ಉಡುಪಿ ಎಂಜಿಎಂ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ: ಉದ್ಘಾಟನೆ
Team Udayavani, Aug 17, 2017, 7:05 AM IST
ಉಡುಪಿ: ಬದುಕಿಗೆ ಶಿಕ್ಷಣ ಅವಶ್ಯ. ಈ ನೆಲೆಯಲ್ಲಿ ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ದಕ್ಕಿದ ಅಧಿಕಾರವನ್ನು ಮೈಗೆ ಅಂಟಿಸಿಕೊಳ್ಳದೇ, ರಚನಾತ್ಮಕ ರೀತಿಯಲ್ಲಿ ಅವರವರ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಅತಿಯಾದ ಅಧಿಕಾರದಾಹ ಭೃಷ್ಟಾಚಾರಕ್ಕೆ ಎಡೆ ಮಾಡಿಕೊಡುತ್ತದೆ ಎಂದು ಮಣಿಪಾಲ ವಿಶ್ವವಿದ್ಯಾಲಯದ ಜಿಯೋ ಪೊಲಿಟಿಕ್ಸ್ ಮತ್ತು ಅಂತಾರಾಷ್ಟ್ರೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ನಂದ ಕಿಶೋರ್ ಅವರು ಅಭಿಪ್ರಾಯಪಟ್ಟರು.
ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ನಡೆದ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿ ಅಧಿಕಾರಿ ಡಾ| ಸುರೇಶ್ ರಮಣ ಮಯ್ಯ ಪ್ರತಿಜ್ಞಾವಿಧಿ ಬೋಧಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲೆ ಪ್ರೊ| ಕುಸುಮಾ ಕಾಮತ್ ಅವರು ಮಾತನಾಡಿ, ಇಂತಹ ವೇದಿಕೆಗಳು ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಬೆಳೆಸುವಲ್ಲಿ ಪೂರಕವಾದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ ಎಂದರು.
ವಿದ್ಯಾರ್ಥಿ ಮುಖಂಡ ಶ್ರೀಕರ ಪೈ ಸ್ವಾಗತಿಸಿ, ವಿದ್ಯಾರ್ಥಿನಿ ಶಾಂತಿ ರಾವ್ ಅತಿಥಿಗಳನ್ನು ಪರಿಚಯಿಸಿದರು. ಎಡ್ರಿನ್ ಕಾರ್ಯಕ್ರಮ ನಿರ್ವಹಿಸಿ, ಕಾರ್ಯದರ್ಶಿ ಅಲ್ವಿಟಾ ಸಂಜನಾ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.