Udupi; ಮೀನುಗಾರಿಕೆ ಸಂಪರ್ಕ ರಸ್ತೆಗಳು ನಿರ್ವಹಣೆಯಿಲ್ಲದೇ ದುಃಸ್ಥಿತಿಗೆ
Team Udayavani, Feb 28, 2024, 12:58 AM IST
ಉಡುಪಿ: ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಕೃಷಿ ಮತ್ತು ಮೀನುಗಾರಿಕೆ ತನ್ನದೇ ಕೊಡುಗೆ ನೀಡುತ್ತಾ ಬಂದಿದೆ. ಆದರೆ ಬಂದರು, ಕಿರು ಬಂದರು ಸಹಿತ ಮೀನುಗಾರಿಕೆ ಚಟುವಟಿಕೆಗಳಿಗೆ ಸಂಪರ್ಕಿಸುವ ರಸ್ತೆಗಳು ದುರಸ್ತಿ, ನಿರ್ವಹಣೆಯಿಲ್ಲದೇ ದುಃಸ್ಥಿತಿಗೆ ತಲುಪಿದೆ.
ಕಳೆದ ಮೂರು ವರ್ಷಗಳಿಂದ ಮೀನುಗಾರಿಕೆಗೆ ಸಂಬಂಧಿಸಿದ ಕೊಂಡಿ ರಸ್ತೆ ದುರಸ್ತಿ ಹಾಗೂ ನಿರ್ವಹಣೆಗೆ ಯಾವುದೇ ಅನುದಾನ ಮೀನುಗಾರಿಕೆ ಇಲಾಖೆಯಿಂದ ಒದಗಿಸಿಲ್ಲ.ಹೆಜಮಾಡಿಯಿಂದ ಬೈಂದೂರಿನ ಶಿರೂರು ವರೆಗೂ ಎನ್‌ಎಚ್ 66ರಿಂದ ಮೀನುಗಾರಿಕೆ ಪ್ರದೇಶಕ್ಕೆ ಹಲವು ಕೊಂಡಿ ರಸ್ತೆಗಳು ಇವೆ.
ಇದರಲ್ಲಿ ಮಲ್ಪೆ ಹಾಗೂ ಗಂಗೊಳ್ಳಿ ಬಂದರು ಸಂಪರ್ಕಿಸುವ ಮುಖ್ಯ ರಸ್ತೆಯೂ ಇದೆ. ಅದರ ದುರಸ್ತಿ, ಪುನರ್ ನಿರ್ಮಾಣ ಇತ್ಯಾದಿ ನಡೆಯುತ್ತಿದೆ. ಆದರೆ, ಉಳಿದ ಭಾಗದ ಮೀನುಗಾರಿಕೆ ರಸ್ತೆಗಳು ದುರಸ್ತಿಯೇ ಕಾಣುತ್ತಿಲ್ಲ.
ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಕೆಲವೊಂದು ಭಾಗದಲ್ಲಿ ರಸ್ತೆ ದುರಸ್ತಿ ನಡೆದಿದೆ. ಆದರೆ, ಮೀನುಗಾರಿಕೆ ಇಲಾಖೆಯಿಂದ ಕಳೆದ ಮೂರು ವರ್ಷದಲ್ಲಿ ಅಧಿಕೃತವಾಗಿ ದುರಸ್ತಿ ಹಾಗೂ ನಿರ್ವಹಣೆಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ.
20 ಕೋ.ರೂ. ಅನುದಾನ: 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಂಪರ್ಕ ರಸ್ತೆಗಳ ದುರಸ್ತಿಗೆ ಮೀನುಗಾರಿಕೆ ಇಲಾಖೆಯಿಂದ 20 ಕೋ.ರೂ. ಅನುದಾನ ಮೀಸಲಿಡಲಾಗಿದೆ. ಮೀನುಗಾರಿಕೆ ಕೊಂಡಿ ರಸ್ತೆಗಳ ಪ್ರಸ್ತುತ ಸ್ಥಿತಿ ಆಧರಿಸಿ ದುರಸ್ಥಿ ಕಾಮಗಾರಿ ನಡೆಸಲಾಗುತ್ತದೆ. ಆದರೆ, ಇದು ಉಡುಪಿ ಜಿಲ್ಲೆಗೆ ಮೀಸಲಿಟ್ಟಿರುವ ಅನುದಾನವಲ್ಲ. ರಾಜ್ಯಕ್ಕೆ ಮೀಸಲಿಟ್ಟಿರುವ ಅನುದಾನವಾಗಿದ್ದು, ಉಡುಪಿ ಜಿಲ್ಲೆಗೆ ಎಷ್ಟು ಸಿಗಲಿದೆ ಎಂಬುದೇ ಯಕ್ಷಪ್ರಶ್ನೆಯಾಗಿದೆ.
