ಉಡುಪಿ: 6 ಮಂಗಗಳ ಶವ ಪತ್ತೆ
Team Udayavani, Feb 15, 2019, 12:30 AM IST
ಉಡುಪಿ: ಗುರುವಾರ ಜಿಲ್ಲೆಯಲ್ಲಿ ಒಟ್ಟು 6 ಮಂಗಗಳ ಶವಗಳು ಪತ್ತೆಯಾಗಿವೆ. ಈ ಪೈಕಿ 2 ಮಂಗಗಳು ಅಪಘಾತ ಮತ್ತು 1 ವಿದ್ಯುತ್ ಆಘಾತದಿಂದ ಮೃತಪಟ್ಟವುಗಳಾಗಿವೆ. ಮನುಷ್ಯರಲ್ಲಿ ಯಾರಲ್ಲಿಯೂ ಮಂಗನ ಕಾಯಿಲೆ ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.
ಮಣಿಪಾಲ ಕೆಎಂಸಿಯಲ್ಲಿ ಇದುವರೆಗೆ ಸಾಗರ ಹಾಗೂ ಆಸುಪಾಸಿನ ತಾಲೂಕುಗಳ ಸುಮಾರು 168 ಮಂದಿ ಶಂಕಿತ ಮಂಗನ ಕಾಯಿಲೆ ಪ್ರಕರಣಗಳಿಗಾಗಿ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ. ಕುಮಟಾದ ಇಬ್ಬರು, ಹೊನ್ನಾವರದ ಓರ್ವರು ಸೇರಿದಂತೆ ಒಟ್ಟು 25 ಮಂದಿ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆಎಂಸಿ ಆಸ್ಪತ್ರೆಯ ಪ್ರಕಟನೆ ತಿಳಿಸಿದೆ.
ಜಾಗೃತಿ ಕಾರ್ಯಕ್ರಮ
ಜಿಲ್ಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಉಣ್ಣಿ ನಿವಾರಕ ಡಿಎಂಪಿ ತೈಲ ವಿತರಣೆ ಸೇರಿದಂತೆ ವಿವಿಧ ನಿಯಂತ್ರಣ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳು ಆರೋಗ್ಯ ಇಲಾಖೆ ಜತೆ ಕೈ ಜೋಡಿಸಿವೆ.ಗುರುವಾರ ಕಮಲಶಿಲೆ ದೇವಸ್ಥಾನ ಮತ್ತು ಸಿದ್ದಾಪುರ ವಿಎಸ್ಎಸ್ಎನ್ ಬ್ಯಾಂಕ್ ವತಿಯಿಂದ ತಲಾ 25,000 ರೂ. ಮೌಲ್ಯದ ಡಿಎಂಪಿ ತೈಲವನ್ನು ವಿತರಿಸಲಾಯಿತು. ಹಲವೆಡೆ ಶಾಲೆಗಳಲ್ಲಿಯೂ ಜಾಗೃತಿ ಕಾರ್ಯಕ್ರಮ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.