Udupi; ನ್ಯಾಯವಾದಿಗಳು ಒತ್ತಡ ಮುಕ್ತರಾಗಿ ಕೆಲಸ ನಿರ್ವಹಿಸಿ
ರಾಜ್ಯ ಮಟ್ಟದ "ಕಲಾ ಸಂಭ್ರಮ' ಉದ್ಘಾಟಿಸಿ ನ್ಯಾ| ಪಿ.ಎಸ್. ದಿನೇಶ್ ಕುಮಾರ್
Team Udayavani, Feb 11, 2024, 12:11 AM IST
ಉಡುಪಿ: ನ್ಯಾಯವಾದಿಗಳು ಬಹಳಷ್ಟು ಒತ್ತಡ ದಲ್ಲಿರುತ್ತಾರೆ. ಕ್ರೀಡೆ, ಸಾಂಸ್ಕೃತಿಕ ಸಹಿತ ವಿವಿಧ
ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಒತ್ತಡ ನಿವಾರಣೆ ಸಾಧ್ಯ. ಒತ್ತಡ ಮುಕ್ತವಾಗಿ ಕಾರ್ಯನಿರ್ವಹಿ ಸಲು ಇಂತಹ ಕಾರ್ಯಕ್ರಮಗಳು ಪೂರಕ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹೇಳಿದರು.
ಉಡುಪಿ ವಕೀಲರ ಸಂಘದ ವತಿ ಯಿಂದ ಕೋರ್ಟ್ ಆವರಣದಲ್ಲಿ ಶನಿವಾರ ರಾಜ್ಯಮಟ್ಟದ ಸಾಂಸ್ಕೃತಿಕ ಹಬ್ಬ “ಕಲಾ ಸಂಭ್ರಮ’ ಉದ್ಘಾಟಿಸಿ ಅವರು ಮಾತನಾಡಿದರು.ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ಕಾನೂನು ವೃತ್ತಿಗೆ ಗೌರವ ನೀಡಿ ಸಮಾಜವನ್ನು ಮುಂದುವರಿಸುವ ಜವಾಬ್ದಾರಿ ನ್ಯಾಯವಾದಿಗಳ ಮೇಲಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸುವ ಅಧಿಕಾರವೂ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗಿದೆ. ವಿವಿಧ ಚಟುವಟಿಕೆಗಳ ಮೂಲಕ ರಾಜ್ಯದವಕೀಲರ ಸಂಘಕ್ಕೆ ಉಡುಪಿ ವಕೀಲರ ಸಂಘ ಮಾದರಿಯಾಗಿದೆ ಎಂದರು.
ಕಲಾಪದಲ್ಲಿ ನಾನು ಕೂಡ ನ್ಯಾಯಾಧೀಶನ ಪಾತ್ರ ನಿಭಾಯಿಸುತ್ತೇನೆ.ಡಾಕ್ಟರ್, ಎಂಜಿನಿಯರ್ ಆಗಬೇಕೆಂದು ಕೊಂಡಿದ್ದ ನಾನು ಅದು ಅಸಾಧ್ಯವೆಂದು ಭಾವಿಸಿ ಕಲಾವಿಭಾಗ ಪಡೆದು ಕಾನೂನುಅಧ್ಯಯನ ಮಾಡಿದೆ. ಬಳಿಕ ಶಾಸಕನಾಗಿ, ಸಚಿವನಾಗಿ, ಸಭಾಧ್ಯಕ್ಷನಾಗಿದ್ದೇನೆ. ಅದೃಷ್ಟ ಚೆನ್ನಾಗಿದ್ದರೆ ಅಂದುಕೊಂಡದ್ದನ್ನು ಸಾಧಿಸಲು ಸಾಧ್ಯ ಎಂದರು.
ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಂ. ಜೋಷಿ ಮಾತನಾಡಿ, ನ್ಯಾಯ ವಾದಿಗಳು ತಮ್ಮ ವೃತ್ತಿ ಜೀವನದಲ್ಲಿ ಸ್ವಂತಿಕೆ ಮತ್ತು ವೈಯಕ್ತಿಕ ಛಾಪಿಗೆ ಆದ್ಯತೆ ನೀಡಬೇಕು. ಹೊಸತನ, ನೈಪುಣ್ಯ ತರಬೇಕು ಎಂದರು.
ಹೈಕೋರ್ಟ್ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅಧ್ಯಕ್ಷತೆ ವಹಿಸಿದ್ದರು. ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಭರತ್ ಕುಮಾರ್, ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ಪತ್ನಿ ಜಯಶ್ರೀ ಉಪಸ್ಥಿತರಿದ್ದರು.
ಉಡುಪಿ ವಕೀಲರ ಸಂಘದ ಅಧ್ಯಕ್ಷರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ ಪ್ರಸ್ತಾವನೆಗೈದರು. ಪ್ರ. ಕಾರ್ಯದರ್ಶಿ ರಾಜೇಶ ಎ.ಆರ್. ವಂದಿಸಿದರು. ನಿತೇಶ್ ಶೆಟ್ಟಿ ಎಕ್ಕಾರು ಹಾಗೂ ಸಹನಾ ಕುಂದರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.