Udupi; ಕೈಮಗ್ಗ ಮೇಳಕ್ಕೆ ಪುತ್ತಿಗೆ ಶ್ರೀಪಾದರಿಂದ ಚಾಲನೆ

Team Udayavani, Aug 1, 2024, 4:36 PM IST

Udupi; ಕೈಮಗ್ಗ ಮೇಳಕ್ಕೆ ಪುತ್ತಿಗೆ ಶ್ರೀಪಾದರಿಂದ ಚಾಲನೆ

ಉಡುಪಿ: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ವತಿಯಿಂದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಕೈಮಗ್ಗ ಸೀರೆಗಳ ಮೌಲ್ಯವರ್ಧನೆ ಮತ್ತು ಉನ್ನತೀಕರಣಕ್ಕಾಗಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಶ್ರೀಕೃಷ್ಣಮಾಸೋತ್ಸವ ಪ್ರಯುಕ್ತ ರಾಜಾಂಗಣದಲ್ಲಿ ಅ. 11ರ ವರೆಗೆ ಹಮ್ಮಿಕೊಂಡಿರುವ ಕೈಮಗ್ಗ ಸೀರೆಗಳ ಉತ್ಸವ – 2024ಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಚಾಲನೆ ನೀಡಿ ಅನುಗ್ರಹಿಸಿದರು.

ಆಧುನಿಕ ಸೀರೆಗಳು ನೋಡಲು ಚಂದ ಇರಬಹುದು ಆದರೆ ಅಲ್ಪಕಾಲ ಮಾತ್ರ ಬಾಳಿಕೆ ಬರುವಂತದ್ದು, ಕೈಮಗ್ಗದ ಸೀರೆಗಳು ಸಾಂಪ್ರದಾಯಿಕವಾಗಿಯೂ ದೀರ್ಘ‌ಕಾಲ ಬಾಳಿಕೆಗೆ ಬರುವಂತದ್ದಾಗಿದೆ. ಸೀರೆಯುವ ಭಾರತೀಯ ಸಾಂಸ್ಕೃತಿ ಮೌಲ್ಯದ ರಕ್ಷಕವಾಗಿದೆ. ದೇವತೆಗಳು ಸೀರೆಯಲ್ಲೇ ಕಾಣಿಸಿಕೊಂಡಿದ್ದಾರೆ. 16,108 ಸಾವಿರ ಸೀರೆ ಮಾರಾಟ ಆಗುವಂತಾಗಲಿ ಎಂದು ಹರಸಿದರು.

ಪೌರಾಯುಕ್ತ ರಾಯಪ್ಪ, ಉಡುಪಿ ಚೇಂಬರ್‌ ಆಫ್ ಕಾಮರ್ಸ್‌ ಆ್ಯಂಡ್‌ ಇಂಡಸ್ಟ್ರಿ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್‌, ಡೆಂಟಾ ಕೇರ್‌ನ ಡಾ| ವಿಜಯೇಂದ್ರ ರಾವ್‌, ಉಜ್ವಲ್‌ ಡೆವಲಪರ್ ನ ಅಜಯ್‌ ಪಿ.ಶೆಟ್ಟಿ, ಪಾಟೀಲ್‌ ಸ್ಟೋರ್ ನ ಗಣೇಶ್‌ ಪಾಟೀಲ್‌, ನಗರಸಭೆ ಸದಸ್ಯರಾದ ರಜನಿ ಹೆಬ್ಬಾರ್‌, ಟಿ.ಜಿ. ಹೆಗ್ಡೆ, ಉದ್ಯಮಿ ಹರಿಯಪ್ಪ ಕೋಟ್ಯಾನ್‌, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ರಮೇಶ್‌ ಭಟ್‌, ಉಪಾಧ್ಯಕ್ಷರಾದ ಮಂಜುನಾಥ ಮಣಿಪಾಲ, ಸರೋಜಾ ಯಶವಂತ್‌, ಕಾರ್ಯದರ್ಶಿ ಅವಿನಾಶ್‌ ಮಾರ್ಪಳ್ಳಿ, ಪದಾಧಿಕಾರಿಗಳಾದ ಅಶೋಕ್‌ ಶೆಟ್ಟಿಗಾರ್‌ ಅಲೆವೂರು, ವಿಟ್ಠಲ ಶೆಟ್ಟಿಗಾರ್‌, ರಾಜಕೇಸರಿ, ಶ್ರೀನಿವಾಸ ಶೆಟ್ಟಿಗಾರ್‌ ಬೈಲೂರು ಉಪಸ್ಥಿತರಿದ್ದರು.

ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್‌ ಇಂದ್ರಾಳಿ ಪ್ರಸ್ತಾವನೆಗೈದರು. ಆಯೋಜನ ಸಮಿತಿ ಅಧ್ಯಕ್ಷ ಡಾ| ಚಂದನ್‌ ಶೆಟ್ಟಿಗಾರ್‌ ಸ್ವಾಗತಿಸಿ, ಸದಾಶಿವ ಗೋಳಿಜಾರು ನಿರೂಪಿಸಿದರು.

ಕೈಮಗ್ಗ ಸೀರೆ ಪ್ರದರ್ಶನ
ಉದ್ಘಾಟನೆಯ ಅನಂತರ ಪುತ್ತಿಗೆ ಶ್ರೀಪಾದರು ಮಳಿಗೆಗಳಿಗೆ ಭೇಟಿ ನೀಡಿ ಕೈಮಗ್ಗಗಳಿಂದ ಸಿದ್ಧಪಡಿಸಿದ ಸೀರೆಗಳನ್ನು ವೀಕ್ಷಿಸಿದರು. ಉಡುಪಿ, ಮಂಗಳೂರು, ಇಳಿಕಲ್‌, ದೊಡ್ಡಬಳ್ಳಾಪುರ, ಜಮಖಂಡಿ, ಚನ್ನರಾಯಪಟ್ಟಣ, ಚಾಮರಾಜನಗರ, ಕೊಳ್ಳೇಗಾಲ, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದ 30ಕ್ಕೂ ಅಧಿಕ ಕೈಮಗ್ಗ ಸೀರೆಗಳ ಉತ್ಪಾದಕರು ಮತ್ತು ಮಾರಾಟಗಾರರು ಭಾಗವಹಿಸಿದ್ದಾರೆ.

ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಬರುತ್ತಿವೆ. ಕೆಲವು ದೇವಸ್ಥಾನಗಳು ಈಗಾಗಲೇ ವಸ್ತ್ರಸಂಹಿತೆ ಜಾರಿಗೆ ತಂದಿದೆ. ಕೆಲವು ದೇವಸ್ಥಾನಗಳು ವಸ್ತ್ರಸಂಹಿತೆ ಜಾರಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿವೆ. ಉಡುಪಿ ಶ್ರೀ ಕೃಷ್ಣಮಠದಲ್ಲೂ ವಸ್ತ್ರಸಂಹಿತೆ ಜಾರಿ ಮಾಡಬೇಕು ಎಂಬ ಒತ್ತಡ ಇದೆ. ವಸ್ತ್ರಸಂಹಿತೆ ಜಾರಿ ಮಾಡುವುದರಿಂದ ದೇವಸ್ಥಾನಕ್ಕೆ ಸೀರೆ ಉಟ್ಟು ಬರುವವರ ಸಂಖ್ಯೆ ಹೆಚ್ಚಲಿದೆ. ಇದರಿಂದ ಸೀರೆ ಉದ್ಯಮವೂ ಬೆಳೆಯಲಿದೆ ಎಂದು ಶ್ರೀಪಾದರು ಹೇಳಿದರು.

ಚಿತ್ರಗಳು : ಆಸ್ಟ್ರೋ ಮೋಹನ್

ಟಾಪ್ ನ್ಯೂಸ್

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.