ರಾ.ಹೆ. 66ರ ಅಪಾಯಕಾರಿ ಸ್ಥಳಗಳ ಗುರುತು: ಎಸ್ಪಿ
ಪೊಲೀಸ್ ಫೋನ್-ಇನ್ ಕಾರ್ಯಕ್ರಮ
Team Udayavani, Jun 15, 2019, 5:34 AM IST
ಉಡುಪಿ: ಜಿಲ್ಲಾಡಳಿತ ಸೂಚನೆಯ ಮೇರೆಗೆ ರಾ.ಹೆ. ಪ್ರಾಧಿಕಾರ, ಪೊಲೀಸ್, ಪಿಡಬ್ಲ್ಯುಡಿ ಅಧಿಕಾರಿಗಳು ವಿಶೇಷ ತಂಡ ರಚಿಸಿ ರಾ.ಹೆ. 66ರಲ್ಲಿ ಅಪಘಾತ ಸಂಭವಿಸುವ ಬ್ಲ್ಯಾಕ್‌ಸ್ಪಾಟ್‌ಗಳನ್ನು ಗುರುತಿಸಲಾಗಿದೆ. ಈ ಪ್ರದೇಶದಲ್ಲಿ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಆರ್‌ಟಿಒ ಹಾಗೂ ರಾ.ಹೆ. ಪ್ರಾಧಿ ಕಾರಕ್ಕೆ ವರದಿಯನ್ನು ಸಲ್ಲಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ತಿಳಿಸಿದ್ದಾರೆ.
ಶುಕ್ರವಾರ ನಡೆದ ಪೊಲೀಸ್ ಫೋನ್-ಇನ್ ಕಾರ್ಯಕ್ರಮದಲ್ಲಿ ಅವರು ನಾಗರಿಕರ ಪ್ರಶ್ನೆಗಳಿಗೆ ಉತ್ತರಿಸುತ್ತ ಈ ಮಾಹಿತಿ ನೀಡಿದರು. ಮಳೆ ಹಿನ್ನೆಲೆಯಲ್ಲಿ ರಾ.ಹೆ. 66ರ ಕುರಿತು ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಕಾಮಗಾರಿ ನಡೆಸುತ್ತಿರುವ ಎಂಜಿನಿಯರ್ ಜತೆ ಎರಡು ದಿನಗಳ ಕಾಲ ರಸ್ತೆ ಸುರಕ್ಷಾ ಪರಿಶೋಧನೆ ನಡೆಸಲಾಗಿದೆ. ಕೆಟ್ಟು ನಿಂತಿರುವ ಬೀದಿದೀಪ, ಏಕಮುಖ ರಸ್ತೆ ಸಂಚಾರ, ಗುಂಡಿಗಳು, ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಲಾಗಿದೆ ಎಂದರು.
ಪೊಲೀಸ್ ವಿರುದ್ಧ ದೂರು
ಪಾಸ್‌ಪೋಟ್ ವಿಚಾರಣೆಗೆ ತೆರಳಿದ71 ವರ್ಷದ ಹಿರಿಯ ನಾಗರಿಕರೊಬ್ಬ ರಿಗೆ ಉಡುಪಿ ನಗರ ಠಾಣಾ ಸಿಬಂದಿ ಗಳು ಗೌರವ ನೀಡದೆ ಅಸಭ್ಯವಾಗಿ ನಡೆಸಿಕೊಂಡಿರುವ ಕುರಿತು ಸ್ಥಳೀಯರೊಬ್ಬರು ದೂರು ನೀಡಿದರು.
ಪೊಲೀಸರಿಗೆ ‘ಸೌಜನ್ಯ’ ತರಬೇತಿ
ಪೊಲೀಸ್ ಸಿಬಂದಿಗಳು ಸಾರ್ವ ಜನಿಕರೊಂದಿಗೆ ಅನುಚಿತವಾಗಿ ವರ್ತಿಸುವಂತಿಲ್ಲ.
ಠಾಣೆಯಲ್ಲಿ ಸಿಸಿ ಕೆಮರಾ ಆಳವಡಿಸಲಾಗಿದೆ. ಅದನ್ನು ಪರಿಶೀಲನೆ ನಡೆಸಿ ತನಿಖೆ ಮಾಡಲಾಗುತ್ತದೆ. ಪೊಲೀಸರು ಹೇಗೆ ಕೆಲಸ ಮಾಡಬೇಕು ಎನ್ನುವ ಸೂಕ್ಷ್ಮತೆಯನ್ನು ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವಂತೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ಎಸ್ಪಿ ತಿಳಿಸಿದ್ದಾರೆ.
