Udupi ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತ: ಡಿಸಿ ಸೂಚನೆ
Team Udayavani, Dec 19, 2023, 11:05 PM IST
ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ಗಳಿಗೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು.
ತಮ್ಮ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾ.ಹೆ.66, 169, 169ಎ ಗೆ ಸಂಬಂಧಿಸಿದ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರಾವಳಿ ಬೈಪಾಸ್ನಿಂದ ಮಲ್ಪೆ ವರೆಗೆ ಹೆದ್ದಾರಿ ರಸ್ತೆ ನಿರ್ಮಾಣ ಹಾಗೂ ವಿಸ್ತರಣೆಗೆ ಭೂ ಸ್ವಾಧೀನದ ತಾಂತ್ರಿಕ ಸಮಸ್ಯೆಯನ್ನು ಇಲಾಖೆ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಸಮನ್ವಯದೊಂದಿಗೆ ಬಗೆಹರಿಸಿಕೊಂಡು ಕಾಮಗಾರಿ ಪ್ರಾರಂಭಿಸಬೇಕು ಎಂದರು.
ಇಂದ್ರಾಳಿ ಮೇಲ್ಸೇತುವೆಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ, ವಿಳಂಬ ಧೋರಣೆ ಮುಂದುವರಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸಂತೆಕಟ್ಟೆ ಓವರ್ ಪಾಸ್ ಕಾಮಗಾರಿ ತ್ವರಿತವಾಗಿ ಮುಗಿಸಲು ಸೂಚಿಸಿದರು.
ಶಾಸಕ ಸುನಿಲ್ ಕುಮಾರ್, ಎಸ್ಪಿ ಡಾ| ಅರುಣ್ ಕೆ., ಪೌರಾಯುಕ್ತ ರಾಯಪ್ಪ, ರಾ.ಹೆ. ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮದ್ ಅಜ್ಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.