ಪರಿಸರ ನಾಶದಿಂದ ಕನ್ನಡ ಸಂಸ್ಕೃತಿಗೆ ಹಿನ್ನಡೆ​​​​​​​

Team Udayavani, Jan 19, 2019, 12:30 AM IST

180119astro05.jpg

ಉಡುಪಿ: ಪರಿಸರ ನಾಶವೂ ಕನ್ನಡ ಸಂಸ್ಕೃತಿಗೆ ಪ್ರಮುಖ ಕಾರಣ ಎಂದು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ, ಜಾನಪದ ವಿದ್ವಾಂಸ ಡಾ| ಗಣನಾಥ ಎಕ್ಕಾರು ಬೆಟ್ಟು ಮಾಡಿದ್ದಾರೆ.
 
ಬ್ರಹ್ಮಗಿರಿ ಲಯನ್ಸ್‌ ಭವನದಲ್ಲಿ ಶುಕ್ರವಾರ ನಡೆದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು, ಯುವಜನರಲ್ಲಿ ಸಾಹಿತ್ಯಾಸಕ್ತಿ ಕಡಿಮೆಯಾಗಲು ಪ್ರಕೃತಿ ನಾಶದಿಂದ ಸಂಸ್ಕೃತಿ ಸ್ಥಿತ್ಯಂತರಗೊಳ್ಳುತ್ತಿರುವುದು ಪ್ರಧಾನ ಕಾರಣ ಎಂದರು. 

ನಗರೀಕರಣ, ಕೈಗಾರಿಕೀಕರಣದಿಂದ ಪ್ರಕೃತಿ, ಸಂಸ್ಕೃತಿಯು ತನ್ನ ಮೂಲ ಸ್ವರೂಪವನ್ನು ಕಳೆದುಕೊಳ್ಳುತ್ತಿದೆ. ಔದ್ಯೋಗಿಕ ಕ್ಷೇತ್ರದಲ್ಲಿಯೂ ಕನ್ನಡ ಭಾಷೆ ಮಹತ್ವವನ್ನು ಕಳೆದುಕೊಳ್ಳುತ್ತಿರುವುದು ಬ್ಯಾಂಕುಗಳಲ್ಲಿ ಕಂಡುಬರುತ್ತಿದೆ. ಔದ್ಯೋಗಿಕ ಕ್ಷೇತ್ರಕ್ಕೆ ಸಂಬಂಧಿಸಿ ಸರೋಜಿನಿ ಮಹಿಷಿ ವರದಿಯನ್ನು ಕೂಡಲೇ ಜಾರಿಗೆ ತರುವುದು ಅಗತ್ಯ ಎಂದು ಒತ್ತಾಯಿಸಿದರು. 

ಶಾಲೆಗಳಿಗೆ 
ಮೂಲ ಸೌಕರ್ಯ ಅಗತ್ಯ

ಸರಕಾರ ಇಂಗ್ಲಿಷ್‌ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಮೊದಲು ಸರಕಾರಿ ಮತ್ತು ಅನುದಾನಿತ ಶಾಲೆಗಳ ಮೂಲಭೂತ ಸೌಕರ್ಯದ ಕಡೆಗೆ ಗಮನ ಕೊಡಬೇಕು. ಇಂಗ್ಲಿಷ್‌ ಮಾಧ್ಯಮ ಶಾಲೆಗಳು ಸೌಲಭ್ಯ ಮತ್ತು ಪರಿಸರದಿಂದ ಉತ್ತಮವೆಂದು ಕಂಡುಬರುತ್ತಿದೆ ವಿನಾ ಮಾಧ್ಯಮದಿಂದಲ್ಲ. ಉತ್ತಮ ಸೌಲಭ್ಯ ಕಲ್ಪಿಸಿದ ಉತ್ತಮ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಸರಾದ ಅನೇಕ ಶಾಲೆಗಳು ಉಡುಪಿ ತಾಲೂಕಿನಲ್ಲಿಯೇ ಬಹಳಷ್ಟು ಇವೆ. ಇತ್ತೀಚಿನ ವರ್ಷಗಳಲ್ಲಿ ಖಾಸಗಿ ಕಾಲೇಜುಗಳಲ್ಲಿ ಐಚ್ಛಿಕ ಬೋಧನೆಯನ್ನು ನಿಲ್ಲಿಸಲಾಗಿದೆ. ಪದವಿಯಲ್ಲಿ ಕನ್ನಡದೊಂದಿಗೆ ಇತರ ಎರಡು ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶವಿರುವುದರಿಂದ ಕನ್ನಡದ ಆಯ್ಕೆಗೆ ತೊಂದರೆಯಾಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕಾಗಿದೆ ಎಂದು ಡಾ|ಎಕ್ಕಾರು ಅಭಿಪ್ರಾಯಪಟ್ಟರು. 

ವೈಚಾರಿಕ, ವೈಜ್ಞಾನಿಕ ಚಿಂತನೆಗಳು ಅಗತ್ಯ. ವಚನ-ದಾಸ ಚಳವಳಿಗಳು ಸಮಾಜದ ಕೆಟ್ಟ ಸಂಪ್ರದಾಯ, ದುಷ್ಟ ಆಚರಣೆಗಳನ್ನು ಪ್ರಶ್ನಿಸಿವೆ. ಇದರ ಮುಂದುವರಿದ ಭಾಗವೇ ನವೋ ದಯ, ನವ್ಯ ಸಾಹಿತ್ಯ, ದಲಿತ- ಸಮ್ಮಿಶ್ರ ಸಾಹಿತ್ಯಗಳು, ಕುವೆಂಪು- ಕಾರಂತರ ಸಾಹಿತ್ಯಗಳು. ಉಡುಪಿಯಲ್ಲಿ ಸ್ವಾಮೀಜಿ ಯವರು ಮಡೆ-ಎಡೆ ಸ್ನಾನ ವನ್ನು ನಿಲ್ಲಿಸಿರುವುದು ಅಭಿನಂದನೀಯ. ಉಡುಪಿಯು ಹಿಂದಿನಿಂದಲೂ ಸಾಮರಸ್ಯಕ್ಕೆ ಹೆಸರಾಗಿದ್ದು ಈಗಲೂ ಮುಂದುವರಿದು ಕೊಂಡು ಬರುತ್ತಿದೆ. ಇದು ಮುಂದುವರಿಯಬೇಕು ಎಂದು ಎಕ್ಕಾರು ಹೇಳಿದರು.  

ಟಿಆರ್‌ಪಿ ಹಿಂದೆ ದೃಶ್ಯಮಾಧ್ಯಮಗಳು
ದೃಶ್ಯ ಮಾಧ್ಯಮಗಳು ಇತ್ತೀಚಿಗೆ ಟಿಆರ್‌ಪಿ ಬೆನ್ನು ಬಿದ್ದು ಭಿನ್ನ ಹಾದಿ ತುಳಿಯುತ್ತಿರುವುದು ಕರ್ನಾಟಕದಲ್ಲಿ ಕಂಡುಬರುವ ಕಹಿ ಸತ್ಯ. ಸಾಹಿತ್ಯ, ಸಂಸ್ಕೃತಿ ಬೆಳವಣಿಗೆ ಹಿನ್ನೆಲೆಯಲ್ಲಿ ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳಿಗೆ ಕನ್ನಡಿಗರು ಹಕ್ಕೊತ್ತಾಯ ಮಾಡುವ ಅಗತ್ಯವಿದೆ. 
– ಡಾ| ಗಣನಾಥ ಎಕ್ಕಾರು

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.