ಅಕ್ರಮ ಮರಳುಗಾರಿಕೆ ಇನ್ನೂ ನಿಂತಿಲ್ಲ: ಎಸ್‌ಪಿಗೆ ದೂರು

Team Udayavani, Jun 1, 2019, 6:00 AM IST

310519Astro02

ಉಡುಪಿ: ಗಂಗೊಳ್ಳಿಯಲ್ಲಿ ಬೆಳಗ್ಗಿನಿಂದ ರಾತ್ರಿ ತನಕ ಮರಳುಗಾರಿಕೆ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಗಮನಹರಿಸುವಂತೆ ಉಡುಪಿ ಜಿಲ್ಲಾ ಎಸ್‌ಪಿಯವರು ನಡೆಸಿದ ಫೋನ್‌ಇನ್‌ ಕಾರ್ಯಕ್ರಮದಲ್ಲಿ ನಾಗರಿಕರು ದೂರಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಎಸ್‌ಪಿ ನಿಶಾ ಜೇಮ್ಸ್‌ ತಿಳಿಸಿದರು.

ಮರಳುಗಾರಿಕೆ ಸಂಬಂಧಿಸಿದಂತೆ ಮಾರ್ಚ್‌ನಲ್ಲಿ 17, ಎಪ್ರಿಲ್‌ನಲ್ಲಿ 8 ಹಾಗೂ ಮೇ ತಿಂಗಳಲ್ಲಿ 19 ಸಹಿತ ಒಟ್ಟು 44 ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ಎಸ್‌ಪಿಯವರು ತಿಳಿಸಿದರು. ಶುಕ್ರವಾರ ನಡೆದ ಪೊಲೀಸ್‌ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಅವರು ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಈ ಮಾಹಿತಿ ನೀಡಿದರು.

ಇದೇ ವೇಳೆ ಉಡುಪಿ ನಗರ, ಮಣಿಪಾಲದ ಹಲವು ಭಾಗಗಳಲ್ಲಿ ಸಿಗ್ನಲ್ ಅಳವಡಿಕೆಗೆ ಪೊಲೀಸ್‌ ಇಲಾಖೆಯು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದರು. ಅಜ್ಜರಕಾಡು ಆಸ್ಪತ್ರೆ ಬಳಿ ಬಸ್‌ ನಿಲ್ದಾಣ ಹಾಗೂ ರಿಕ್ಷಾ ನಿಲ್ದಾಣ ಇರುವುದರಿಂದ ಶಾಲಾ ಕಾಲೇಜು ಮಕ್ಕಳು ಹಾಗೂ ಜನರು ಆಸ್ಪತ್ರೆಯ ಗೇಟಿನ ಬಳಿಯೇ ನಿಲ್ಲುತ್ತಿದ್ದಾರೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮಸ್ಯೆ ಉಂಟಾಗುತ್ತಿದೆ. ಬಸ್‌ ನಿಲ್ದಾಣವನ್ನು ಬೇರೆ ಕಡೆಗೆ ವರ್ಗಾಯಿಸುವಂತೆ ನಾಗರಿಕರೊಬ್ಬರು ತಿಳಿಸಿದರು. ಈ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ಕ್ರಮತೆಗೆದುಕೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದರು.

ಅಪ್ರಾಪ್ತರಿಂದ ವಾಹನ ಚಾಲನೆ
ಬೈಂದೂರು-ಉಪ್ಪುಂದ ಬಳಿ ಅಸ್ತವ್ಯಸ್ತವಾಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುತ್ತಿದ್ದರೆ ಈ ಬಗ್ಗೆ ಗಮನಹರಿಸುವಂತೆ ನಾಗರಿಕರೊಬ್ಬರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಪಿಯವರು ಈ ಬಗ್ಗೆ ರಸ್ತೆ ಸುರಕ್ಷಾ ಅಭಿಯಾನದ ಮೂಲಕ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.

