ಪುಸಲಾಯಿಸಿ ಬಾಲಕರಿಗೆ ಲೈಂಗಿಕ ದೌರ್ಜನ್ಯ: ಚಂದ್ರ ಹೆಮ್ಮಾಡಿಗೆ ಮತ್ತೆರಡು ಪ್ರಕರಣದಲ್ಲಿ ಜೈಲು
Team Udayavani, Apr 1, 2022, 8:00 AM IST
ಉಡುಪಿ: ಬಾಲಕರಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಎರಡು ಪ್ರತ್ಯೇಕ ಪ್ರಕರಣದಲ್ಲಿ ಆರೋಪಿ ಚಂದ್ರ ಕೆ. ಹೆಮ್ಮಾಡಿ ದೋಷಿಯೆಂದು ಉಡುಪಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಒಂದನೇ ಪ್ರಕರಣದಲ್ಲಿ ಸಂತ್ರಸ್ತ 15 ವರ್ಷದ ಬಾಲಕನನ್ನು ಶಾಲೆಯಲ್ಲಿ ಹಾಡುಗಾರನೆಬಂತೆ ಪರಿಚಯಿಸಿ ಕೊಂಡ ಆರೋಪಿ ಶಾಲಾ ಆಟದ ಮೈದಾನದಲ್ಲಿರುವಾಗ ಬೈಕ್ ಸವಾರಿ ಮಾಡಿಸುವ ನೆಪದಲ್ಲಿ ಬಾಲಕನನ್ನು ಶೌಚಾಲಯದೊಳಕ್ಕೆ ಕರೆಯಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ. 23 ಸಾಕ್ಷ್ಯಾಧಾರಗಳ ಪೈಕಿ 15 ಸಾಕ್ಷಿಗಳ ವಿಚಾರಣೆ ನಡೆಸಿದ್ದು, ನೊಂದ ಬಾಲಕ ನುಡಿದ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿಗಳ ಆಧಾರದಲ್ಲಿ ಚಂದ್ರ ಕೆ. ಹೆಮ್ಮಾಡಿ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ 10 ವರ್ಷ ಜೈಲು ಹಾಗೂ ನೊಂದ ಬಾಲಕನಿಗೆ 25 ಸಾವಿರ ರೂ. ಪರಿಹಾರ ನೀಡಲು ಆದೇಶಿಸಿದೆ.
22 ಸಾಕ್ಷಿದಾರರ ಪೈಕಿ 14 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ನೊಂದ ಬಾಲಕನ ಸಾಕ್ಷಿ ಹಾಗೂ ಸಾಂದರ್ಭಿಕ ಸಾಕ್ಷಿಗಳು ಅಭಿಯೋಜನೆಗೆ ಪೂರಕವಾಗಿದ್ದು, ಅಪರಾಧಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದು ಹಾಗೂ ನೊಂದ ಬಾಲಕನಿಗೆ 25 ಸಾವಿರ ರೂ. ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.
ಈ ಎರಡು ಪ್ರತ್ಯೇಕ ಪ್ರಕರಣದ ದೋಷಾರೋಪಣೆ ಪಟ್ಟಿಯನ್ನು ಅಂದಿನ ಬೈಂದೂರು ಸಿಪಿಐ ಪರಮೇಶ್ವರ ಆರ್. ಗುನಗ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಎರ್ಮಾಳು ಕಲ್ಪನಾ ಅವರು ತೀರ್ಪು ನೀಡಿದ್ದು, ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು. ಆರೋಪಿ ಚಂದ್ರನ ಮೇಲೆ ಇನ್ನೂ 18 ಪ್ರಕರಣಗಳು ವಿಚಾರಣೆಗೆ ಬಾಕಿ ಇದೆ.
ಗುಹೆಯೊಳಗೆ ಕರೆದೊಯ್ದಿದ್ದ :
ಮತ್ತೂಂದು ಪ್ರಕರಣ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಚಂದ್ರ ಹೆಮ್ಮಾಡಿ 13 ವರ್ಷದ ಬಾಲಕನನ್ನು ಪರಿಚಯಿಸಿಕೊಂಡು ಗುಹೆ ಫೋಟೋ ತೆಗೆಯಲು ಹೋಗುವುದಿದೆ ಎಂದು ಸ್ನೇಹಿತನೊಂದಿಗೆ ಬೈಕಿನಲ್ಲಿ ಕರೆದೊಯ್ದು ಸ್ನೇಹಿತನಿಗೆ ಆಟವಾಡಲು ಮೊಬೈಲ್ ನೀಡಿ ಬಾಲಕನನ್ನು ಗುಹೆಯೊಳಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವ ಆರೋಪದಡಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.