Udupi: ವ್ಯಕ್ತಿಯನ್ನು ಅಪಹರಿಸಿ ಹಣ ಲೂಟಿ
Team Udayavani, Jun 22, 2024, 12:22 AM IST
ಮಣಿಪಾಲ: ಚಾಕು ತೋರಿಸಿ ವ್ಯಕ್ತಿಯೊಬ್ಬರನ್ನು ಅಪ ಹರಿಸಿ, ಅವರಲ್ಲಿದ್ದ 1 ಲ.ರೂ. ಅನ್ನು ಕಸಿದು ಜೀವಬೆದರಿಕೆ ಹಾಕಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ.
ಆತ್ರಾಡಿಯ ಮಹಮ್ಮದ್ ನಿಹಾಲ್ ಅವರು ಬಸ್ನ ಕಲೆಕ್ಷನ್ ವ್ಯವಹಾರ ಮಾಡಿಕೊಂಡಿದ್ದು, ಜೂ. 20ರಂದು ಬಸ್ನ ಕಲೆಕ್ಷನ್ ಹಣ ವನ್ನು ತೆಗೆದುಕೊಂಡು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬೇಕರಿ ಬಳಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಲವಂತವಾಗಿ ಅವರನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ.
ಬಳಿಕ ಚಾಕು ತೋರಿಸಿ, ಕೈಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣವನ್ನು ಕಸಿದು ಜೀವ ಬೆದರಿಕೆ ಹಾಕಿದ್ದಾರೆ.
ಆರೋಪಿಗಳನ್ನು ಶಾರೀಕ್, ಇರ್ಫಾನ್ ಎಂದು ಗುರುತಿಸಲಾಗಿದೆ. ಇವರ ಜತೆಗೆ ಇನ್ನೂ ಇಬ್ಬರು ಅಪರಿಚಿತರು ಇದ್ದರು ಎಂದು ಮಹಮ್ಮದ್ ನಿಹಾಲ್ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.