ಉಡುಪಿ; ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲ: ಧಾರ್ಮಿಕ ಸಭೆ
ಹೆಜ್ಜೆಗೆಜ್ಜೆ ತಂಡದವರಿಂದ ಭರತನಾಟ್ಯ ನಡೆಯಿತು
Team Udayavani, Mar 24, 2023, 12:54 PM IST
ಉಡುಪಿ: ದೇವರ ಕೆಲಸದಲ್ಲಿ ಶ್ರದ್ಧಾಭಕ್ತಿಯಿಂದ ತೊಡಗಿಸಿಕೊಂಡರೆ ತನ್ನ ಅಭಿವೃದ್ಧಿಯೊಂದಿಗೆ ದೇಗುಲ, ಊರು ಅಭಿವೃದ್ಧಿಯಾಗಲಿದೆ ಎಂಬುದಕ್ಕೆ ಅವಿಭಜಿತ ದ.ಕ. ಜಿಲ್ಲೆಯಲ್ಲೇ ಕಡಿಯಾಳಿ ದೇಗುಲ ಮಾದರಿಯಾಗಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಧ್ವಜಸ್ತಂಭ ಪ್ರತಿಷ್ಠಾಪನೆ, ಧೂಳಿಮಂಡಲ ಸೇವೆ, ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಬುಧವಾರ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು. ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್ ಉದ್ಘಾಟಿಸಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಾಗೇಶ್ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಪಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕೆ. ನಿತ್ಯಾನಂದ ಕಾಮತ್, ಉಡುಪಿ ಪವನ್ ಮೋಟಾರ್ನ ಸುಭಾಶ್ ಚಂದ್ರ ಹೆಗ್ಡೆ, ನಗರಸಭೆ ಸದಸ್ಯ ಗಿರೀಶ್ ಎಂ. ಅಂಚನ್, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷರಾದ ರಾಮಚಂದ್ರ ಸನಿಲ್, ಭಾರತಿ ಚಂದ್ರಶೇಖರ್, ಅರ್ಚಕ ಕೆ. ರತ್ನಾಕರ ಉಪಾಧ್ಯಾಯ ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ ಸ್ವಾಗತಿಸಿ, ನಿರೂಪಿಸಿದರು. ಹೆಜ್ಜೆಗೆಜ್ಜೆ ತಂಡದವರಿಂದ ಭರತನಾಟ್ಯ ನಡೆಯಿತು.
ಮಾ. 24ರಂದು ಬೆಳಗ್ಗೆ ಧ್ವಜಸ್ತಂಭ ಪ್ರತಿಷ್ಠೆ ನಡೆಯಿತು, ಬ್ರಹ್ಮಕಲಶೋತ್ಸವ, ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ಧೂಳಿಮಂಡಲ ಸೇವೆ ಮತ್ತು ರಂಗಪೂಜೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.