Udupi: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
Team Udayavani, Nov 1, 2024, 1:20 PM IST
ಉಡುಪಿ: 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ (ನ.01) ಪ್ರದಾನ ಮಾಡಲಾಯಿತು.
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್, ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ. ಅರುಣ್, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಮೊದಲಾದವರು ಹಾಜರಿದ್ದರು.
ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಪಾಧ್ಯಕ್ಷ ಬಾಲಕೃಷ್ಣ ಉಚ್ಚಿಲ, ಕಾರ್ಯದರ್ಶಿ ರಹೀಂ ಉಜಿರೆ, ಪ್ರಮೋದ್ ಸುವರ್ಣ, ರಾಜೇಶ್ ಅಚ್ಲಾಡಿ, ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ, ಜತೆ ಕಾರ್ಯದರ್ಶಿ ದೀಪಕ್ ಜೈನ್, ಸಂಘದ ಮಾಜಿ ಅಧ್ಯಕ್ಷ ದಿನೇಶ್ ಕಿಣಿ, ಕುಂದಾಪುರ ತಾಲೂಕು ಅಧ್ಯಕ್ಷ ನಾಗರಾಜ್ ರಾಯಪ್ಪನಮಠ, ಹೆಬ್ರಿ ತಾಲೂಕು ಅಧ್ಯಕ್ಷ ಸುಕುಮಾರ್ ಮುನಿಯಾಲು ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.