Udupi ಗಾಂಜಾ ಮಾರಾಟ: ಆರೋಪಿಗೆ ಶಿಕ್ಷೆ
Team Udayavani, Oct 25, 2023, 11:06 PM IST
ಉಡುಪಿ: ಗಾಂಜಾ ಸ್ವಾಧೀನ ಹೊಂದಿ ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
2020ರಲ್ಲಿ ಮಣಿಪಾಲದ ಶೀಂಬ್ರಾದಲ್ಲಿ ನಡೆದ ಘಟನೆಯಲ್ಲಿ ಮಣಿಪಾಲ ಠಾಣೆಯ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಕಾರಿನಲ್ಲಿದ್ದ ಧಾರವಾಡ ಮೂಲಕ ಆರೋಪಿಗಳಾದ ಫಾರೂಕ್ ಶೇಖ್ ಹಾಗೂ ಅಬ್ದುಲ್ ರಜಾಕ್ ಅವರ ಕೈಯಲ್ಲಿದ್ದ ಪ್ಯಾಕೇಟ್ ಪರಿಶೀಲಿಸಿದಾಗ ಅದರಲ್ಲಿ 2 ಕೆಜಿ 7 ಗ್ರಾಂ ತೂಕದ ಗಾಂಜಾ ಇರುವುದು ಪತ್ತೆಯಾಗಿತ್ತು. ಗಾಂಜಾ, ಕಾರು ಹಾಗೂ ಆರೋಪಿಗಳನ್ನು ವಶಪಡಿಸಿಕೊಂಡು ಅವರ ಮೇಲೆ ಎನ್‌ಡಿಪಿಎಸ್ ಕಾಯ್ದೆಯಡಿ ಮಣಿಪಾಲ ಠಾಣೆಯ ವೃತ್ತ ನಿರೀಕ್ಷಕ ಮಂಜುನಾಥ ಅವರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಅವರು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಮಾನಿಸಿ ಆರೋಪಿಗಳಿಗೆ ತಲಾ 1 ವರ್ಷ ಕಠಿನ ಸಜೆ ಹಾಗೂ ತಲಾ 20,000 ರೂ. ದಂಡ ವಿಧಿಸಿ ಅ.25ರಂದು ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.