ಉಡುಪಿ: ದುರ್ಗಾದೌಡ್: ತಲವಾರು ಪ್ರದರ್ಶನ, ಪ್ರಚೋದನಕಾರಿ ಭಾಷಣ; 2 ಪ್ರತ್ಯೇಕ ಪ್ರಕರಣ ದಾಖಲು
Team Udayavani, Oct 14, 2022, 6:58 AM IST
ಉಡುಪಿ: ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶನ ಹಾಗೂ ಸಾರ್ವಜನಿಕ ಸಭೆಯಲ್ಲಿ ಮಾಡಿರುವ ಪ್ರಚೋದನಕಾರಿ ಭಾಷಣದ ವಿರುದ್ಧ ಎರಡು ಪ್ರತ್ಯೇಕ ಪ್ರಕರಣಗಳು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.
ಅ. 2ರಂದು ಅಪರಾಹ್ನ 3.30ಕ್ಕೆ ಕಡಿಯಾಳಿಯಿಂದ ಹೊರಟು ಉಡುಪಿ ನಗರದಲ್ಲಿ ಸಾಗಿದ ದುರ್ಗಾ ದೌಡ್ ಮೆರವಗೆಯಲ್ಲಿ ಸುಮಾರು 10-15 ಮಂದಿಯ ಗುಂಪು ಅಕ್ರಮವಾಗಿ ಮಾರಕಾಸ್ತ್ರವಾದ ತಲವಾರು ಪ್ರದರ್ಶಿಸಿದ್ದು, ತ್ರಿವೇಣಿ ಸರ್ಕಲ್ ಬಳಿ ಆಗಮಿಸಿ ಮೆರವಣಿಗೆಯಲ್ಲಿ ತಲವಾರು ಹಿಡಿದು ತಾಲೀಮು ನಡೆಸಿ ಭಯ ಹುಟ್ಟಿಸುವ ದುಷ್ಕೃತ್ಯ ಎಸಗಿದ್ದಾರೆ ಎಂದು ಹುಸೈನ್ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅದೇ ದಿನ ಸಂಜೆ 6 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದ ಎದುರು ಇರುವ ಖಾಸಗಿ ಸ್ಥಳದಲ್ಲಿ ನಡೆದ ದುರ್ಗಾ ದೌಡ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಹಾಗೂ ಕಾಜಲ್ ಹಿಂದೂಸ್ಥಾನಿ ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿ ಕಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ.
ಹಿಂದೂಗಳ ಮನೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟು ಪೂಜೆ ಮಾಡಿ ಅದನ್ನು ಬಳಸಬೇಕು ಹಾಗೂ ಸಣ್ಣ ಸಣ್ಣ ಹೆಣ್ಣು ಮಕ್ಕಳನ್ನು ಮುಸ್ಲಿಂ ಸಮುದಾಯದವರು ಲವ್ ಜಿಹಾದ್ ನಡೆಸಿ ವಂಚಿಸುತ್ತಿದ್ದಾರೆ. ಈ ಲವ್ ಜಿಹಾದ್ ಪ್ರಚೋದನೆಯಾಗಿ ಬಾಲಿವುಡ್ ಕಾರ್ಯಾಚರಿಸುತ್ತಿದೆ ಎಂದು ಒಂದು ಸಮುದಾಯವನ್ನು ದೂಷಿಸಿ ಇನ್ನೊಂದು ಧರ್ಮದವರೊಂದಿಗೆ ದ್ವೇಷ ಭಾವನೆ ಹುಟ್ಟುವಂತೆ ಇವರು ಭಾಷಣದಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.