ರಾಜ್ಯದ ಪ್ರಥಮ ಆನೆಕಾಲು ರೋಗಮುಕ್ತ ಜಿಲ್ಲೆಯಾಗುವತ್ತ ಉಡುಪಿ
Team Udayavani, Feb 21, 2020, 5:36 AM IST
ಸಾಂದರ್ಭಿಕ ಚಿತ್ರ
ಉಡುಪಿ: ಜಿಲ್ಲೆಯು ರಾಜ್ಯದ ಮೊದಲ ಆನೆಕಾಲು ರೋಗ (ಫೈಲೇರಿಯಾ) ಮುಕ್ತ ಜಿಲ್ಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಈ ಮೂಲಕ ಹಲವು ಕ್ಷೇತ್ರಗಳಲ್ಲಿ ಪ್ರಥಮ ಸ್ಥಾನ ಹೊಂದಿರುವ ಉಡುಪಿಯ ಮಕುಟಕ್ಕೆ ಮತ್ತೂಂದು ಗರಿ ಏರಲಿದೆ. ಉಡುಪಿ ಜಿಲ್ಲೆಯು ಫೈಲೇರಿಯಾ ರೋಗದಿಂದ ಸಂಪೂರ್ಣವಾಗಿ ಮುಕ್ತ ವಾಗಿದ್ದು, ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ದೊರೆಯುವುದಷ್ಟೆ ಬಾಕಿಯಿದೆ. ಈ ಬಗ್ಗೆ ಅಗತ್ಯ ವರದಿ ಮತ್ತು ದಾಖಲೆಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಕಳುಹಿಸಲಾಗಿದೆ. ಅನುಮೋದನೆ ದೊರೆಯಲು ಕನಿಷ್ಠ ಎರಡು ವರ್ಷ ಬೇಕು.
ರೋಗ ಹೇಗೆ ಬರುತ್ತದೆ?
ಫೈಲೇರಿಯಾ (ಆನೆಕಾಲು) ರೋಗ ಕ್ಯೂಲೆಕ್ಸ್ ಸೊಳ್ಳೆಯ ಕಡಿತದಿಂದ ಬರುತ್ತದೆ, ಇದು ಸಾಂಕ್ರಾಮಿಕವಲ್ಲ. ಈಗಾಗಲೇ ಕಾಯಿಲೆಪೀಡಿತ ವ್ಯಕ್ತಿಯನ್ನು ಕ್ಯೂಲೆಕ್ಸ್ ಸೊಳ್ಳೆ ಕಚ್ಚಿ ಬಳಿಕ ಆರೋಗ್ಯವಂತನನ್ನು ಕಚ್ಚುವ ಮೂಲಕ ರೋಗ ಹರಡುತ್ತದೆ. ದೇಹದೊಳಕ್ಕೆ ಪ್ರವೇಶಿಸಿದ ರೋಗಾಣುಗಳು ದುಗ್ಧರಸ ಗ್ರಂಥಿಗಳಲ್ಲಿ ಶೇಖರಣೆಯಾಗಿ, ರಕ್ತ ಪರಿಚಲನೆಯಾಗದೆ ಅಲ್ಲಿಂದ ಮುಂದಿನ ದೇಹದ ಭಾಗವು ಊದಿಕೊಳ್ಳತೊಡಗುತ್ತದೆ. ರೋಗಾಣು ನಾಶವಾದರೂ ಊತ ಶಾಶ್ವತವಾಗಿ ಉಳಿದುಕೊಳ್ಳುತ್ತದೆ. ಮುಖ್ಯವಾಗಿ ಕಾಲು, ಕೈ, ಎದೆಯ ಭಾಗಗಳಲ್ಲಿ ಊದುವಿಕೆ ಕಾಣಿಸಿಕೊಳ್ಳುತ್ತದೆ.
