ಗೋರಕ್ಷಣೆ, ಸಮಾನ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು

ಉಡುಪಿ ಸಂತ ಸಂಗಮದ ಆಗ್ರಹ, ನಿರ್ಣಯ

Team Udayavani, Nov 20, 2019, 6:15 AM IST

hh-24

ಉಡುಪಿ: ಗೋಹತ್ಯೆಯನ್ನು ಸಂಪೂರ್ಣ ನಿಷೇಧಿಸಿ ಗೋ ಸಂರಕ್ಷಣೆ ಮಾಡಬೇಕು, ಸಮಾನ ನಾಗರಿಕ ಸಂಹಿತೆ ಮತ್ತು ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ರೂಪಿಸಬೇಕು ಎಂದು ಬಾಬಾ ರಾಮದೇವ್‌ ನೇತೃತ್ವದಲ್ಲಿ ನಡೆಯುತ್ತಿರುವ ಯೋಗ ಶಿಬಿರದ ಅಂಗವಾಗಿ ಮಂಗಳವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜನೆಗೊಂಡ ಸಂತ ಸಂಗಮವು ನಿರ್ಣಯ ಅಂಗೀಕರಿಸಿ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ.

ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು. ಗೋವಿನ ಸಂರಕ್ಷಣೆ ಜತೆ ಗಂಗಾ ಶುದ್ಧೀಕರಣವಾಗಬೇಕು. ಜಗತ್ತಿಗೆ ಭಾರತ ನೀಡಿದ ಕೊಡುಗೆಗಳಾದ ಯೋಗ ಮತ್ತು ಆಯುರ್ವೇದಗಳನ್ನು ರಾಮದೇವ್‌ ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಭಾರತವು ರೋಗಮುಕ್ತ, ಶೀಲಯುಕ್ತ, ಭ್ರಷ್ಟಾಚಾರತ್ಯಕ್ತ, ರಾಷ್ಟ್ರಭಕ್ತ, ಶಕ್ತರಾಷ್ಟ್ರವಾಗ ಬೇಕು ಎಂದು ಅಧ್ಯಕ್ಷತೆ ವಹಿಸಿದ ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಈಗ ಕಾಶ್ಮೀರ ಭಾರತದ ಭೂಪಟದಲ್ಲಿ ಸೇರಿದೆ. ಮುಂದೆ ಪಾಕ್‌ ಆಕ್ರಮಿತ ಕಾಶ್ಮೀರದ ಭಾಗವೂ ಸೇರುವಂತಾಗಲಿ ಎಂದು ಪರ್ಯಾಯ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಹಾರೈಸಿದರು.

ಭಾರತೀಯ ಜೀವನ ಪದ್ಧತಿಯಾದ ಯೋಗ, ಧ್ಯಾನಗಳ ಮಹತ್ವವನ್ನು ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಂತರು ಕೊಂಡಾಡಿ, ಅವುಗಳ ಪುನರುಜ್ಜೀವನಕ್ಕೆ ಬಾಬಾ ರಾಮದೇವರ ಕೊಡುಗೆಯನ್ನು ಶ್ಲಾಘಿಸಿದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾ ಸಾಗರ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾ ಪ್ರಸನ್ನತೀರ್ಥ ಶ್ರೀಪಾದರು, ಪ್ರಯಾಗದ ಶ್ರೀ ವಿದ್ಯಾತ್ಮತೀರ್ಥ ಶ್ರೀಪಾದರು, ಆನೆಗೊಂದಿ ಪೀಠದ ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕೊಂಡೆವೂರು ಶ್ರೀ ಯೋಗಾನಂದಸರಸ್ವತೀ ಸ್ವಾಮೀಜಿ, ಕನ್ಯಾನದ ಶ್ರೀ ಶಶಿಕಾಂತ ಸ್ವಾಮೀಜಿ, ಮೂಡು ಬಿದಿರೆ ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕನ್ಯಾನ ರಾಮಕ್ಷೇತ್ರ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ, ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಬಾಳೆಕುದ್ರು ಮಠದ ಶ್ರೀನೃಸಿಂಹಾಶ್ರಮ ಸ್ವಾಮೀಜಿ, ಬೊಳ್ಳೊಟ್ಟು ಶ್ರೀ ವಿಖ್ಯಾತಾದಂದ ಸ್ವಾಮೀಜಿ, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಭಾಗವಹಿಸಿದ್ದರು.