ಮಟ್ಕಾ ಹಾವಳಿ
ಬೈಂದೂರು ಪರಿಸರದಲ್ಲಿ ವೈನ್‌ ಸ್ಟೋರ್‌ಗಳು ನಿಗದಿತ ಸಮಯಕ್ಕಿಂತ ಮೊದಲೇ ತೆರೆಯುತ್ತವೆ. ಅಲ್ಲದೆ ಮಟ್ಕಾ ಹಾವಳಿಯೂ ನಡೆಯುತ್ತಿದೆ. ಅಂಡರ್‌ ಪಾಸ್‌ ಬಳಿ ಹಗಲಿಡೀ ರಾತ್ರಿ ಚಲಿಸುವ ಬಸ್‌ ಗಳನ್ನು ನಿಲ್ಲಿಸುವುದರಿಂದ ಸಂಚಾರ ಸಮಸ್ಯೆ ಉಂಟಾಗುತ್ತಿದೆ ಎಂದು ನಾಗರಿಕರೊಬ್ಬರು ತಿಳಿಸಿದರು.

ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಎಸ್‌ಪಿಯವರು ತಿಳಿಸಿದರು.

ಫೋನ್‌ ಇನ್‌ ವೇಳೆ ಉಡುಪಿ ಡಿವೈಎಸ್‌ಪಿ ಜೈಶಂಕರ್‌, ಉಡುಪಿ ಸರ್ಕಲ್ ಇನ್‌ಸ್ಪೆಕ್ಟರ್‌ ಮಂಜುನಾಥ್‌, ಟ್ರಾಫಿಕ್‌ ಎಸ್‌ಐ ನಿತ್ಯಾನಂದ ಗೌಡ, ಕುಂದಾಪುರ ಡಿವೈಎಸ್‌ಪಿ ದಿನೇಶ್‌, ಕಾಪು ಸರ್ಕಲ್ ಇನ್‌ಸ್ಪೆಕ್ಟರ್‌ ಶಾಂತಾರಾಮ್‌ ಉಪಸ್ಥಿತರಿದ್ದರು.

ಕಾರ್ಕಳದಿಂದ ಅಧಿಕ ದೂರು
ಎಸ್‌ಪಿ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಕಾರ್ಕಳ ಭಾಗದಿಂದ ಅತ್ಯಧಿಕ ದೂರುಗಳು ಬಂದರು. ಟ್ರಾಫಿಕ್‌ ವಿಚಾರಕ್ಕೆ ಸಂಬಂಧಿಸಿದಂತೆ ಅನಧಿಕೃತ ವಾಹನ ಪಾರ್ಕಿಂಗ್‌ ಬಗ್ಗೆ ಅಧಿಕ ಕರೆಗಳು ದಾಖಲಾದವು.

ಇತರ ದೂರುಗಳು
* ಕುಂದಾಪುರದ ಕೆಲವೊಂದು ಬಾರ್‌, ರೆಸ್ಟೋರೆಂಟ್‌ ಗಳಲ್ಲಿ ಸಾರ್ವಜನಿಕವಾಗಿ ಧೂಮಪಾನ ಮಾಡಲಾಗುತ್ತಿದೆ. ಇಲ್ಲಿ ಯಾವುದೇ ಸ್ಮೋಕಿಂಗ್‌ ಝೊàನ್‌ಗಳನ್ನು ಮಾಡಿಲ್ಲ ಎಂದು ನಾಗರಿಕರೊಬ್ಬರು ತಿಳಿಸಿದರು.
*ಬ್ರಹ್ಮಾವರದಲ್ಲಿ ಟ್ರಾಫಿಕ್‌ ಸಮಸ್ಯೆ ಇದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.
* ಕುಂಜಾಲು ಪರಿಸರದಲ್ಲಿ ದ್ವಿಚಕ್ರ ಮತ್ತು ಆಟೋ ರಿಕ್ಷಾಗಳು ಯಾವುದೇ ಸೂಚನೆ ನೀಡದೆ ವಾಹನ ಚಾಲನೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

Kundapura: ಶಾಸ್ತ್ರಿ ಸರ್ಕಲ್‌ ಬಳಿ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.