Udupi: ಸಾಂಪ್ರದಾಯಿಕ ತಿಂಡಿ-ತಿನಿಸು; ಬನ್ನಂಜೆಯಲ್ಲಿ “ಉಡುಪಿ ಸ್ಟೋರ್ ‘ ಉದ್ಘಾಟನೆ
Team Udayavani, May 11, 2024, 1:20 PM IST
ಉಡುಪಿ: ಬನ್ನಂಜೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ನೆಲ ಮಹಡಿಯಲ್ಲಿ ದಿನದ 24 ಗಂಟೆಯೂ ತೆರೆದಿರುವ ಉದ್ದೇಶದಿಂದ ವಿ21
ಗ್ರೂಪ್‌ನವರಿಂದ ತೆರೆಯಲಾದ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಹಾಗೂ ಕರಕುಶಲ ವಸ್ತುಗಳ ಮಳಿಗೆ “ಉಡುಪಿ ಸ್ಟೋರ್’ನ ಉದ್ಘಾಟನೆ ಶುಕ್ರವಾರ ನಡೆಯಿತು.
ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹ ಸಂದೇಶ ನೀಡಿ, ಉಡುಪಿಯ ಆಹಾರೋತ್ಪನ್ನಗಳಿಗೆ ಎಲ್ಲ ಕಡೆ ಬೇಡಿಕೆಯಿದೆ. ಸಮಾಜಕ್ಕೆ ಶುಚಿ-ರುಚಿಯಾದ ಗುಣಮಟ್ಟದ ಆರೋಗ್ಯಪೂರ್ಣ ಆಹಾರವನ್ನು
ಒದಗಿಸುವ ಮಹದಾಸೆಯಿಂದ ಆರಂಭಿಸಲ್ಪಟ್ಟ ಈ ಮಳಿಗೆ ಯಶಸ್ವಿಯಾಗಲಿದೆ ಎಂದು ಹಾರೈಸಿದರು.
ಶಾಸಕ ಯಶ್‌ಪಾಲ್ ಎ. ಸುವರ್ಣ ಮಾತನಾಡಿ, ಉಡುಪಿಯ ಸ್ಥಳೀಯ ಉತ್ಪನ್ನಗಳನ್ನು ಜನತೆಗೆ ಮುಟ್ಟಿಸುವ ಕಾರ್ಯಕ್ಕೆ ಹೊರಟ ಮಳಿಗೆ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಉಡುಪಿ ಡಿಪೋ ಮ್ಯಾನೇಜರ್ ಶಿವರಾಮ್ ನಾಯ್ಕ ಶುಭಾಶಂಸನೆಗೈದರು. ವಿ21 ಗ್ರೂಪ್ ವತಿಯಿಂದ ಶ್ರೀಪಾದರನ್ನು ಗೌರವಿಸಲಾಯಿತು.
ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಕೆ. ರಾಜೇಶ್ ಶೆಟ್ಟಿ, ನಗರಸಭೆ ಪೌರಾಯುಕ್ತ ರಾಯಪ್ಪ, ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಡಿಟಿಒ ಕಮಲ್ ಕುಮಾರ್, ಬೇಕರಿ ಅಸೋಸಿಯೇಶನ್ ಅಧ್ಯಕ್ಷ ವಿಶ್ವನಾಥ ಕುಲಾಲ್, ನಿರ್ದೇಶಕರಾದ ರಾಘವೇಂದ್ರ ಮಡಿಕುಳ, ಡಾಲ್ಫಿ ವಿಕ್ಟರ್ ಲೂವಿಸ್ ಹಾಗೂ ನಿರ್ದೇಶಕರು, ಗಣ್ಯರು ಉಪಸ್ಥಿತರಿದ್ದರು.
ನಿರ್ದೇಶಕ ಶ್ರೀಧರ ಪಿ.ಎಸ್. ಪ್ರಸ್ತಾವನೆಗೈದು, 21 ಮಂದಿ ಪಾಲುದಾರರನ್ನು ಹೊಂದಿದ ಸಂಸ್ಥೆಗೆ “ವಿ21 ಗ್ರೂಪ್’ ಎಂದು ಹೆಸರಿಲಾಗಿದ್ದು, ಇದರಲ್ಲಿ 20 ಮಂದಿ ಸಮಾನ ಮನಸ್ಕರು ಒಟ್ಟಾಗಿ ಒಂದು ಪಾಲನ್ನು (21ನೇ) ದೇವರ ಹೆಸರಿನಲ್ಲಿ ಇಡಲಾಗುವುದು. ಬಂದ ಲಾಭದ 21ನೇ ಪಾಲಿನಲ್ಲಿ ಸಮಾಜಮುಖೀ ಕಾರ್ಯ ನಡೆಸುವ ಉದ್ದೇಶ ಹೊಂದಲಾಗಿದೆ ಎಂದರು.
ನಿರ್ದೇಶಕ ದಿವಾಕರ ಸನಿಲ್ ಸ್ವಾಗತಿಸಿದರು. ದಯಾನಂದ ಉಗ್ಗೇಲ್ ಬೆಟ್ಟು ನಿರೂಪಿಸಿ, ವಂದಿಸಿದರು.
ಸಾಂಪ್ರದಾಯಿಕತೆ ಒತ್ತು
ವಿ21 ಗ್ರೂಪ್‌ನ ಉಡುಪಿಯ ಮೊದಲ ಮಳಿಗೆಯಲ್ಲಿ ಉಡುಪಿಯ ಸಾಂಪ್ರದಾಯಿಕ ವಿಶೇಷ ತಿಂಡಿ ತಿನಿಸುಗಳು, ಹಲವು ಬಗೆಯ ಉಪ್ಪಿನಕಾಯಿ, ಚಟ್ನಿ ಪುಡಿ, ಮಸಾಲೆ ಹುಡಿ, ಹಪ್ಪಳಗಳು, ಸ್ಕ್ವಾಷ್ ಮತ್ತು ಸಿರಪ್‌ಗ್ಳು, ಎಲ್ಲ ತರಹದ ಬೇಕರಿ ಉತ್ಪನ್ನಗಳು, ದಿನಸಿ ಸಾಮಗ್ರಿಗಳು ಹಾಗೂ ಉಡುಪಿಯ ಸಾಂಪ್ರದಾಯಿಕ ಕರಕುಶಲ ವಸ್ತುಗಳು, ಹಲವು ಬಗೆಯ ಆಲಂಕಾರಿಕ ವಸ್ತುಗಳು ಲಭ್ಯವಿವೆ. ಜಿಲ್ಲೆಯಲ್ಲಿ ಈಗಾಗಲೇ ಸಾಂಪ್ರದಾಯಿಕ ತಿಂಡಿ-ತಿನಿಸುಗಳು ಮತ್ತು ಕರಕುಶಲ ವಸ್ತುಗಳ ತಯಾರಿಯಲ್ಲಿ ಪ್ರಾವೀಣ್ಯ ಗಳಿಸಿರುವ ವಿ21 ಗ್ರೂಪ್ ಉಡುಪಿ ಬ್ರ್ಯಾಂಡ್ ನ ತಿಂಡಿ-ತಿನಿಸುಗಳನ್ನು ಇನ್ನಷ್ಟು ಪ್ರಚಾರಗೊಳಿಸುವ ಉದ್ದೇಶ ಹೊಂದಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.