Udupi; ನೇಜಾರು ಪ್ರಕರಣ: ಚೌಗುಲೆ ಪೆರೋಲ್ ಅರ್ಜಿ ತಿರಸ್ಕಾರ
Team Udayavani, Feb 9, 2024, 11:53 PM IST
ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಪೆರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯ ತಿರಸ್ಕರಿಸಿ ಶುಕ್ರವಾರ ಆದೇಶಿಸಿದ್ದಾರೆ.
ಫೆ. 1ರಂದು ನಿಧನ ಹೊಂದಿದ ಆರೋಪಿಯ ಸಹೋದರ ನಿತಿನ್ ಅವರ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪೆರೋಲ್ ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಫೆ. 8ರಂದು ಅರ್ಜಿ ಸಲ್ಲಿಸಲಾಗಿತ್ತು.
ಆದರೆ ಇದಕ್ಕೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗೆ ಪೆರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿಯ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ. ಅದೇ ರೀತಿ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದಿರುವುದರಿಂದ ಆತನಿಗೆ ಪೆರೋಲ್ ನೀಡಬಾರದು ಎಂದು ವಾದ ಮಂಡಿಸಿದರು.
ಪ್ರಕರಣದ ದೋಷಾರೋಪಣ ಪಟ್ಟಿ ಸಿದ್ಧಗೊಂಡಿದ್ದು, ಫೆ. 12ರಂದು ಪೊಲೀಸರು ನ್ಯಾಯಾಲಯಕ್ಕೆ ಅದನ್ನು ಸಲ್ಲಿಸುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.