Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ
ಜಿಲ್ಲೆಯಲ್ಲಿ ಒಟ್ಟು 10,61,289 ಮತದಾರರು
Team Udayavani, Jan 7, 2025, 12:03 AM IST
ಮಣಿಪಾಲ: ಜಿಲ್ಲೆಯ 5 ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಪರಿಶೀಲಿಸಬಹುದು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಸೋಮವಾರ ಜರಗಿದ ಮತ ದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-ಅಂತಿಮ ಮತದಾರರ ಪಟ್ಟಿಯನ್ನು ಅವರು ರಾಜಕೀಯ ಪಕ್ಷಗಳಮುಖಂಡರಿಗೆ ಹಸ್ತಾಂತರಿಸಿ ಮಾತನಾಡಿದರು.
ಜಿಲ್ಲೆಯ ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,17,890 ಪುರುಷರು, 1,22,914 ಮಹಿಳೆಯರು, ಇಬ್ಬರು ತೃತೀಯ ಲಿಂಗಿಗಳು ಸಹಿತ 2,40,806 ಮತದಾರರು, ಕುಂದಾಪುರದಲ್ಲಿ 1,01,959 ಪುರುಷರು, 1,10,025 ಮಹಿಳೆಯರು, ಇಬ್ಬರು ತೃತೀಯ ಲಿಂಗಿಗಳು ಸಹಿತ 2,11,986 ಮತದಾರರು, ಉಡುಪಿಯಲ್ಲಿ 1,06,782 ಪುರುಷರು, 1,14,839 ಮಹಿಳೆಯರು, ಮೂವರು ತೃತೀಯ ಲಿಂಗಿಗಳು ಸಹಿತ 2,21,624, ಕಾಪು ಕ್ಷೇತ್ರದಲ್ಲಿ 92,598 ಪುರುಷರು, 1,00,583 ಮಹಿಳೆಯರು, ನಾಲ್ವರು ತೃತೀಯ ಲಿಂಗಿಗಳು ಸಹಿತ 1,93,185, ಕಾರ್ಕಳದಲ್ಲಿ 93,003 ಪುರುಷರು, 1,00,685 ಮಹಿಳೆಯರು ಸಹಿತ 1,93,688 ಹಾಗೂ ಜಿಲ್ಲೆಯಲ್ಲಿ ಒಟ್ಟು 5,12,232 ಪುರುಷರು, 5,49,046 ಮಹಿಳೆಯರು, 11 ತೃತೀಯ ಲಿಂಗಿಗಳು ಸಹಿತ 10,61,289 ಮತದಾರರಿದ್ದಾರೆ ಎಂದು ತಿಳಿಸಿದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ ನಮೂನೆ-6ರಲ್ಲಿ 3,998, ನಮೂನೆ-6ಎಯಲ್ಲಿ 1, ನಮೂನೆ-8ರಲ್ಲಿ 1,288 ಸಹಿತ ಒಟ್ಟು 5,287 ಜನರು ಹೊಸದಾಗಿ ಸೇರ್ಪಡೆಗೆ ಅರ್ಜಿ ಸಲ್ಲಿಸಿ, 5,286 ಯುವ ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ. ನಮೂನೆ- 7ರಲ್ಲಿ 7,398 ಅರ್ಜಿಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಹಾಗೂ ನಮೂನೆ-8ರಲ್ಲಿ ತಿದ್ದುಪಡಿಗಾಗಿ 5,499 ಜನರಿಂದ ಅರ್ಜಿಗಳು ಸಲ್ಲಿಕೆಯಾಗಿದ್ದು, 7,398 ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. 5,499 ಮತದಾರರ ಹೆಸರನ್ನು ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು.
ಮತದಾರರ ಪಟ್ಟಿಗೆ ಸಂಬಂಧಿಸಿ ಯಾವುದೇ ರೀತಿಯ ಮಾಹಿತಿಯನ್ನು ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ವೋಟರ್ ಹೆಲ್ಪ್ಲೈನ್ ನಂ: 1950 ಇದೆ ಎಂದರು.
ಜಿಲ್ಲೆಯ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿ.ಡಿ ಯನ್ನು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ವಾರ್ತಾಧಿಕಾರಿ ಮಂಜುನಾಥ್ ಬಿ., ಬಿಜೆಪಿ ಮುಖಂಡ ಚಂದ್ರಶೇಖರ ಪ್ರಭು, ಕಾಂಗ್ರೆಸ್ ಮುಖಂಡ ಹಬೀಬ್ ಅಲಿ, ಜೆಡಿಎಸ್ ಮುಖಂಡ ಜಯರಾಮ ಆಚಾರ್ಯ ಉಪಸ್ಥಿತರಿದ್ದರು.
ಜ. 25: ರಾಷ್ಟ್ರೀಯ ಮತದಾರರ ದಿನಾಚರಣೆ
ಜ. 25ರಂದು ಜಿಲ್ಲಾಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆಯು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಗುವುದು ಎಂದು ತಿಳಿಸಿದರು.
ದ.ಕ.ದಲ್ಲಿ 18,13,556 ಮತದಾರರು
ಮಂಗಳೂರು: ಚುನಾವಣ ಆಯೋಗ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು ಇದ್ದಾರೆ. ಈ ಪೈಕಿ 8,84,373 ಪುರುಷರು, 9,29,115 ಮಹಿಳೆಯರು ಹಾಗೂ ಮಂಗಳಮುಖೀಯರು-68 ಮಂದಿ ಮತದಾರರಾಗಿದ್ದಾರೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿದರು.
ವಿಧಾನಸಭಾವಾರು ಅಂತಿಮ ಮತದಾರರ ಪಟ್ಟಿಯಲ್ಲಿ ಬೆಳ್ತಂಗಡಿ-2,32,235, ಮೂಡುಬಿದಿರೆ-2,10,088, ಮಂಗಳೂರು ನಗರ ಉತ್ತರ-2,55,515, ಮಂಗಳೂರು ನಗರ ದಕ್ಷಿಣ-2,52,268, ಮಂಗಳೂರು-2,10,127, ಬಂಟ್ವಾಳ-2,28,962, ಪುತ್ತೂರು-2,16,068, ಸುಳ್ಯ-2,08,293 ಮತದಾರರಿದ್ದಾರೆ.
18 ವರ್ಷ ತುಂಬುವ ಮತದಾರರ ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು ಹಾಗೂ ನಿರಂತರ ಪರಿಷ್ಕರಣೆಯ ಸಂದರ್ಭದಲ್ಲಿ ತೆಗೆದು ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್ ಶೀಘ್ರ ಆರಂಭ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.