ರಸ್ತೆ ನಿರ್ಮಾಣಕ್ಕೆ ಹಂಚಿಕೆಯಾಗಿರುವ ಅನುದಾನ
ಮೀನುಗಾರಿಕೆ ರಸ್ತೆ ನಿರ್ಮಾಣ ಸಂಬಂಧ 2020-21ನೇ ಸಾಲಿನಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1 ಕಾಮಗಾರಿ 93.45 ಲಕ್ಷ ರೂ.ಗಳಲ್ಲಿ ನಡೆದಿತ್ತು. 2021-22ರಲ್ಲಿ ಕಾಪು ವಿಧಾನಸಭಾ ಕ್ಷೇತ್ರದಲ್ಲಿ 9 ಕಾಮಗಾರಿಗಳು ಸುಮಾರು 32 ಲಕ್ಷ ರೂ.ಗಳಲ್ಲಿ ನಡೆದಿತ್ತು. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 41 ಲಕ್ಷ ರೂ. ವೆಚ್ಚದಲ್ಲಿ 6 ಕಾಮಗಾರಿ, ಕುಂದಾಪುರ ಕ್ಷೇತ್ರದಲ್ಲಿ 5 ಕಾಮಗಾರಿ ಸುಮಾರು 21 ಲಕ್ಷ ರೂ. ವೆಚ್ಚದಲ್ಲಿ ಹಾಗೂ ಇದೇ ವರ್ಷ ಬೈಂದೂರಿನಲ್ಲಿ 10 ಕೋ.ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಿತ್ತು. ಆದರೆ, ದುರಸ್ತಿ ಹಾಗೂ ನಿರ್ವಹಣೆಗೆ ಅನುದಾನ ಮೀಸಲಿಟ್ಟಿಲ್ಲ.
ಸ್ಥಳೀಯರ ಆಗ್ರಹ: ಮೀನುಗಾರಿಕೆಗೆ ಸಂಬಂಧಿಸಿದ ಕೊಂಡಿ ರಸ್ತೆಯಲ್ಲಿ ನಿರಂತರ ವಾಹನ ಸಂಚಾರ ಇರುವುದರಿಂದ ಹಾಗೂ ಮೀನುಸಾಗಾಟ ಮಾಡುವ ವಾಹನಗಳೇ ಹೆಚ್ಚು ಸಂಚರಿಸುವುದರಿಂದ ಪ್ರತಿ ವರ್ಷವೂ ದುರಸ್ತಿಗೆ ಸರಕಾರ ಅನುದಾನ ಮೀಸಲಿಡಬೇಕು. ಮೀನುಗಾರಿಕೆ ರಸ್ತೆಯಾದರೂ ಸ್ಥಳೀಯರ ಸಂಚಾರಕ್ಕೂ ಅದೇ ರಸ್ತೆ ಬಳಸುವುದರಿಂದ ಹಾನಿಯಾದ ತತ್‌ಕ್ಷಣವೇ ಸರಿಪಡಿಸುವ ವ್ಯವಸ್ಥೆಯನ್ನು ಮೀನುಗಾರಿಕೆ ಇಲಾಖೆ ಮಾಡಬೇಕು. ಲೋಕೋಪಯೋಗಿ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ಸ್ಥಳೀಯ ಆಡಳಿತದ ತಾಂತ್ರಿಕ ಸಮಸ್ಯೆಯಿಂದ ಕೆಲವು ಕಡೆಗಳಲ್ಲಿ ರಸ್ತೆ ಅಭಿವೃದ್ಧಿಯೇ ಆಗಿಲ್ಲ ಎಂಬ ದೂರುಗಳು ಇವೆ.
ಕಳೆದ ಮೂರು ವರ್ಷ ಮೀನುಗಾರಿಕೆ ರಸ್ತೆ ದುರಸ್ತಿ, ನಿರ್ವಹಣೆಗೆ ಅನುದಾನ ಒದಗಿಸಿಲ್ಲ. ಈ ವರ್ಷ 20 ಕೋ.ರೂ. ಮೀನುಗಾರಿಕೆ ಕೊಂಡಿ ರಸ್ತೆ ದುರಸ್ತಿ, ನಿರ್ವಹಣೆಗೆ ಮೀಸಲಿಟ್ಟಿದ್ದೇವೆ. ರಸ್ತೆಗಳ ಪ್ರಸ್ತುತ ಸ್ಥಿತಿಗೆ ಅನುಸಾರವಾಗಿ ಅನುದಾನ ವಿನಿಯೋಗಿಸಲಾಗುವುದು.
– ಮಂಕಾಳ ವೈದ್ಯ, ಮೀನುಗಾರಿಕೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.