ಸುರಕ್ಷಾ ನಿಯಮ ಪಾಲಿಸಿ
ಪರ್ಕಳದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುವ ವಾಹನ ಚಾಲಕರು ಮಕ್ಕಳನ್ನು ವಾಹನದಲ್ಲಿ ಕುರಿಗಳಂತೆ ತುಂಬಿಸಿಕೊಂಡು ಕರೆದೊಯ್ಯುತ್ತಿದ್ದಾರೆಂದು ಸಾರ್ವಜನಿಕರೊಬ್ಬರು ದೂರು ನೀಡಿದರು. ವಾಹನಗಳಲ್ಲಿ ನಿಯಮ ಮೀರಿ ಮಕ್ಕಳನ್ನು ತುಂಬಿಸುವಂತಿಲ್ಲ. ಶಾಲಾ ವಾಹನ ಚಾಲಕರು ಕಡ್ಡಾಯವಾಗಿ ಸುರಕ್ಷಾ ನಿಯಮವನ್ನು ಪಾಲಿಸಬೇಕು. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಸ್ಪಿ ಎಚ್ಚರಿಕೆ ನೀಡಿದರು.
ಪುಂಡರಿಂದ ಕಾಟ
ನಗರದ ಶಾಲೆ ಬಿಡುವ ಸಮಯಕ್ಕೆ ಬೈಕ್‌ನಲ್ಲಿ ಬರುವ ಪುಂಡರು ವಿದ್ಯಾರ್ಥಿನಿಯರಿಗೆ ತೊಂದರೆ ನೀಡುತ್ತಿದ್ದಾರೆ. ಇದರಿಂದಾಗಿ ಶಾಲೆ ಹೊರ ವಲಯದಲ್ಲಿ ವಿದ್ಯಾರ್ಥಿನಿಯರು ಓಡಾಡಲು ಭಯದ ಪಡುತ್ತಿರುವ ನಾಗರಿಕರೊಬ್ಬರು ಕರೆ ಮಾಡಿ ದೂರು ನೀಡಿದರು.
ಮಹಿಳೆಯರ ಸುರಕ್ಷತೆಗಾಗಿ ಜಿಲ್ಲೆಯಲ್ಲಿ ರಾಣಿ ಅಬ್ಬಕ್ಕ ಪಡೆ ಕಾರ್ಯಚರಿಸುತ್ತಿದೆ. ಈ ಬಗ್ಗೆ ರಾಣಿ ಅಬ್ಬಕ್ಕ ಪಡೆಯ ಮಾಹಿತಿ ನೀಡಲಾಗುತ್ತದೆ. ವಿದ್ಯಾರ್ಥಿನಿಯರಿಗೆ ತೊಂದರೆ ನೀಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದರು.
ಜಾಹೀರಾತು ಫಲಕದಿಂದ ಸಂಚಾರಕ್ಕೆ ತೊಂದರೆ
ಕಿನ್ನಿಮೂಲ್ಕಿ ಸ್ವಾಗತ ಗೋಪುರ ಪಕ್ಕದಲ್ಲಿ ದೊಡ್ಡ ದೊಡ್ಡ ಜಾಹೀರಾತು ಫ್ಲೆಕ್ಸ್‌ಗಳನ್ನು ಆಳವಡಿಸಲಾಗಿದೆ. ಇದರಿಂದಾಗಿ ಮುಂಭಾಗದಲ್ಲಿ ಏನಿದೆ ಎನ್ನುವುದು ವಾಹನ ಸವಾರರಿಗೆ ಕಾಣುತ್ತಿಲ್ಲ. ಈ ಮಾರ್ಗದಲ್ಲಿ ಬಳಿ ಪಾದಾಚಾರಿ ಕ್ರಾಸಿಂಗ್ ಸಮಸ್ಯೆ ಕುರಿತು ಸಾರ್ವಜನಿಕರೊಬ್ಬರು ದೂರು ನೀಡಿದರು.
