Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್


Team Udayavani, Nov 30, 2024, 11:50 AM IST

Lakshmi Hebbalkar

ಉಡುಪಿ: ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣದ ಕುರಿತಂತೆ ಶನಿವಾರ (ನ.30) ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ. ನಾನು ಮತ್ತು ದಿನೇಶ್ ಗುಂಡೂರಾವ್ ಸತತ ಸಂಪರ್ಕದಲ್ಲಿದ್ದೇವೆ. ಭೇಟಿ ಕೊಟ್ಟಿಲ್ಲ ಎಂದರೆ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸಿದ್ದೇವೆ ಎಂದಲ್ಲ. ಸರ್ಕಾರಕ್ಕೆ ಮತ್ತು ಮಂತ್ರಿಗಳಿಗೆ ಬಹಳ ಜವಾಬ್ದಾರಿಯಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಘಟನೆಯ ಬಗ್ಗೆ ಸಿಎಂ ನೇತೃತ್ವದಲ್ಲಿ ಅವರ ಅಧ್ಯಕ್ಷತೆಯಲ್ಲೇ ಸಭೆ ಕರೆಯಲಾಗಿದೆ. ತಪ್ಪಿತಸ್ಥರ ವಿರುದ್ಧ ಸ್ಥಳದಲ್ಲೇ ನಿರ್ಧಾರ ಕ್ರಮವಾಗುತ್ತದೆ ಎಂದರು.

ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟಿದ್ದರು.

ಸಂಪುಟ ವಿಸ್ತರಣೆ ಚರ್ಚೆಯಿಲ್ಲ

ಸಚಿವ ಸಂಪುಟ ವಿಸ್ತರಣೆ ಚರ್ಚೆ ವಿಚಾರವಾಗಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ನಲ್ಲಿ ಇಲ್ಲ. ಚರ್ಚೆ ಮಾಧ್ಯಮಗಳಲ್ಲಿ ಮಾತ್ರ ಇತ್ತು. ಸಂಪುಟ ವಿಸ್ತರಣೆ ನಿಜಾವೇ ಸುಳ್ಳೇ ಎಂದು ನೀವೇ ಸ್ಪಷ್ಟಪಡಿಸಬೇಕು. ಯಾರನ್ನು ತೆಗೆಯುತ್ತೀರಿ? ಯಾರನ್ನು ಕೂರಿಸುತ್ತೀರಿ? ಹೊಸದಾಗಿ ಪ್ರಮಾಣವಚನ ಎಂದು ಹೇಳುತ್ತೀರಿ. ಈ ಚರ್ಚೆಗೆ ಮಾಧ್ಯಮಗಳೇ ಸ್ಪಷ್ಟನೆ ಕೊಡಬೇಕು ಎಂದರು.‌

ಸಂಶಯವಿದ್ದರೆ ಸ್ಪಷ್ಟನೆ ಕೊಡುತ್ತೇವೆ

ನಕ್ಸಲ್ ವಿಕ್ರಂ ಗೌಡ ಎಂಕೌಂಟರ್ ಪ್ರಕರಣವಾಗಿ ಮಾತನಾಡಿದ ಉಸ್ತುವಾರಿ ಸಚಿವರು, ಕಾನೂನು ಪ್ರಕಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನಕ್ಸಲೀಯರನ್ನು ಕಟ್ಟಿ ಹಾಕಬೇಕೆನ್ನುವುದು ಸರಕಾರದ ನಿರ್ಧಾರ. ಕೂಂಬಿಂಗ್ ಮಾಡುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಿಕ್ರಂ ಗೌಡ ಬಳಿ ಕೂಡ ಶಸ್ತ್ರಾಸ್ತ್ರಗಳಿತ್ತು. ವಿಕ್ರಂ ಗೌಡ ಒಂದು ಬಾರಿ ಫೈರಿಂಗ್ ಮಾಡಿದ್ದಾರೆ. ಪ್ರತಿ ದಾಳಿ ಮಾಡದಿದ್ದರೆ ಪೊಲೀಸರ ಜೀವ ಹಾನಿ ಆಗುತ್ತಿತ್ತು. ನಕ್ಸಲ್‌ ವಾದವನ್ನು ಬೇರು ಸಮೇತ ಕಿತ್ತು ಹಾಕಬೇಕು ಇದು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಿಲುವು ಎಂದರು.

