ಕೆಸರು ಗದ್ದೆಯಾದ ಉಡುಪಿ ನರ್ಮ್ ಬಸ್‌ ನಿಲ್ದಾಣ


Team Udayavani, Mar 15, 2018, 6:30 AM IST

Udupi-Narm-bus-stand.jpg

ಉಡುಪಿ: ಧೂಳಿನಿಂದಾವೃತವಾಗಿದ್ದ ಉಡುಪಿ ಸಿಟಿ ಬಸ್‌ ನಿಲ್ದಾಣ ಸಮೀಪದ ನರ್ಮ್ ಬಸ್‌ ನಿಲ್ದಾಣ ಇದೀಗ ಕೆಸರು ಮಯವಾಗಿದೆ. 

ಧೂಳು ನಿಯಂತ್ರಿಸಲು ನೀರು ಸುರಿದಿದ್ದರಿಂದ ಪ್ರಯಾಣಿಕರು ಬಸ್‌ ಹತ್ತಲು ಸಂಕಷ್ಟ ಪಡುವಂತಾಗಿದೆ. ಸುಮಾರು ನೂರು ಅಡಿ ಉದ್ದ ಮತ್ತು 50 ಅಡಿ ಅಗಲದ ನರ್ಮ್ನ ತಾತ್ಕಾಲಿಕ ಬಸ್‌ ನಿಲ್ದಾಣದಿಂದಾಗಿ ಬಸ್‌ ಚಾಲಕರು ಮತ್ತು ಪ್ರಯಾಣಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಫ‌ುಟ್‌ಪಾತ್‌ ಏರಿ ಈ ಜಾಗಕ್ಕೆ ಬಸ್‌ಗಳು ಬರಬೇಕಿದೆ. ಆದರೆ ಲೋಫ್ಲೋರ್‌ ಹೊಂದಿರುವ ಈ ಬಸ್‌ಗಳ ಅಡಿ ಭಾಗ ಫ‌ುಟ್‌ಪಾತ್‌ಗೆ ತಾಗುತ್ತದೆ. ಇದನ್ನು ತಡೆಯಲು ಮಣ್ಣು ಹಾಕಿ ಎತ್ತರಿಸಲಾಗಿದೆ. ಇದು ಸಾಕಷ್ಟು ಧೂಳಿಗೆ ಕಾರಣವಾಗಿದೆ. 
 
ನಾಲ್ಕು ಬಸ್‌ಗಳು ಮಾತ್ರ
ಈ ಪುಟಾಣಿ ನಿಲ್ದಾಣದಲ್ಲಿ ನಾಲ್ಕು ನರ್ಮ್ ಬಸ್‌ಗಳಿಗೆ ಮಾತ್ರ ಅವಕಾಶ. ಬೇರೆ ಬಸ್‌ ಬಂದರೆ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲೂ ಜಾಗವಿಲ್ಲದಾಗಿದೆ. ಅಲ್ಲದೇ ಈ ಸ್ಥಳದಲ್ಲಿ ತಿರುಗಿಸುವುದು, ಪಾರ್ಕಿಂಗ್‌ ಮಾಡುವುದಕ್ಕೂ ಅತಿ ಜಾಗರೂಕತೆ ವಹಿಸಬೇಕಿದೆ ಎನ್ನುತ್ತಾರೆ ಬಸ್‌ ಚಾಲಕರು ಸಿಟಿ ಬಸ್‌ ನಿಲ್ದಾಣಕ್ಕೆ ಪ್ರವೇಶವಿಲ್ಲ ಸಿಟಿ ಬಸ್‌ ನಿಲ್ದಾಣದಲ್ಲಿ ಸದ್ಯ ನರ್ಮ್ ಬಸ್‌ಗಳಿಗೆ ಅವಕಾಶ ನೀಡುತ್ತಿಲ್ಲ. ನರ್ಮ್ ಬಸ್‌ಗಳು ಸಮಯ ಪಾಲನೆ ಮಾಡುತ್ತಿಲ್ಲ ಎಂಬ ತಗಾದೆ ಖಾಸಗಿಯವರದ್ದು. ಸಿಟಿ ಬಸ್‌ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಿದರೆ, ಧೂಳು, ಜಾಗದ ಕೊರತೆ ಸಮಸ್ಯೆ ಬಹುತೇಕ ನೀಗುತ್ತದೆ.  

ಕಾಮಗಾರಿ ಮುಕ್ತಾಯವರೆಗೂ ಕಿರಿಕ್‌! 
ವಿದ್ಯಾಂಗ ಉಪನಿರ್ದೇಶಕ ಕಚೇರಿ ಆವರಣ ತೆರವುಗೊಳಿಸಿ ಅದೇ ಸ್ಥಳದಲ್ಲಿ ಹೊಸ ನರ್ಮ್ ಬಸ್‌ ನಿಲ್ದಾಣ ನಿರ್ಮಿಸಲಾಗುತ್ತದೆ. ಇದಕ್ಕಾಗಿ ಕಾಮಗಾರಿ ನಡೆಯುತ್ತಲೇ ಇದೆ. ಸುಮಾರು ನಾಲ್ಕು ಕೋಟಿ ರೂ. ವೆಚ್ಚದ ಈ ಕಾಮಗಾರಿಗೆ ಕಳೆದ ಸೆಪ್ಟಂಬರ್‌ನಲ್ಲಿ ಶಿಲಾನ್ಯಾಸ ನೆರವೇರಿದ್ದು, ಕೆಲಸ ಪೂರ್ಣವಾಗುವ ವರೆಗೂ ಧೂಳು-ಕೆಸರಿನಿಂದ ಜನರಿಗೆ ಮುಕ್ತಿ ಇಲ್ಲ ಎನ್ನುವಂತಾಗಿದೆ. ಇನು ಮಳೆಗಾಲದ ಸಂದರ್ಭದಲ್ಲಂತೂ ಪ್ರಯಾಣಿಕರು ಮತ್ತಷ್ಟು ಕಷ್ಟಪಡುವ ಸಾಧ್ಯತೆಗಳೇ ಅಧಿಕವಾಗಿದೆ.  

ಟಾಪ್ ನ್ಯೂಸ್

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.