ಉಡುಪಿ ಹೆಲ್ಪ್ ಆ್ಯಪ್ ಬಿಡುಗಡೆ
Team Udayavani, Jun 13, 2019, 6:10 AM IST
ಉಡುಪಿ: ನಗರಸಭೆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಸಂಭವಿಸುವ ಅವಘಡಗಳ ತುರ್ತು ಸ್ಪಂದನೆಗಾಗಿ ಸಿದ್ಧಪಡಿಸಲಾದ ಉಡುಪಿ ಹೆಲ್ಪ್ (Udupihelp) ಆ್ಯಪ್ ಅನ್ನು ಉಸ್ತುವಾರಿ ಸಚಿವೆ ಡಾ| ಜಯಮಾಲಾ ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಡುಗಡೆ ಮಾಡಿದರು.
ಜನಸಾಮಾನ್ಯರ ಸಮಸ್ಯೆಗಳಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಲು ಜಿಲ್ಲಾಡಳಿತ ಉತ್ತಮ ಕಾರ್ಯ ಕೈಗೊಂಡಿದೆ. ಮಳೆಗಾಲದಲ್ಲಿ ಅವಘಡ ಸಂಭವಿಸಿದಾಗ ತುರ್ತು ಸ್ಪಂದನೆ ಅಗತ್ಯವಿದೆ. ಜನರು ಈ ಆ್ಯಪ್ ಮೂಲಕ ತಮ್ಮ ದೂರುಗಳನ್ನು ನೇರವಾಗಿ ಸ್ಥಳೀಯಾಡಳಿತಕ್ಕೆ ನೀಡಬಹುದಾಗಿದೆ ಎಂದು ಸಚಿವೆ ತಿಳಿಸಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಆ್ಯಪ್‌ನಲ್ಲಿ ದೂರು ದಾಖಲಾದ 6 ಗಂಟೆಯೊಳಗೆ ನಗರಸಭೆ ಅಧಿಕಾರಿಗಳು ಸ್ಪಂದಿಸಲಿದ್ದಾರೆ. ಆ್ಯಪ್‌ನಲ್ಲಿ ಘಟನೆಗೆ ಸಂಬಂಧಿಸಿದ ಫೋಟೋ ಮತ್ತು ವೀಡಿಯೋ ಅಪ್‌ಲೋಡ್ ಮಾಡಬಹುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್ ಉಪಸ್ಥಿತರಿದ್ದರು. ಸಾರ್ವಜನಿಕರು ಮೊಬೈಲ್ ಗೂಗಲ್ ಪ್ಲೇ ಸ್ಟೋರ್‌ನಿಂದ ಆ್ಯಪ್ ಡೌನ್‌ಲೋಡ್ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Puttur: ಪೆನ್ ಪಾಯಿಂಟ್ ಕ್ರಿಕೆಟ್: ಸತತ 2ನೇ ಬಾರಿ ಬ್ಲೂ ಹಂಟರ್ಸ್ ಚಾಂಪಿಯನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.