ಉಡುಪಿ: “ಮಧ್ವಾಂಗಣ’ ನಿರ್ಮಾಣಕ್ಕೆ ಚಾಲನೆ
Team Udayavani, Sep 10, 2017, 7:35 AM IST
ಉಡುಪಿ: ಶ್ರೀಕೃಷ್ಣ ಮಠದ ಎಲ್ಲ ಕಾರ್ಯಕ್ರಮಗಳಿಗೆ ವೇದಿಕೆಯಾಗುವ ರಾಜಾಂಗಣದ ನವೀಕರಣ ಹಾಗೂ ರಾಜಾಂಗಣದ ಮಾದರಿಯಲ್ಲೇ ಅದರ ಮೇಲೆ ಮೊದಲ ಮಹಡಿ ನಿರ್ಮಾಣಗೊಳ್ಳಲಿದ್ದು, ಅದಕ್ಕೆ ಮಧ್ವಾಂಗಣ ಎಂದು ಹೆಸರಿಡಲಾಗಿದೆ. ಅಲ್ಲಿವರೆಗೆ ಮಠದ ಕಾರ್ಯಕ್ರಮಗಳಿಗೆ ತಾತ್ಕಾಲಿಕ ರಾಜಾಂಗಣವನ್ನು ಪಾರ್ಕಿಂಗ್ ಸ್ಥಳದಲ್ಲಿ ನಿರ್ಮಿಸಲಾಗಿದೆ.
ಮೊದಲ ಮಹಡಿಯ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಸ್ಥಳೀಯ ಎಂಜಿನಿಯರ್ ನೇತೃತ್ವದಲ್ಲಿ ಬೆಂಗಳೂರಿನ ಮೆಟಲ್ ಕರ್ಮ ಕಂಪೆನಿ ಮಹಡಿ ನಿರ್ಮಾಣದ ಜವಾಬ್ದಾರಿ ವಹಿಸಿಕೊಂಡಿದೆ. ಮಧ್ವಾಂಗಣವೂ ಕಾರ್ಯಕ್ರಮ ಆಯೋಜನೆ, ವಿಶೇಷ ದಿನಗಳಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆಗೆ ಅನುಕೂಲವಾಗುವಂತೆ ನಿರ್ಮಾಣವಾಗಲಿದೆ.
ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳಿಗೂ ವೇದಿಕೆಯಾಗಲಿದೆ. ಶ್ರೀಕೃಷ್ಣ ಮಠದ ಪ್ರಮುಖ ಅನ್ನಛತ್ರವಾಗಿರುವ ಅನ್ನಬ್ರಹ್ಮದಿಂದ ನೇರವಾಗಿ ಮಧ್ವಾಂಗಣಕ್ಕೆ ಪ್ರವೇಶಿಸಲು ಕನೆಕ್ಟಿಂಗ್ ಬ್ರಿಜ್ ನಿರ್ಮಾಣಗೊಳ್ಳಲಿದೆ.
ತಾತ್ಕಾಲಿಕ ಸಭಾಂಗಣ
ನೂತನ ಮಧ್ವಾಂಗಣ ನಿರ್ಮಾಣದ ಕಾಮಗಾರಿಯ ಸಲುವಾಗಿ ಮಠದ ಪಾರ್ಕಿಂಗ್ ಸ್ಥಳದಲ್ಲಿ ತಾತ್ಕಾಲಿಕ ರಾಜಾಂಗಣವನ್ನು ನಿರ್ಮಿಸಲಾಗಿದ್ದು, ನೂತನ ಸಭಾಂಗಣವನ್ನು ಪರ್ಯಾಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಶನಿವಾರ ಉದ್ಘಾಟಿಸಿದರು. ಸೆ. 13, 14ರಂದು ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ, ವಿಟ್ಲ
ಪಿಂಡಿಯ ಎಲ್ಲ ಸಾಂಸ್ಕೃತಿಕ ಕಾರ್ಯಕ್ರಮಗಳು ತಾತ್ಕಾಲಿಕ ಸಭಾಂಗಣದಲ್ಲಿ ನಡೆಯಲಿವೆ.
2 ತಿಂಗಳಲ್ಲಿ ಪೂರ್ಣ
ಮುಂದಿನ 2 ತಿಂಗಳಲ್ಲಿ ಅಂದರೆ ನವೆಂಬರ್ ಮೊದಲ ವಾರದಲ್ಲಿ ಮಹಡಿಯ ಕಾಮಗಾರಿ ಪೂರ್ಣಗೊಳ್ಳಲಿದೆ. ನ. 24ರಿಂದ 26ರ ವರೆಗೆ ನಡೆಯುವ ಧರ್ಮ ಸಂಸತ್ ಮತ್ತು ಇತರ ಪ್ರಮುಖ ಕಾರ್ಯಕ್ರಮಗಳು ನಡೆಯಲಿರುವ ಕಾರಣ
ತ್ವರಿತಗತಿಯಲ್ಲಿ ಪೂರ್ಣಗೊಳ್ಳುವುದು ಅನಿವಾರ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.