Udupi; ಜಾಗತಿಕ ವಿದ್ವಾಂಸರಿಗೆ ಉಡುಪಿ ಸಂಶೋಧನ ಯಾತ್ರಾ ಸ್ಥಳ


Team Udayavani, Mar 18, 2024, 1:06 AM IST

MGM-UDGATANE

ಉಡುಪಿ: ಹಲವಾರು ವರ್ಷಗಳಿಂದ ಎಲ್ಲ ವಿದ್ವಾಂಸರಿಗೆ ಜನಪದ, ಸಂಸ್ಕೃತಿ ವಿಷಯದಲ್ಲಿ ಸಂಶೋಧನ ಯಾತ್ರಾ ಸ್ಥಳವಾಗಿ ಉಡುಪಿ ಗುರುತಿಸಿಕೊಂಡಿದ್ದು, ಇದರ ಹಿಂದಿನ ಶಕ್ತಿ ಪ್ರೊ| ಕು.ಶಿ. ಹರಿದಾಸ ಭಟ್ಟರು ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ ರೈ ಹೇಳಿದರು.

ಎಂಜಿಎಂ ಕಾಲೇಜು ವತಿಯಿಂದ ರವಿವಾರ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ಪ್ರೊ| ಕು.ಶಿ. ಹರಿದಾಸ ಭಟ್‌ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದರು.

ಕರಾವಳಿ ಮಣ್ಣಿನ ಕಲೆ, ಸಾಹಿತ್ಯ, ಜನಪದ ದಾಖಲೀಕರಣ, ಅಧ್ಯಯನ, ಸಂಶೋಧನೆಗೆ ವಿಶಿಷ್ಟವಾಗಿ ಶ್ರಮಿಸಿ ದವರು ಹರಿದಾಸ ಭಟ್ಟರು. ಉಡುಪಿಯನ್ನು ಸಾಂಸ್ಕೃತಿಕ, ಕಲಾ ಕೇಂದ್ರವಾಗಿ ಬೆಳೆಸಲು ಮಹತ್ವದ ಪಾತ್ರ ವಹಿಸಿದವರು. ಅವರ ಕಾಲಘಟ್ಟದಲ್ಲಿಯೇ ಯುರೋಪ್‌, ಫಿನ್‌ ಲ್ಯಾಂಡ್ ಮೊದಲಾದ ದೇಶಗಳಿಂದ ಭಾರತೀಯ ಜನಪದ ಅಧ್ಯಯನಕ್ಕೆ ವಿದ್ವಾಂಸರು ಉಡುಪಿಗೆ ಬರುತ್ತಿದ್ದುದು ವಿಶೇಷವಾಗಿತ್ತು. ಆರ್‌ಆರ್‌ಸಿಯನ್ನು ಸ್ಥಾಪಿಸುವ ಮೂಲಕ ಎಲ್ಲಿಯೂ ನಡೆಯದ ಜನಪದ ಸಂಶೋಧನೆ, ದಾಖಲೀಕರಣದ ಎಲ್ಲ ಪ್ರಕಾರಗಳು ಇಲ್ಲಿ ನಡೆಯುತ್ತಿರುವುದು ವಿಶೇಷವಾಗಿತ್ತು. ಪಾಶ್ಚಾತ್ಯ ಸಾಹಿತ್ಯ, ಕಲೆಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಕು.ಶಿ.ಯವರ ಅನುವಾದ ಕೃತಿಗಳು ಗಮನ ಸೆಳೆಯುತ್ತಿದ್ದವು. ಅವರ ಎಲ್ಲ ಸಾಹಿತ್ಯಗಳು ಇಂದು ಮರು ವಿಮರ್ಶೆಗೆ ಒಳಪಡಬೇಕು. ಅವರ ಕೃತಿ, ಸಂಪುಟಗಳ ಮರುಮುದ್ರಣದ ಕಾರ್ಯ ಆಗಬೇಕಿದೆ ಎಂದರು.

ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಮಾತನಾಡಿ, ಕು.ಶಿ. ಹರಿದಾಸ ಭಟ್ಟರದು ಬಹುಮುಖ ಪ್ರತಿಭೆಯ ವ್ಯಕ್ತಿತ್ವ. ಉತ್ತಮ ಪ್ರಾಧ್ಯಾಪಕ ಮಾತ್ರವಲ್ಲದೆ ಉತ್ತಮ ಆಡಳಿತಗಾರರಾಗಿಯೂ ಗುರುತಿಸಿಕೊಂಡಿದ್ದರು. ಯಕ್ಷಗಾನ ಕಲೆಯನ್ನು ಜಗತ್ತಿನಾದ್ಯಂತ ಪಸರಿಸಿದರು. ಇವರನ್ನು ಈ ಪೀಳಿಗೆ ಮಾತ್ರವಲ್ಲದೆ ಮುಂದಿನ ಪೀಳಿಗೆ ಕೂಡ ಸದಾ ಸ್ಮರಿಸಬೇಕು ಎಂದರು. ಪ್ರೊ| ಕು.ಶಿ. ಅವರ ಎಲ್ಲ ಕೃತಿಗಳನ್ನು ಮರು ಮುದ್ರಣಗೊಳಿಸುವ ಯೋಜನೆಗೆ ಸಮ್ಮತಿ ಸೂಚಿಸಿದರು.

ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ| ಎನ್‌.ಟಿ. ಭಟ್‌, ಕಂಪ್ಯೂಟರ್‌ ಸೈನ್ಸ್‌ ವಿಭಾಗದ ಮುಖ್ಯಸ್ಥ ಡಾ| ವಿಶ್ವನಾಥ್‌ ಎಂ. ಪೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| ಸುರೇಂದ್ರನಾಥ್‌ ಶೆಟ್ಟಿ ಅವರಿಂದ ಗುರು ನಮನ ನಡೆಯಿತು.

ಕು.ಶಿ. ಹರಿದಾಸ ಭಟ್ಟರ ಮಕ್ಕಳಾದ ಸುಜಾತಾ, ಜಯದೇವ, ಅನಂತ ಮೋಹನ, ಹರ್ಷವರ್ಧನ, ಆಶಾ, ಆಕಾಡೆಮಿ ಆಫ್ ಜನರಲ್‌ ಎಜುಕೇಶನ್‌ನ ಕಾರ್ಯದರ್ಶಿ ಬಿ.ಪಿ. ವರದರಾಯ ಪೈ, ಟಿ. ಮೋಹನದಾಸ್‌ ಪೈ ಕೌಶಲಾಭಿವೃದ್ಧಿ ಕೇಂದ್ರದ ನಿರ್ದೇಶಕ ಟಿ. ರಂಗ ಪೈ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಡಾ| ಬಿ. ಜಗದೀಶ್‌ ಶೆಟ್ಟಿ, ಇಂದ್ರಾಳಿ ಯಕ್ಷಗಾನ ಕೇಂದ್ರದ ಸಲಹ ಸಮಿತಿ ಅಧ್ಯಕ್ಷ ಕಿಶನ್‌ ಹೆಗ್ಡೆ, ಎಂಜಿಎಂ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಮಾಲತಿ ದೇವಿ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಸ್ವಾಗತಿಸಿ, ಪ್ರಸ್ತಾವನೆಗೈದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ| ಪುತ್ತಿ ವಸಂತ್‌ ಕುಮಾರ್‌ ನಿರೂಪಿಸಿ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ| ದೇವಿದಾಸ್‌ ನಾಯ್ಕ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಕಾಲೇಜು ಕ್ಯಾಂಪಸ್‌ನ ಅಡ್ಮಿನಿಸ್ಟ್ರೇಟಿವ್‌ ಬ್ಲಾಕ್‌ನಿಂದ ರವೀಂದ್ರ ಮಂಟಪದ ವರೆಗೆ ಕು.ಶಿ. ಹರಿದಾಸ ಭಟ್ಟರ ಭಾವಚಿತ್ರದ ಮೆರವಣಿಗೆ ನಡೆಯಿತು.

ಟಾಪ್ ನ್ಯೂಸ್

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.