ಉಡುಪಿ ಶ್ರೀಕೃಷ್ಣ ಮಠ ಸಂಭ್ರಮದ ಲಕ್ಷ ದೀಪೋತ್ಸವ ಆರಂಭ

Team Udayavani, Nov 17, 2021, 5:09 AM IST

ಉಡುಪಿ ಶ್ರೀಕೃಷ್ಣ ಮಠ ಸಂಭ್ರಮದ ಲಕ್ಷ ದೀಪೋತ್ಸವ ಆರಂಭ

ಉಡುಪಿ: ಶ್ರೀಕೃಷ್ಣಮಠದಲ್ಲಿ ಮಂಗಳವಾರ ಉತ್ಥಾನ ದ್ವಾದಶಿಯಂದು ತುಳಸೀ ಪೂಜೆಯ ಬಳಿಕ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ, ವಾರ್ಷಿಕ ರಥೋತ್ಸವ ಆರಂಭಗೊಂಡಿತು. ಬೆಳಗ್ಗೆ ತುಳಸೀ ಪೂಜೆ ನಡೆದರೆ, ಸಂಜೆ ಕ್ಷೀರಾಬ್ಧಿ ಪೂಜೆ, ದೀಪೋತ್ಸವ ನಡೆಯಿತು.

ದ್ವಾದಶಿಯಾದ ಕಾರಣ ಮುಂಜಾವ ಶ್ರೀದಿಂದಲೇ ಪೂಜೆಗಳು ಆರಂಭಗೊಂಡಿತು. ಮಹಾಪೂಜೆ ಯನ್ನು, ಬಳಿಕ ತುಳಸೀ ಪೂಜೆಯನ್ನು ಪರ್ಯಾಯ ಶ್ರೀಈಶಪ್ರಿಯತೀರ್ಥ ಶ್ರೀಪಾದರು ನೆರವೇರಿಸಿದರು. ಇದಕ್ಕೂ ಮುನ್ನ ಒಂದು ತಿಂಗಳಿಂದ ನಡೆಯುತ್ತಿದ್ದ ಪಶ್ಚಿಮಜಾಗರ ಪೂಜೆಯನ್ನು ಸಮಾಪನಗೊಳಿಸಿದರು. ಸಂಜೆ ಮಧ್ವಸರೋವರದ ಮಧ್ಯದ ಮಂಟಪದಲ್ಲಿಕ್ಷೀರಾಬ್ಧಿವನ್ನು ನೀಡಲಾಯಿತು.

ಅಪರಾಹ್ನ ರಥಬೀದಿಯಲ್ಲಿ ಅಳವಡಿಸಿದ ದಳಿಗಳ ಮೇಲೆ ಗೋಮಯವನ್ನು ಇಟ್ಟು ಅದರ ಮೇಲೆ ಹಣತೆ ಇಡುವ ಮುಹೂರ್ತವನ್ನು ವಿವಿಧ ಸ್ವಾಮೀಜಿಯವರು ನೆರವೇರಿಸಿದರು. ಸಂಜೆ ಕ್ಷೀರಾಬ್ಧಿ ಬಳಿಕ ರಾತ್ರಿ ಪೂಜೆ ನಡೆಯಿತು. ಬಳಿಕ ಉತ್ಸವ ಮೂರ್ತಿಯನ್ನು ತಂದು ರಾತ್ರಿ ಆಕರ್ಷಕ ತೆಪ್ಪೋತ್ಸವ ನಡೆಯಿತು. ಮಧ್ವ ಸರೋವರದಲ್ಲಿ ಈ ಸಂದರ್ಭ ಸಂಸ್ಕೃತ ಗೀತ ಗಾಯನ ನಡೆಯಿತು.ತೆಪ್ಪೋತ್ಸವದ ಬಳಿಕ ರಥೋತ್ಸವ ನಡೆಯಿತು.