ನಗರಸಭೆ ಅಧಿಕಾರಿಗಳಿಗೆ ಫ್ಲೇಕ್ಸ್ ತೆರವು ಮಾಡುವಂತೆ ಮಾಹಿತಿ ನೀಡಲಾಗುತ್ತದೆ. ಪಾದಚಾರಿ ಕ್ರಾಸಿಂಗ್ ವ್ಯವಸ್ಥೆ ನಿಗದಿ ಪ್ರದೇಶವನ್ನು ಗುರುತಿಸುವುದಾಗಿ ಎಸ್ಪಿ ತಿಳಿಸಿದರು.
ಸಾರ್ವಜನಿಕರಿಗೆ ತೊಂದರೆ
ಕಾರ್ಕಳದ ನಗರ ಬಸ್ ನಿಲ್ದಾಣದ ಸಮಿಪದ ಮಾರಿಗುಡಿ ದೇವಸ್ಥಾನದ ಬಳಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಕೂಲಿ ಕಾರ್ಮಿಕರು ಕಿಕ್ಕಿರಿದು ತುಂಬಿರುವುದರಿಂದ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗುತ್ತಿರುವ ಕುರಿತು ಸಾರ್ವಜನಿಕರೊಬ್ಬರು ದೂರು ನೀಡಿದರು. ಈ ಕುರಿತು ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಮಾತುಕತೆ ನಡೆಸಿ ಸಮಸ್ಯೆ ಪರಿಹಾರ ಕಂಡುಕೊಳ್ಳುವಂತೆ ಸಿಬಂದಿಗಳಿಗೆ ತಿಳಿಸಿದರು.
ಕಲ್ಸಂಕ ಸೇತುವೆ ಬಳಿ ಪಾದಚಾರಿಗಳಿಗೆ ಅನುಕೂಲವಾಗುವಂತೆ ಕ್ರಾಸಿಂಗ್ ವ್ಯವಸ್ಥೆ ಕಲ್ಪಿಸಬೇಕು. ಹೆಬ್ರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ತಾಲೂಕು ಮಿನಿವಿಧಾನಸೌಧ ನಿರ್ಮಾಣವಾದರೆ ವಿದ್ಯಾರ್ಥಿಗಳಿಗೆ ಆಟದ ಮೈದಾನ ಕೊರತೆ ಆಗುತ್ತದೆ. ಪರ್ಕಳದ ಸಂತೆ ಮಾರುಕಟ್ಟೆಯಲ್ಲಿ ಸರಣಿ ಮೊಬೈಲ್ ಕಳ್ಳತನ, ಗಂಗೊಳ್ಳಿಯಲ್ಲಿ ಮಟ್ಕಾ ಹಾಗೂ ಇಸ್ಪೀಟ್, ಅಕ್ರಮ ಮರಳುಗಾರಿಕೆ, ಕುಂದಾಪುರದ ಕಂಡ್ಲೂರಿನ ಗೂಡು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಉಡುಪಿ ನಗರದಲ್ಲಿ ದ್ವಿಚಕ್ರ ವಾಹನಗಳಲ್ಲಿ ಹೈಮಾಸ್ಟ್ ಬಳಕೆೆ. ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ್ ಪಾರ್ಕಿಂಗ್ ಸಮಸ್ಯೆ. ಉಡುಪಿ ನಾರ್ತ್ ಶಾಲೆಯ ಬಳಿ ಅನಧಿಕೃತ ಬೋರ್ಡ್ ಆಳವಡಿಕೆ ಸಂಚಾರಕ್ಕೆ ಅಡ್ಡಿ, ಗೋವಿಂದ ಕಲ್ಯಾಣಮಂಟಪದಲ್ಲಿ ಸಮೀಪದ ರಸ್ತೆಯಲ್ಲಿ ಗುಂಡಿ, ಕೊಲ್ಲೂರು ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿಯೇ ವಾಹನ ಪಾರ್ಕಿಂಗ್, ಕಟಪಾಡಿ ಪೇಟೆಯಲ್ಲಿ ವರ್ತಕ ಸಂಘದ ಮುಖ್ಯಸ್ಥರು ಆಟೋ ಚಾಲಕರಿಗೆ ಕಿರುಕುಳ, ಬ್ರಹ್ಮಗಿರಿ ರಸ್ತೆಯಲ್ಲಿ ಹಂಪ್‌ಗೆ ಬಿಳಿ ಬಣ್ಣ ಹಾಕದೆ ಇರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದು ಸೇರಿದಂತೆ ಫೋನ್‌ಇನ್ ಕಾರ್ಯಕ್ರಮದಲ್ಲಿ ಒಟ್ಟು 17 ದೂರು ಕರೆಗಳು ಬಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.