‘ಗ್ರಾ.ಪಂ. ಸಿಬಂದಿ ಕರ್ತವ್ಯ ಲೋಪವೆಸಗಿದರೆ ಸೂಕ್ತ ಕ್ರಮ’


Team Udayavani, Nov 30, 2018, 1:05 AM IST

pradeep-29-11.jpg

ಉಡುಪಿ: ಗ್ರಾ.ಪಂ.ಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿ ಕರ್ತವ್ಯ ಲೋಪವೆಸಗಿದರೆ ಅಂತಹವರ ವಿರುದ್ಧ ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಅಧಿಕಾರಿಗಳು ಗ್ರಾಮಸಭೆಯಲ್ಲಿ ನಿರ್ಣಯ ತೆಗೆದುಕೊಂಡು ತಾ.ಪಂ.ಗೆ ಸಲ್ಲಿಸಬೇಕು. ಅಂತಹ ಸಿಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಪ್ರಭಾರ ಇಒ ಮೋಹನ್‌ರಾಜ್‌ ತಿಳಿಸಿದರು. ತಾ.ಪಂ. ಕಚೇರಿಯಲ್ಲಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ತಾ.ಪಂ. ಸದಸ್ಯೆ ವಸಂತಿ ಪೂಜಾರಿ ಮಾತನಾಡಿ, ಹರಾಡಿ ಗ್ರಾ.ಪಂ.ನಲ್ಲಿ ಕೆಲವು ಅಧಿಕಾರಿಗಳು ಜನಸಾಮಾನ್ಯರ ಕೆಲಸಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಕಟ್ಟಡ ಪರವಾನಿಗೆ ಕುರಿತಾಗಿ ನೀಡಿದ ಅಸಲಿ ದಾಖಲೆಗಳನ್ನು ಕಳೆದು ಹಾಕಿದ್ದಾರೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ಸಮಸ್ಯೆ
ಬಾರಕೂರು ತಾ.ಪಂ. ಸದಸ್ಯೆ ಮಾತನಾಡಿ, ಬಾರಕೂರಿನಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ಸಾಕಷ್ಟು ಸಮಸ್ಯೆಯಿದೆ. ಬಂಡೀಮಠ – ನೀಲಾವರ ಕಿಂಡಿ ಅಣೆಕಟ್ಟಿನಲ್ಲಿ ಹಾಕಿರುವ ಮರದ ಹಲಗೆಗಳಿಂದ ಉಪ್ಪು ನೀರು ಪ್ರವೇಶಿಸುತ್ತಿದೆ. ಇದರಿಂದಾಗಿ ಅಣೆಕಟ್ಟಿನಲ್ಲಿ ಶೇಖರಗೊಳ್ಳುವ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಶೀಘ್ರವಾಗಿ ಶಾಶ್ವತ ಪರಿಹಾರ ನೀಡಬೇಕು. ಇಲ್ಲವಾದರೆ ಈ ಪ್ರದೇಶದ ಜನರು ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗಾಗಿ ತತ್ತರಿಸುವ ದಿನ ಎದುರಾಗಲಿದೆ ಎಂದವರು ಹೇಳಿದರು. ಇದಕ್ಕೆ ಕೆಲವು ಸದಸ್ಯರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಇಓ ಬಾರಕೂರು ಕಿಂಡಿ ಅಣೆಕಟ್ಟು ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶ ನೀಡಿದರು. ಕಳೆದ ಬಾರಿ ಸೀತಾನದಿ ಹರಿಯುವಲ್ಲಿ ನಿರ್ಮಾಣವಾದ ಅಣೆಕಟ್ಟಿಗೆ ಮರದ ಹಲಗೆ ಬದಲಾಗಿ ಫೈಬರ್‌ ಹಲಗೆ ಆಳವಡಿಸುವಂತೆ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದರು.

