Udupi ಪೋಕ್ಸೋ ಪ್ರಕರಣ: ಆರೋಪಿಗಳು ದೋಷಮುಕ್ತ
Team Udayavani, Sep 1, 2023, 9:15 PM IST
ಉಡುಪಿ: ಅಪ್ತಾಪ್ತ ವಯಸ್ಕ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ತ್ವರಿತ ವಿಶೇಷ ನ್ಯಾಯಾಲಯವು ಶುಕ್ರವಾರ ದೋಷಮುಕ್ತಗೊಳಿಸಿ ಆದೇಶಿಸಿದೆ.
ಉದ್ಯಾವರದ ಗುಡ್ಡೆಯಂಗಡಿ ನಿವಾಸಿ ಸುರ್ಫುದ್ದೀನ್ ಮತ್ತು ಅವರ ಸಹೋದರಿ ಶಬ್ನಾಝ್ ಖುಲಾಸೆಗೊಂಡ ಆರೋಪಿಗಳು. ಸುರ್ಫುದ್ದೀನ್ ತನ್ನ ಸಹೋದರಿಯ 17 ವರ್ಷದ ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಸಂತ್ರಸ್ತೆಯ ಚಿಕ್ಕಮ್ಮ 2020ರ ನ. 5ರಂದು ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಆರೋಪಿ ಸುರ್ಫುದ್ದೀನ್ ನನ್ನು ಬಂಧಿಸಿದ್ದರು. ಈ ಕೃತ್ಯಕ್ಕೆ ಸಹಾಯ ಮಾಡಿದ ಆರೋಪದಲ್ಲಿ ಶಬ್ನಾಝ್ ನ್ನೂ ಪೊಲೀಸರು ಅನಂತರ ಬಂಧಿಸಿದ್ದರು.
ತನಿಖೆ ನಡೆಸಿದ ಪೊಲೀಸರು 2021ರ ಜ. 2ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳ ಮೇಲಿನ ಆರೋಪ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟು ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ. ಸುರ್ಫುದ್ದೀನ್ ಪರ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ಹಾಗೂ ಶಬ್ನಾಝ್ ಪರ ವಕೀಲ ಶಾಂತಾರಾಮ ಶೆಟ್ಟಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.