ಮರಳುಗಾರಿಕೆಗೆ ಅನುಮತಿ ನಕಾರ,ಪ್ರತಿಭಟನೆ;ಹೃದಯಾಘಾತಕ್ಕೆ ವ್ಯಕ್ತಿ ಸಾವು
Team Udayavani, Oct 26, 2018, 6:26 PM IST
ಉಡುಪಿ:ಮರಳುಗಾರಿಕೆಯನ್ನು ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾಪುವಿನ ಹೆಜಮಾಡಿ ನಿವಾಸಿ ಮೊಹಮ್ಮದ್ ಹನೀಫ್(42ವರ್ಷ) ಎಂಬವರು ಹೃದಯಾಘಾತದಿಂದ ನಿಧನರಾಗಿರುವ ಘಟನೆ ಶುಕ್ರವಾರ ನಡೆದಿದೆ.
ಮರಳುಗಾರಿಕೆ ಸ್ಥಗಿತಗೊಂಡಿದ್ದರಿಂದ ಕರಾವಳಿ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾಗಿ ಅರ್ಧಕ್ಕೆ ನಿಂತಿದ್ದರೆ, ಮತ್ತೊಂದೆಡೆ ಕೂಲಿ ಕಾರ್ಮಿಕರು ಕೆಲಸವಿಲ್ಲದೆ ಪರದಾಡುವಂತಾಗಿದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ತಲೆದೋರಿದೆ.
ಮರಳುಗಾರಿಕೆ ಸ್ಥಗಿತಗೊಳಿಸಿದ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರು.
ಮರಳುಗಾರಿಕೆಗಾಗಿ ಆರು ಲಕ್ಷ ರೂಪಾಯಿ ಸಾಲ ತೆಗೆದುಕೊಂಡು ದೋಣಿ ಹಾಕಿದ್ದ ಹನೀಫ್ ಅವರು ಮಾನಸಿಕ ಒತ್ತಡಕ್ಕೊಳಗಾಗಿದ್ದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.