ಸಭೆಗೆ ಅಧಿಕಾರಿಗಳು ಬರುತ್ತಿಲ್ಲ!
ಹಂದಾಡಿ ತಾ.ಪಂ. ಸದಸ್ಯ ಸುಧೀರ್‌ ಶೆಟ್ಟಿ ಮಾತನಾಡಿ, ಗ್ರಾ.ಪಂ.ನಲ್ಲಿ ನಡೆಯುವ ಗ್ರಾಮಸಭೆಯಲ್ಲಿ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಭಾಗವಹಿಸುತ್ತಿಲ್ಲ. ಇದರಿಂದಾಗಿ ಗ್ರಾಮಸಭೆಯ ಸಮಸ್ಯೆಗಳಿಗೆ ಪರಿಹಾರವೇ ಸಿಗುತ್ತಿಲ್ಲ ಎಂದು ದೂರಿದರು. ತಾ.ಪಂ. ಸದಸ್ಯ ಲಕ್ಷ್ಮೀನಾರಾಯಣ ರಾವ್‌ ಮಾತನಾಡಿ, ಬೊಮ್ಮರಬೆಟ್ಟು ಗ್ರಾ.ಪಂ.ನಲ್ಲಿ ಅಭಿವೃದ್ಧಿ ಕಾಮಗಾರಿಗಳಾದ ಬಸ್‌ನಿಲ್ದಾಣ, ಮಾರುಕಟ್ಟೆ ಪ್ರಾಂಗಣ ನಿರ್ಮಾಣ ಕಾಮಗಾರಿಗಳ ನಿರ್ಣಯಕ್ಕೆ ತಾ.ಪಂ. ಅಧ್ಯಕ್ಷರು ಸ್ಥಳೀಯ ತಾ.ಪಂ. ಸದಸ್ಯರ ಗಮನಕ್ಕೆ ತಾರದೆ ಅಭಿವೃದ್ಧಿ ಕಾಮಗಾರಿಗೆ ತಡೆಯಾಜ್ಞೆ ತಂದಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್‌ ರಾವ್‌ ಪ್ರತಿಕ್ರಿಯಿಸಿ, ಯಾವುದೇ ರೀತಿ ಶಾಂತಿ ಭಂಗವಾಗಬಾರದೆನ್ನುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಕುತ್ಯಾರು ಸೇತುವೆ ಬುಡದಲ್ಲಿ ಸಿಲುಕಿರುವ ಮರಗಳ ದಿಣ್ಣೆಗಳ ಕುರಿತು, ಉದ್ಯೋಗ ಖಾತ್ರಿ ಯೋಜನೆ, ಕಾಪು ಹಕ್ಕುಪತ್ರ, ಟೋಲ್‌ ಗೇಟ್‌ ಸುಂಕ ವಸೂಲಾತಿ ಸೇರಿದಂತೆ ಇತರ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ತಹಶೀಲ್ದಾರ್‌ ಪ್ರದೀಪ್‌ ಕುಡೇìಕರ್‌, ತಾ.ಪಂ. ಉಪಾಧ್ಯಕ್ಷ ರಾಜೇಂದ್ರ ಪಿ., ಸಾಮಾಜಿಕ ನ್ಯಾಯ ಸಮತಿ ಅಧ್ಯಕ್ಷ ಭುಜಂಗ ಶೆಟ್ಟಿ, ನೂತನ ಇಓ ರಾಜು ಕೆ., ತಾ.ಪಂ. ಸದಸ್ಯರು, ಗ್ರಾ.ಪಂ. ಅಧ್ಯಕ್ಷರು, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಮೋಹನ್‌ರಾಜ್‌ರಿಗೆ ಸಮ್ಮಾನ
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾಗಿದ್ದು, ಕಳೆದ 1 ವರ್ಷ 7 ತಿಂಗಳು ಕಾಲ ತಾ.ಪಂ. ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ ಮೋಹನ್‌ರಾಜ್‌ ಅವರನ್ನು ಸಮ್ಮಾನಿಸಲಾಯಿತು. ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ ಶಿವಮೊಗ್ಗ ಮೂಲದ ರಾಜು ಕೆ. ಅವರು ತಾ.ಪಂ. ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಮೋಹನ್‌ರಾಜ್‌ ಅವರು ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆ.

ಟಾಪ್ ನ್ಯೂಸ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-mit

Manipal MIT: ಅಂತಾರಾಷ್ಟ್ರೀಯ ಕಾರ್ಯಾಗಾರ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.