Udupi ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ:ಆರೋಪಿಗೆ 24 ವರ್ಷಗಳ ಕಠಿನ ಶಿಕ್ಷೆ
Team Udayavani, Jan 17, 2024, 1:28 AM IST
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ನೀಡಿದೆ.
ಬ್ರಹ್ಮಾವರ ತಾಲೂಕಿನ ರಿಕ್ಷಾ ಚಾಲಕ ಕೇಶವ ನಾಯ್ಕ (27) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 13 ವರ್ಷದ ನೊಂದ ಬಾಲಕಿಯು ಶಾಲೆಗೆ ಆರೋಪಿಯ ರಿಕ್ಷಾದಲ್ಲಿ ಹೋಗಿ ಬರುತ್ತಿದ್ದು, ಇದರಿಂದ ಆತ ಬಾಲಕಿಯ ಮನೆಯವರಿಗೂ ಪರಿಚಯಸ್ಥನಾಗಿದ್ದ.
ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ತಿಳಿಸಿದ ಆತ, 2023ರ ಫೆ. 17ರಂದು ಆಕೆಯನ್ನು ಪುಸಲಾಯಿಸಿ ತನ್ನ ರಿಕ್ಷಾದಲ್ಲಿ ಲಾಡ್ಜ್ಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಲ್ಲೂ ಹೇಳಬಾರದೆಂದು ಹೆದರಿಸಿದ್ದ. ಆಕೆ ಗರ್ಭವತಿಯಾದ ಬಳಿಕ ಹೆತ್ತವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿತ್ತು.
ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಿನ ಪೊಲೀಸ್ ನಿರೀಕ್ಷಕ ಜಯಾನಂದ ಕೆ. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. 28 ಸಾಕ್ಷಿಗಳ ಪೈಕಿ ಅಭಿಯೋಜನೆ ಪರವಾಗಿ 16 ಸಾಕ್ಷಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿ ದೋಷಿ ಎಂದು ಪರಿಗಣಿಸಿ ಅತ್ಯಾಚಾರ ಎಸಗಿರುವುದಕ್ಕೆ 20 ವರ್ಷಗಳ ಕಠಿನ ಜೈಲುಶಿಕ್ಷೆ ಮತ್ತು 20 ಸಾವಿರ ರೂ. ದಂಡ, ಬಾಲಕಿಯನ್ನು ಆಕೆಯ ಹೆತ್ತವರಿಗೆ ಗೊತ್ತಿಲ್ಲದೇ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಕ್ಕೆ 3 ವರ್ಷ ಕಾರಾಗೃಹ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ಹಾಗೂ ಬಾಲಕಿಗೆ ಬೆದರಿಕೆ ಹಾಕಿರುವುದಕ್ಕೆ ಒಂದು ವರ್ಷ ಶಿಕ್ಷೆ ಮತ್ತು 1ಸಾವಿರ ರೂ. ದಂಡ ವಿಧಿಸಿದರು. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಆರು ತಿಂಗಳ ಶಿಕ್ಷೆ ಮತ್ತು ನೊಂದ ಬಾಲಕಿಗೆ ಪರಿಹಾರವಾಗಿ ಸರಕಾರದಿಂದ 3ಲಕ್ಷ ರೂ. ನೀಡಬೇಕೆಂದು ನ್ಯಾಯಾಲಯ ಆದೇಶಿಸಿತು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.