani, Nov 1, 2018, 10:57 AM IST
ಉಡುಪಿ: ಮರಳುಗಾರಿಕೆ ಪೂರ್ಣ ಪ್ರಮಾಣದಲ್ಲಿ ಆರಂಭವಾಗುವವರೆಗೆ ಅನಿರ್ದಿಷ್ಟಾವಧಿ ಧರಣಿ ಕೈಬಿಡುವುದಿಲ್ಲ. ನ. 10ರಂದು ಉಡುಪಿ ಜಿಲ್ಲಾ ಬಂದ್‌ಗೆ ಕರೆ ನೀಡುತ್ತಿದ್ದೇವೆ ಎಂದು ಶಾಸಕ ರಘುಪತಿ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮರಳು ಮುಷ್ಕರದ ಏಳನೇ ದಿನವಾದ ಬುಧವಾರ ಸರ್ವ ಸಂಘಟನೆಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್‌ಝಡ್ ಮತ್ತು ನಾನ್ ಸಿಆರ್‌ಝಡ್ ವ್ಯಾಪ್ತಿಯ ಎಲ್ಲ 171 ಮಂದಿ ಗುತ್ತಿಗೆದಾರರಿಗೆ ಮರಳು ತೆಗೆಯಲು ಅನುಮತಿ ನೀಡಬೇಕು ಎನ್ನುವುದು ನಮ್ಮ ಆಗ್ರಹವಾಗಿದೆ. ಆದರೆ ಜಿಲ್ಲಾಧಿಕಾರಿಗಳು ಮರಳು ಸಮಸ್ಯೆಯನ್ನು ಕಗ್ಗಂಟು ಮಾಡುತ್ತಿದ್ದಾರೆ. ಈ ಹಿನ್ನೆಲೆ ನ. 10ರಂದು ಜಿಲ್ಲಾ ಬಂದ್ ಮಾಡಲಾಗುವುದು. ಆ ಬಳಿಕ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಅಂಗಡಿ ಮುಂಗಟ್ಟುಗಳು, ಸಾರಿಗೆ ವ್ಯವಸ್ಥೆ, ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಇದಕ್ಕೆ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ ಎಂದರು.
ಕಗ್ಗಂಟಾಗಿಸುವ ಯತ್ನ
ಅ. 25ರಂದು ಪ್ರತಿಭಟನೆ ಆರಂಭಿಸಿದಾಗ ಜಿಲ್ಲಾಧಿಕಾರಿಗಳು ನಮ್ಮೊಂದಿಗೆ ಬೇರೆ ಮರಳು ದಿಬ್ಬಗಳನ್ನು ಗುರುತಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದಿದ್ದರು. ಇದರಲ್ಲಿ 2011ರ ಪೂರ್ವ ಮತ್ತು ಅನಂತರದ ಯಾವುದೇ ವಿಚಾರವನ್ನು ಪ್ರಸ್ತಾವಿಸಿಲ್ಲ. ಅ. 26ರಂದು ಅಪರ ಜಿಲ್ಲಾಧಿಕಾರಿಗಳು “ರಾಜ್ಯ ಸರಕಾರದಿಂದ ಆದೇಶ ಬಂದಿದೆ, 2011ರ ಪೂರ್ವದ 93 ಮಂದಿಗೆ ಮಾತ್ರ ಮರಳು ತೆಗೆಯಲು ಪರವಾನಿಗೆ ನೀಡಲಾಗುತ್ತದೆ’ ಎಂದು ತಿಳಿಸಿದ್ದಾರೆ. ಇದೆಲ್ಲ ಪರಿಸ್ಥಿತಿಯನ್ನು ಕಗ್ಗಂಟು ಮಾಡುವ ಯತ್ನವೆಂದು ಭಟ್ ಆರೋಪಿಸಿದರು.
ಜಿಲ್ಲಾಡಳಿತ ಅನುಷ್ಠಾನ ಮಾಡಿಲ್ಲ
ಮರಳು ಸಮಸ್ಯೆಯಲ್ಲಿ ಸಿಎಂ ನೀಡಿದ ಸೂಚನೆಯನ್ನು ಜಿಲ್ಲಾಡಳಿತ ಅನುಷ್ಠಾನ ಮಾಡಿಲ್ಲ. ಅ. 15ರೊಳಗೆ ಮರಳು ಸಮಸ್ಯೆ ಇತ್ಯರ್ಥ ಮಾಡು ವುದಾಗಿ ಸರಕಾರ ಮತ್ತು ಜಿಲ್ಲಾಡಳಿತ ತಿಳಿಸಿತ್ತು. ಈಗ ಈ ಕಾರ್ಯ ನಡೆಯದಕ್ಕೆ ಜಿಲ್ಲಾಧಿಕಾರಿಯನ್ನು ಹೊಣೆ ಮಾಡುವುದನ್ನು ಬಿಟ್ಟು ನಮ್ಮ ವಿರುದ್ಧ ಆಕ್ರೋಶ ವ್ಯಕ್ತ ಮಾಡುವುದು ತಪ್ಪು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶಾಸಕರಾದ ಲಾಲಾಜಿ ಮೆಂಡನ್, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಜಿ.ಪಂ. ಉಪಾಧ್ಯಕ್ಷೆ ಶಿಲ್ಪಾ ಶೆಟ್ಟಿ, ಹೊಯಿಗೆ ದಕ್ಕೆ ಮಾಲಕರ ಸಂಘ ಅಧ್ಯಕ್ಷ ಸುಧಾಕರ್ ಅಮೀನ್, ಶ್ಯಾಮಲಾ ಕುಂದರ್ ಪತ್ರಿಕಾಗೋಷ್ಠಿಯಲ್ಲಿದ್ದರು.
ಧರಣಿ ಸ್ಥಳದಲ್ಲಿ ರಾಜ್ಯೋತ್ಸವ
ಗುರುವಾರ ಕರ್ನಾಟಕ ರಾಜ್ಯೋತ್ಸವವನ್ನು ಧರಣಿ ಸ್ಥಳದಲ್ಲಿಯೇ ಆಚರಿಸಲಾಗುವುದು.
ರಘುಪತಿ ಭಟ್, ಶಾಸಕರು
ಕೇಂದ್ರಕ್ಕೆ ನಿಯೋಗ
ಕೇಂದ್ರ ಪರಿಸರ ಇಲಾಖೆ ಜತೆ ನಾವು ಮಾತುಕತೆ ನಡೆಸುತ್ತಿದ್ದು ಸದಾನಂದ ಗೌಡರ ಮೂಲಕ ಸಚಿವರ ಭೇಟಿಗೆ ಪ್ರಯತ್ನಿಸುತ್ತಿದ್ದೇವೆ. ಕೆ. ಜಯಪ್ರಕಾಶ್ ಹೆಗ್ಡೆ ಮತ್ತು ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕರ ನಿಯೋಗ ದಿಲ್ಲಿಗೆ ತೆರಳಿ ಈ ಸಂಬಂಧ ಚರ್ಚೆ ನಡೆಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.