Udupi ಮಲ್ಪೆ ಬೀಚ್: ನಾಳೆ ಪ್ರವಾಸಿಗರಿಗೆ ಮುಕ್ತ
Team Udayavani, Sep 24, 2023, 11:41 PM IST
ಮಲ್ಪೆ: ಮಳೆಗಾಲದಲ್ಲಿ ಪ್ರವಾಸಿಗರ ಸುರಕ್ಷೆಗಾಗಿ ಮಲ್ಪೆ ಬೀಚ್‌ನ ತೀರದುದ್ದಕ್ಕೂ ಅಳವಡಿಸಿದ್ದ ಬಲೆಯನ್ನು ಸೆ. 26ರಂದು ತೆರವುಗೊಳಿಸಲಾಗುವುದು.
ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲ ಆಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರತೀ ವರ್ಷ ಮೇ 15ರಿಂದ ಸೆ. 15ರ ವರೆಗೆ ಬೀಚ್‌ನ ಉದ್ದಕ್ಕೂ ಕಡಲತೀರದಲ್ಲಿ ಪ್ರತಿಫಲಿಸುವ ಪಟ್ಟಿ ಮತ್ತು ಮೀನುಗಾರಿಕೆ ಬಲೆಯನ್ನು (ಫಿಶ್ ನೆಟ್) ಕಟ್ಟಿ ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆಯಲಾಗುತ್ತದೆ.
ಕಡಲ ಪ್ರಕ್ಷುಬ್ಧತೆಯಿಂದಾಗಿ ಈ ಬಾರಿ ಜಿಲ್ಲಾಡಳಿತ ಸೆ. 25ರ ವರೆಗೂ ಪ್ರವೇಶ ನಿರ್ಬಂಧವನ್ನು ವಿಸ್ತರಿಸಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಬಂದಿರುವ ಕಾರಣ ಸೆ. 26ರಿಂದ ಬಲೆಯನ್ನು ತೆರವುಗೊಳಿಸಿ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ.
ಬೋಟಿಂಗ್ ಸೇರಿದಂತೆ ಜಲಸಾಹಸ ಕ್ರೀಡೆಗಳು ಈಗಾಗಲೇ ಟೆಂಡರ್ ಪ್ರಕ್ರಿಯೆಯಲ್ಲಿದ್ದು ಅದು ಮುಗಿದ ತತ್‌ಕ್ಷಣ ಆರಂಭಗೊಳ್ಳಲಿವೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ, ನಗರಸಭೆಯ ಪೌರಾಯುಕ್ತ ರಾಯಪ್ಪ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.