ಉಡುಪಿ: ಮಕ್ಕಳ ಕಳ್ಳತನ; ಸಂಶಯಾಸ್ಪದ ವ್ಯಕ್ತಿಗಳ ಮಾಹಿತಿ ನೀಡಲು ಎಸ್ಪಿ ಸೂಚನೆ
Team Udayavani, Sep 16, 2022, 7:51 AM IST
ಉಡುಪಿ: ಮಕ್ಕಳ ಕಳ್ಳತನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ಬೇರೆ ದೇಶ, ರಾಜ್ಯದ ವೀಡಿಯೋಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ನಡೆಯುವ ಬಗ್ಗೆ ತಿಳಿದುಬಂದಿದೆ.
ಸಾರ್ವಜನಿಕರು ತಮ್ಮ ನಗರ, ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದರೆ 112 ಸಹಾಯವಾಣಿಗೆ ಕರೆ ಮಾಡಬೇಕು. ಇದರಿಂದ ಕೂಡಲೇ ಘಟನ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕಷವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.