Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Team Udayavani, Oct 5, 2024, 7:30 AM IST
ಉಡುಪಿ: ನಗರದ 31ನೇ ಬೈಲೂರು ವಾರ್ಡ್‌ನಲ್ಲಿ ಸೆ.29ರ ರಾತ್ರಿ ನಡೆದ ಸರಣಿ ಕಳ್ಳತನದ ಕಳ್ಳರ ಚಲನವಲನಗಳ ಮಾಹಿತಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಒಟ್ಟು 3 ಮಂದಿ ಮುಸುಕುಧಾರಿಗಳು ಅತ್ತಿಂದಿತ್ತ ಓಡಾಡುವ ದೃಶ್ಯ ಕಂಡುಬಂದಿದೆ. ಮುಖಕ್ಕೆ ಮಾಸ್ಕ್ ಧರಿಸಿ ತಲೆಗೆ ಬಿಳಿ ಬಟ್ಟದ ಬಟ್ಟೆಯಲ್ಲಿ ಕಟ್ಟಿಕೊಂಡು ಕೃತ್ಯ ಎಸಗಿದ್ದಾರೆ ಎನ್ನುವುದು ಇದರಿಂದ ಗೋಚರಿಸುತ್ತದೆ. ಕಾಂಪೌಂಡ್‌ವೊಂದರ ಹೊರಭಾಗದಲ್ಲಿ ಅವರು ಕಂಡುಬಂದಿದ್ದಾರೆ. ಆದರೆ ಅನಂತರ ಎತ್ತ ಹೋಗಿದ್ದಾರೆ ಎಂಬ ಬಗ್ಗೆ ಪೊಲೀಸರಿಗೆ ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ.
ಈಗಾಗಲೇ ವಿವಿಧ ಅಂಗಡಿ, ಮನೆಗಳ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಆದರೆ ಅವರು ಯಾವ ಭಾಗಕ್ಕೆ ತೆರಳಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಸೆ.29ರಂದು ಕಳ್ಳತನ ನಡೆಸಿದ ಕಳ್ಳರು ಸುಮಾರು 9 ಲ.ರೂ.ಗೂ ಅಧಿಕ ಮೌಲ್ಯದ ಚಿನ್ನ ಸಹಿತ ನಗದು ದೋಚಿ ಪರಾರಿಯಾಗಿದ್ದರು. ಘಟನೆ ನಡೆದು ವಾರ ಕಳೆಯುತ್ತಿದ್ದರೂ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಗರದ ಹಲವೆಡೆ ಸಿಸಿಟಿವಿಗಳನ್ನು ಪರಿಶೀಲಿಸಿದ್ದು, ತಾಂತ್ರಿಕ ಸಾಕ್ಷ್ಯಗಳನ್ನು ಇಟ್ಟುಕೊಂಡು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಕೆಲವು ಆರೋಪಿಗಳ ಮೇಲೆ ಅನುಮಾನವಿದ್ದು, ಅದರಂತೆ ಒಂದು ತಂಡ ಉತ್ತರಭಾರತಕ್ಕೆ ಹೋಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.