ಶ್ರೀಕೃಷ್ಣಮುಖ್ಯಪ್ರಾಣ, ಶ್ರೀಅನಂತೇಶ್ವರ, ಶ್ರೀಚಂದ್ರ ಮೌಳೀಶ್ವರ ಉತ್ಸವ ಮೂರ್ತಿಗಳನ್ನು ಗರುಡ ರಥ ಮತ್ತು ಮಹಾಪೂಜಾ ರಥಗಳಲ್ಲಿರಿಸಿ ಉತ್ಸವ ನಡೆಸಲಾಯಿತು. ರಥಬೀದಿ, ಮಧ್ವ ಸರೋವರದಲ್ಲಿ ಸಾವಿರಾರು ಹಣತೆಗಳ ದೀಪಗಳು ಕಂಗೊಳಿಸಿದವು. ಪರ್ಯಾಯ ಅದಮಾರು ಹಿರಿಯ, ಕಿರಿಯ, ಕೃಷ್ಣಾಪುರ, ಪಲಿಮಾರು ಹಿರಿಯ, ಕಿರಿಯ, ಪೇಜಾವರ, ಕಾಣಿಯೂರು ಸ್ವಾಮೀಜಿಯವರು ಕ್ಷೀರಾಬ್ಧಿ ಪೂಜೆ ಮತ್ತು ಉತ್ಸವದಲ್ಲಿ ಪಾಲ್ಗೊಂಡರು.

ಹೋದ ವರ್ಷ ಕೊರೊನಾ ಕಾರಣದಿಂದ ಸೀಮಿತ ಭಕ್ತರಿಗೆ ಮಾತ್ರ ಅವಕಾಶವಿತ್ತು. ಈ ಬಾರಿ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ:ಹಸಿವು ನೀಗಿಸುವ ಯೋಜನೆ ಜಾರಿ ಮಾಡಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್‌

ಪೌರಕಾರ್ಮಿಕರಿಗೂ ಸೇವಾವಕಾಶ
ನಿತ್ಯ ರಥಬೀದಿಯನ್ನು ಶುಚಿಗೊಳಿಸುವ ಪೌರಕಾರ್ಮಿಕರಿಗೂ ಲಕ್ಷದೀಪೋತ್ಸವದಲ್ಲಿ ಇತರ ಕಾರ್ಯಕರ್ತರ ಜತೆ ದೀಪಗಳನ್ನು ಬೆಳಗಿಸಲು ಬುಧವಾರ ಅವಕಾಶ ಕಲ್ಪಿಸಲಾಗುತ್ತಿದೆ.

ಪ್ರಕೃತಿ ಸೊಬಗಿನಲ್ಲಿ ತೆಪ್ಪೋತ್ಸವ
ತೆಪ್ಪವನ್ನು ಪ್ರಕೃತಿ ಸಂಕೇತವಾಗಿ ಮಾವಿನ ತೋರಣಗಳಿಂದ ಅಲಂಕರಿಸಲಾಗಿತ್ತು. ಮಧ್ವಸರೋವರದಲ್ಲಿ ಮತ್ತು ತೆಪ್ಪಕ್ಕೆ ಯಾವುದೇ ವಿದ್ಯುತ್‌ ಅಲಂಕಾರವನ್ನು ಮಾಡದೆ ಕೇವಲ ಎಣ್ಣೆ ದೀಪದಲ್ಲಿಯೇ ಉತ್ಸವವನ್ನು ನಡೆಸಲಾಯಿತು. ತೆಪ್ಪ ಹಿಲಾಲಿ ಬೆಳಕಿನಲ್ಲಿ ಕಂಗೊಳಿಸಿತು.

4 ದಿನಗಳ ಉತ್ಸವ
ಪರಿಶುದ್ಧವಾಗಿ ತಯಾರಿಸಿದ ಎಳ್ಳೆಣ್ಣೆಯಲ್ಲಿ ಲಕ್ಷದೀಪೋತ್ಸವವನ್ನು ಆಚರಿಸಲಾಯಿತು. ನ. 16ರಿಂದ ಆರಂಭಗೊಂಡ ಲಕ್ಷದೀಪೋತ್ಸವ ನ. 19ರ ವರೆಗೆ ನಾಲ್ಕು ದಿನ ನಡೆಯಲಿದೆ.

ಟಾಪ್ ನ್ಯೂಸ್

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.