ಬಜೆಟ್ ನಿರೀಕ್ಷೆಗಳು : ಉಡುಪಿ ಜಿಲ್ಲೆಗೆ ಬೇಕಿದೆ ಸರಕಾರಿ ವೈದ್ಯ ಕಾಲೇಜು
Team Udayavani, Jan 28, 2021, 7:45 AM IST
ರಾಜ್ಯ ಬಜೆಟ್‌ಗೆ ಸರ್ವ ತಯಾರಿ ನಡೆಯುತ್ತಿದ್ದು, ಉಡುಪಿ ಜಿಲ್ಲೆಯ ಬೇಡಿಕೆಯ ಪಟ್ಟಿಯೂ ಬೆಳೆಯುತ್ತಿದೆ. ಈ ಬಾರಿಯ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಯ ನಿರೀಕ್ಷೆಗಳೂ ಬಹಳಷ್ಟಿವೆ.
- ರೈತರ ಆಶಾಕಿರಣವಾಗಿದ್ದ ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಸ್ಥಗಿತದಿಂದ ಸಾವಿರಾರು ಮಂದಿ ಕೃಷಿಕರು ತೊಂದರೆಗೊಳಗಾಗಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಾದರೂ ಕಾರ್ಖಾನೆ ಪುನರಾರಂಭದ ನಿರೀಕ್ಷೆ ಈಡೇರಲಿದೆಯೇ? ಎಂಬ ಕಾತರಜಿಲ್ಲೆಯ ಜನರದ್ದು.
ತಲಾ ಆದಾಯ : 2,65,955 ರೂಪಾಯಿ
- ಶೈಕ್ಷಣಿಕವಾಗಿ ಜಿಲ್ಲೆ ಮುಂದುವರಿದಿದ್ದರೂ ಜಿಲ್ಲೆಗೊಂದು ಸರಕಾರಿ ವೈದ್ಯಕೀಯ ಕಾಲೇಜು ಇಲ್ಲ ಎಂಬ ಕೊರಗು ಹಲವಾರು ವರ್ಷಗಳಿಂದಲೂ ಕಾಡುತ್ತಲೇ ಇದೆ. ಕಳೆದ ಬಜೆಟ್‌ನಲ್ಲಿಯೂ ಈ ಬಗ್ಗೆ ನಿರೀಕ್ಷೆ ಇತ್ತಾದರೂ ಈಡೇರಿರಲಿಲ್ಲ.
ಕಳೆದ ಬಜೆಟ್‌ನಲ್ಲಿ ಯೋಜನಾ ವೆಚ್ಚ : 1.33%
- ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಪ್ರತ್ಯೇಕ ಮೀನುಗಾರಿಕಾ ನೀತಿ ರಚಿಸಿ ಮೀನುಗಾರರ ಬವಣೆ ನೀಗಿಸುವಂತೆ ಈಗಾಗಲೇ ಹಲವೆಡೆಗಳಿಂದ ಬೇಡಿಕೆ ವ್ಯಕ್ತವಾಗುತ್ತಿದೆ.
ಸಚಿವರ ಸಂಖ್ಯೆ : 1
- ಬೈಂದೂರು ಹಾಗೂ ಕೊಲ್ಲೂರಿನ ಸಮಗ್ರ ಅಭಿವೃದ್ಧಿ ದೃಷ್ಟಿಕೋನದಿಂದ ಉಡಾನ್ ಯೋಜನೆಯಡಿ ಬೈಂದೂರಿನಲ್ಲೊಂದು ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ ಚಿಂತನೆಗಳೂ ನಡೆಯುತ್ತಿವೆ. ಈ ಬಗ್ಗೆ ಬಜೆಟ್‌ನಲ್ಲಿ ಅಧಿಕೃತವಾಗಿ ಪ್ರಕಟನೆಯಾದರೆ ಅಭಿವೃದ್ಧಿಯ ಆಶಾವಾದಕ್ಕೆ ಹೊಸ ಹುರುಪು ಬರಲಿದೆ.
ಮಾನವ ಅಭಿವೃದ್ಧಿ ಸೂಚ್ಯಂಕ ರ್‍ಯಾಂಕ್ : 12
- ಪಡುಕೆರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಹು ಕೋಟಿ ವೆಚ್ಚದ ಮರೀನಾ ಯೋಜನೆ ಘೋಷಣೆಯ ಬಗ್ಗೆಯೂ ಈ ಬಾರಿಯ ಬಜೆಟ್‌ನಲ್ಲಿ ನಿರೀಕ್ಷೆ ಹೊಂದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.