ಪರ ವಿರೋಧ ಚರ್ಚೆ ಎಲ್ಲಾ ಸಂದರ್ಭದಲ್ಲಿ ಇರುತ್ತದೆ. ಸರ್ಕಾರ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿದೆ. ಸಂಶಯವಿದ್ದವರಿಗೆ ನಾವು ಮತ್ತೆ ಸ್ಪಷ್ಟನೆ ಕೊಡಲು ತಯಾರಿದ್ದೇವೆ. ನ್ಯಾಯಾಂಗ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ. ನ್ಯಾಯಾಂಗ ತನಿಖೆಗೆ ಕೊಡುವುದು ಸರ್ಕಾರದ ತೀರ್ಮಾನ. ಈ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರ ಬಳಿ ಮಾತನಾಡುತ್ತೇನೆ ಎಂದರು.

ಭಿನ್ನಮತವಿಲ್ಲ

ಹಾಸನದಲ್ಲಿ ಕಾಂಗ್ರೆಸ್ ಭಿನ್ನಮತೀಯರ ಸಮಾವೇಶದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಬ್ಬಾಳ್ಕರ್‌, ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಮತವಿಲ್ಲ. ಭಿನ್ನಮತ ಇರುವುದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನವೂ ತೋರಿಸುತ್ತಿವೆ. ನಮ್ಮಲ್ಲಿ ಭಿನ್ನಮತ ಇಲ್ಲ ಎನ್ನುವುದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದರು.

ವಿಕಲಾಂಗ ಚೇತನ ಹಿರಿಯ ನಾಗರಿಕ ಇಲಾಖೆ ಅನುದಾನ ಕಡಿತ ವಿಚಾರದ ಬಗ್ಗೆ ಮಾತನಾಡಿ, ಇಲಾಖೆಗೆ 8 ಸಾವಿರ ಅರ್ಜಿಗಳು ಬಂದಿದೆ ಎನ್ನುವುದು ಸುಳ್ಳು. ಎರಡು ಮುಕ್ಕಾಲು ಸಾವಿರ ಅರ್ಜಿಗಳು ಬಂದಿವೆ. ಸಪ್ಲಿಮೆಂಟರಿ ಬಜೆಟ್ ನಲ್ಲಿ ಪ್ರಸ್ತಾವನೆ ಕಳುಹಿಸಿದ್ದೇವೆ. ಈಗಾಗಲೇ 10 ಕೋಟಿ ರೂಪಾಯಿಯನ್ನು ಯಥಾವತ್ತಾಗಿ ಬಿಡುಗಡೆ ಮಾಡಲಾಗಿದೆ. ನಮ್ಮ ಇಲಾಖೆ 32 ಸಾವಿರ ಕೋಟಿಗಿಂತ ಹೆಚ್ಚಿನ ಗಾತ್ರವನ್ನು ಹೊಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಿಕಲಾಂಗ ಚೇತನ ಯಾವುದೇ ಅನುದಾನವನ್ನು ನಾವು ಕಡಿತ ಮಾಡುವುದಿಲ್ಲ. 2700 ಅರ್ಜಿಗೂ ನಾವು ಸಹಾಯವನ್ನು ಮಾಡುತ್ತೇವೆ. ನಾವು ಅನುದಾನ ಕಟ್ ಮಾಡಿಲ್ಲ ಕಟ್ ಮಾಡುವುದಕ್ಕೂ ಬಿಡುವುದಿಲ್ಲ ಎಂದರು.

ರಾಜ್ಯದ ಕೆಲ ಅಂಗನವಾಡಿಗಳಲ್ಲಿ ಕಳಪೆ ಅಕ್ಕಿ ವಿತರಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಅಂಗನವಾಡಿಗೆ 50 ವರ್ಷದ ಇತಿಹಾಸವಿದೆ. 70 ಸಾವಿರ ಅಂಗನವಾಡಿಯಲ್ಲಿ 35 ಲಕ್ಷ ಮಕ್ಕಳ ಪಾಲನೆ ಮಾಡುತ್ತೇವೆ. ಗದಗದಲ್ಲಿ ಸಮಸ್ಯೆಯಾಗಿರುವ ಅಂಗನವಾಡಿ ಹೆಸರು ಹೇಳಿ, ನಿಮ್ಮ ಮುಂದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.