ಉಡುಪಿ:ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ; ಮೂವರು ವಿದ್ಯಾರ್ಥಿನಿಯರ ಅಮಾನತು
ಇನ್ನೊಂದು ಕೋಮಿನ ವಿದ್ಯಾರ್ಥಿನಿಯರ ಆಕ್ಷೇಪ ; ತೀವ್ರತರದ ವಾಗ್ವಾದ
Team Udayavani, Jul 22, 2023, 12:44 AM IST
ಉಡುಪಿ : ನಗರದ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡಿ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಹಂಚಿಕೊಂಡ ಆರೋಪದ ಸಂಬಂಧ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
‘ಒಂದು ಕೋಮಿನ ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕೆಮರಾ ಇಟ್ಟು, ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ವೀಡಿಯೊ ಚಿತ್ರೀಕರಿಸಿದ್ದರು. ಅದನ್ನು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಹಂಚಿಕೊಂಡಿದ್ದರು. ಇದು ಗೊತ್ತಾಗುತ್ತಿದ್ದಂತೆ ಇನ್ನೊಂದು ಕೋಮಿನ ವಿದ್ಯಾರ್ಥಿನಿಯರು ಆಕ್ಷೇಪಿಸಿದ್ದರು. ಈ ಸಂದರ್ಭದಲ್ಲಿ ಇವರ ಮಧ್ಯೆ ತೀವ್ರತರದ ವಾಗ್ವಾದ ನಡೆದಿತ್ತು. ಆಸ್ಪತ್ರೆಯ ಆಡಳಿತ ಮಂಡಳಿಯು ವಿದ್ಯಾರ್ಥಿನಿಯರಿಂದ ಮುಚ್ಚಳಿಕೆ ಬರೆಸಿಕೊಂಡು ಶಿಸ್ತು ಕ್ರಮ ಜರಗಿಸಿದೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.