Udupi; ಮಾ. 17: ಕು.ಶಿ. ಹರಿದಾಸ ಭಟ್ಟ ಜನ್ಮ ಶತಮಾನೋತ್ಸವ
Team Udayavani, Mar 12, 2024, 1:28 AM IST
ಉಡುಪಿ: ಎಂಜಿಎಂ ಕಾಲೇಜು ವತಿಯಿಂ ದ ಪ್ರೊ| ಕು.ಶಿ. ಹರಿದಾಸ ಭಟ್ಟ ಅವರ ಜನ್ಮ ಶತಮಾನೋತ್ಸವ ಮಾ. 17 ರಂದು ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲ ಪ್ರೊ| ಲಕ್ಷ್ಮೀನಾರಾಯಣ ಕಾರಂತ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕು.ಶಿ. ಹರಿದಾಸ ಭಟ್ಟರು ಕಾಲೇಜಿನಲ್ಲಿ ಉಪನ್ಯಾಸಕರಾಗಿ, ವಿಭಾಗ ಮುಖ್ಯಸ್ಥರಾಗಿ, ಪ್ರಾಂಶುಪಾಲರಾಗಿ ಸುದೀರ್ಘ ಸೇವೆ ಸಲ್ಲಿಸಿ ಕಾಲೇಜನ್ನು ಸಾಂಸ್ಕೃತಿಕ ಕೇಂದ್ರವಾಗಿ ಪರಿವರ್ತಿಸಿದವರು. ಶಿಕ್ಷಣದ ಜತೆಗೆ ಕಲೆ, ಸಾಹಿತ್ಯಕ್ಕೂ ವಿಶಿಷ್ಟ ಪ್ರೋತ್ಸಾಹ ನೀಡಿದ ವ್ಯಕ್ತಿತ್ವ ಅವರದು. ಕಲೆ, ಸಾಹಿತ್ಯ, ಜನಪದ ವಿಚಾರದಲ್ಲಿ ಉಡುಪಿ ಸಾಂಸ್ಕೃತಿಕ ನಗರಿ ಹೆಸರು ಪಡೆಯಲು ಕು.ಶಿ. ಅವರ ಶ್ರಮ ಅಪಾರ. ಈ ನಿಟ್ಟಿನಲ್ಲಿ ಅವರ ಜನ್ಮ ಶತಮಾನೋತ್ಸವ ಆಚರಣೆ ಯನ್ನು ಅರ್ಥ ಪೂರ್ಣ ವಾಗಿಸಲು ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.
ಬೆಳಗ್ಗೆ 10ಕ್ಕೆ ಮಾಹೆಯ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಉದ್ಘಾಟನೆ ನೆರವೇರಿಸಲಿದ್ದಾರೆ. ಎಂಜಿಎಂ ಕಾಲೇಜು ಟ್ರಸ್ಟ್ ಅಧ್ಯಕ್ಷ ಟಿ. ಸತೀಶ್ ಯು. ಪೈ ಅಧ್ಯಕ್ಷತೆ ವಹಿಸಲಿದ್ದಾರೆ. ಹಂಪಿ ಕನ್ನಡ ವಿ.ವಿ. ವಿಶ್ರಾಂತ ಕುಲಪತಿ ಡಾ| ಬಿ.ಎ. ವಿವೇಕ ರೈ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಟ್ರಸ್ಟ್ ಸದಸ್ಯ ಅಶೋಕ್ ಟಿ. ಪೈ, ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯದರ್ಶಿ ವರದರಾಯ ಪೈ, ನಿವೃತ್ತ ಪ್ರಾಧ್ಯಾಪಕ ಪ್ರೊ| ಎನ್.ಟಿ. ಭಟ್, ಟಿ. ಮೋಹನದಾಸ ಪೈ ಕೌಶಲಾಭಿವೃದ್ಧಿ ಕೇಂದ್ರದ ನಿರ್ದೇಶಕ ಟಿ. ರಂಗ ಪೈ, ಕು.ಶಿ. ಹರಿದಾಸ ಭಟ್ಟರ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮ ವೈವಿಧ್ಯ
ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ದೇವಿದಾಸ್ ನಾಯ್ಕ ಮಾತನಾಡಿ, ಬೆಳಗ್ಗೆ 9ಕ್ಕೆ ಅಡ್ಮಿನಿಸ್ಟ್ರೇಟಿವ್ ಬ್ಲಾಕ್‌ನಿಂದ ರವೀಂದ್ರ ಮಂಟಪದ ವರೆಗೆ ಹರಿದಾಸ ಭಟ್ಟರ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಅನಂತರ ಉದ್ಘಾಟನೆ, 11.30ಕ್ಕೆ ಪಂ| ಟಿ. ರಂಗ ಪೈ ಅವರಿಂದ ಲಘು ಸಂಗೀತ, ನಿವೃತ್ತ ಪ್ರಾಚಾರ್ಯ ಪ್ರೊ| ಎಂ.ಎಲ್. ಸಾಮಗ ಅವರಿಗೆ ಗುರುವಂದನೆ, ಮಧ್ಯಾಹ್ನ 2ಕ್ಕೆ ಕಾಲೇಜು ವಿದ್ಯಾರ್ಥಿಗಳಿಂದ ಜಾನಪದ ನೃತ್ಯ, ಅಪರಾಹ್ನ 3ಕ್ಕೆ ಸಮಾರೋಪ, ಸಂಜೆ 4ಕ್ಕೆ “ವೀರ ಅಭಿಮನ್ಯು’ ಯಕ್ಷಗಾನ ಪ್ರದರ್ಶನ ಜರಗಲಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಮಾರೋಪ ಭಾಷಣ ಮಾಡಲಿದ್ದಾರೆ.
ಹರಿದಾಸ ಭಟ್ಟರ ವಿದ್ಯಾರ್ಥಿಗಳು, ಸಹ ಉಪನ್ಯಾಸಕರು, ಬೋಧಕೇತರ ಸಿಬಂದಿ, ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.
ಎಂಜಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ, ಇಂದ್ರಾಳಿ ಯಕ್ಷಗಾನ ಸಲಹಾ ಸಮಿತಿ ಅಧ್ಯಕ್ಷ ಕಿಶನ್ ಹೆಗ್ಡೆ, ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ| ಬಿ. ಜಗದೀಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ, ಪ್ರ. ಕಾರ್ಯದರ್ಶಿ ಡಾ| ಎಂ. ವಿಶ್ವನಾಥ್ ಪೈ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.