ನಿಯಮ ಉಲ್ಲಂಘಿಸಿದರೆ ಕ್ರಮ
ಜಿಲ್ಲೆಯಲ್ಲಿ ಹಳೆಯ ಫೈಲೇರಿಯಾ ಪ್ರಕರಣಗಳನ್ನು ಹೊರತು ಪಡಿಸಿ ಹೊಸ ಪ್ರಕರಣಗಳು ದಾಖಲಾಗಿಲ್ಲ. ಹೊರ ಜಿಲ್ಲೆ ಮತ್ತು ಹೊರರಾಜ್ಯದಿಂದ ಬರುವ ವಲಸೆ ಕಾರ್ಮಿಕರಲ್ಲಿ ರೋಗಾಣುಗಳು ಇರುವ ಸಾಧ್ಯತೆಗಳಿದ್ದು, ಇಂತಹವರನ್ನು ನಿಯಮಿತವಾಗಿ ಪತ್ತೆ ಹಚ್ಚಿ ಪರೀಕ್ಷೆಗೊಳಪಡಿಸಲಾಗುತ್ತದೆ. ರೋಗಪೀಡಿತ ವಲಸೆ ಕಾರ್ಮಿಕರನ್ನು ಪತ್ತೆ ಹಚ್ಚಲು ಆರೋಗ್ಯ ಇಲಾಖೆಯ ಕಡೆಯಿಂದ ಎನ್‌ಒಸಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗುತ್ತದೆ. ಜತೆಗೆ ನಗರ ಸಭೆಯಿಂದ ಸಿವಿಕ್ ಬೈಲಾವನ್ನೂ ರಚಿಸಿ ಅನುಮೋದನೆಗಾಗಿ ರಾಜ್ಯ ಸರಕಾರಕ್ಕೆ ಕಳುಹಿಸಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಬೈಲಾ ನಿಯಮಗಳನ್ನು ಉಲ್ಲಂಘಿಸಿದವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ.
2014, 2016, ಮತ್ತು 2019ರಲ್ಲಿ ನಡೆಸಿದ ಟಿಎಎಸ್ ಮತ್ತು ಪೋಸ್ಟ್ ಎಂಡಿಎ ಸರ್ವೆಗಳಲ್ಲಿ ಮೂರೂ ಬಾರಿಯೂ ಉಡುಪಿಯು ತೇರ್ಗಡೆ ಹೊಂದಿದ್ದು, ಸ್ಥಳೀಯವಾಗಿ ಫೈಲೇರಿಯಾ ಇಲ್ಲ ಎನ್ನುವುದು ಕಂಡುಬಂದಿದೆ. ಉಡುಪಿ ಜಿಲ್ಲೆಯು ಅಧಿಕೃತವಾಗಿ ಫೈಲೇರಿಯಾ ಮುಕ್ತ ಜಿಲ್ಲೆಯಾಗಬೇಕಿದ್ದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆ ದೊರೆಯಬೇಕಾಗಿದೆ. ಪ್ರಮಾಣಪತ್ರವನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಕಳುಹಿಸಲಾಗಿದ್ದು, ಮುಂದಿನ 2 ವರ್ಷಗಳವರೆಗೆ ಜಿಲ್ಲೆಯನ್ನು ಫೈಲೇರಿಯಾ ಮುಕ್ತವಾಗಿಡುವ ನಿಟ್ಟಿನಲ್ಲಿ ಕಾರ್ಯಗಳು ನಡೆಯಲಿವೆ. ರಾಜ್ಯದಲ್ಲಿ 2019ರ ಆಗಸ್ಟ್‌ನಲ್ಲಿಯೇ ಈ ಸಾಧನೆ ಮಾಡಿದ ಪ್ರಥಮ ಜಿಲ್ಲೆ ಉಡುಪಿಯಾಗಿದ್ದು, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಗಳು ಅನಂತರದಲ್ಲಿವೆ.
– ಡಾ| ಪ್ರಶಾಂತ್ ಭಟ್, ಜಿಲ್ಲಾ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.