ಪರ್ಯಾಯ ಶ್ರೀ ಪಲಿಮಾರು ಮಠದ ಆಡಳಿತಾಧಿಕಾರಿ ಪ್ರಹ್ಲಾದ ರಾವ್‌ ಕಾರ್ಯಕ್ರಮ ನಿರ್ವಹಿಸಿ
ಡಾ| ವಂಶಿ ಕೃಷ್ಣಾಚಾರ್ಯ ಸ್ವಾಗತಿಸಿದರು. ಬಾಲಾಜಿ ರಾಘವೇಂದ್ರ ಆಚಾರ್ಯ ನಿರ್ಣಯಗಳನ್ನು ಓದಿದರು.

ಇಂದು ಕಲ್ಲಡ್ಕ , ಮೂರ್ಕಜೆಗೆ ರಾಮದೇವ್‌
ಕಲ್ಲಡ್ಕ: ಯೋಗ ಗುರು ಬಾಬಾ ರಾಮದೇವ್‌ ನ. 20ರಂದು ಮಧ್ಯಾಹ್ನ 1 ಗಂಟೆಗೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು ಒಂದು ಗಂಟೆ ಕಾಲ ವಿದ್ಯಾಕೇಂದ್ರದಲ್ಲಿದ್ದು ಬಳಿಕ ವಿಟ್ಲ ಮೂರ್ಕಜೆಯ ಮೈತ್ರೇಯಿ ಗುರುಕುಲಕ್ಕೆ ತೆರಳುವರು ಎಂದು ವಿದ್ಯಾಕೇಂದ್ರದ ಮಾಹಿತಿ ತಿಳಿಸಿದೆ.

ಬಾಬರ್‌, ಔರಂಗಜೇಬ್‌ ಕಾಲದಲ್ಲಿಯೂ ಗೋಹತ್ಯೆ ನಿಷೇಧ
ಬಾಬರ್‌, ಔರಂಗಜೇಬ್‌ ಕಾಲದಲ್ಲಿಯೂ ಗೋಹತ್ಯೆ ನಿಷೇಧವಿತ್ತು. ಶೇ.99 ಮುಸ್ಲಿಮರು ಭಾರತದವರೇ. ಮಾರ್ಕ್ಸ್ವಾದಿ ಸಿದ್ಧಾಂತಿಗಳು ಮಾತ್ರ ಮೂಲ ನಿವಾಸಿಗಳು ಎಂಬ ವಾದದ ಮೂಲಕ ವೇದಿಕೆಯಲ್ಲಿರುವ ಸಂತರನ್ನೂ ವಿದೇಶೀ ಮೂಲದವರೆನ್ನುತ್ತಾರೆ. ಎಲ್ಲರೂ ಇಲ್ಲಿನ ಮೂಲನಿವಾಸಿಗಳೇ. ಪ್ರಾಣಿಗಳ ವಧೆಯಿಂದ ಪರಿಸರ ಮಾಲಿನ್ಯ ಜಾಸ್ತಿಯಾಗುತ್ತಿದೆ ಎಂದು ಬಾಬಾ ರಾಮದೇವ್‌ ಹೇಳಿದರು.
ಡಾ| ಅಂಬೇಡ್ಕರ್‌ ಏಕದೇಶಕ್ಕೆ ಏಕ ಕಾನೂನು ಎಂದಿದ್ದರು. ಈಗ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕಾಗಿದೆ ಎಂದರು.

“ಎಲ್ಲ ಪೂಜ್ಯ ಸಂತರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು, ಪ್ರೀತಿಯ ಸಹೋದರ ಸಹೋದರಿಯರೇ ಪ್ರೀತಿಪೂರ್ವಕ ನಮಸ್ಕಾರಗಳು’ ಎಂಬ ಶುದ್ಧ ಕನ್ನಡದ ವಾಕ್ಯಗಳನ್ನು ಬಾಬಾ ರಾಮದೇವ್‌ ಪ್ರಾರಂಭದಲ್ಲಿ ನುಡಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.