ಉಡುಪಿ: ತ್ರಿಶಾ ವಿದ್ಯಾ ಕಾಲೇಜು-ವಾರ್ಷಿಕೋತ್ಸವ
Team Udayavani, Jun 18, 2024, 2:35 PM IST
ಉಡುಪಿ: ಕರಾವಳಿ ಕರ್ನಾಟಕದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ ಮೆಂಟ್ ಮತ್ತು ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ವಾರ್ಷಿಕೋತ್ಸವವು ಕಟಪಾಡಿ ಅಗ್ರಹಾರದ ಕಾಳಿಕಾಂಬಾ ವಿಶ್ವಕರ್ಮೇಶ್ವರ ಸಭಾಭವನದಲ್ಲಿ ನಡೆಯಿತು.
ಯುಕೆ ಆ್ಯಂಡ್ ಕೋ.ಕಂಪೆನಿಯ ಸ್ಥಾಪಕ ಕೆ. ಉಲ್ಲಾಸ್ ಕಾಮತ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣ ಮುಗಿಸಿ ಬೇರೆಯವರಿಗೆ ಸ್ವೋದ್ಯೋಗ ನೀಡುವವರಾಗಬೇಕು. ಹೊಸ ಯೋಜನೆ ಕಠಿನ ನಿರ್ಧಾರಗಳಿಂದ ಭವಿಷ್ಯದ ಕನಸುಗಳನ್ನು ಸಾಕಾರಗೊಳಿಸಿಕೊಳ್ಳಬೇಕು. ಇವೆಲ್ಲದಕ್ಕೂ ಅವರು ಅಳವಡಿಸಿಕೊಂಡ ಕೌಶಲಗಳೇ ದಾರಿ ತೋರಿಸುತ್ತವೆ ಎಂದು ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕ ಗೋಪಾಲಕೃಷ್ಣ ಭಟ್ ಸಾಧನೆಗೈದ ವಿದ್ಯಾರ್ಥಿಗಳನ್ನು
ಅಭಿನಂದಿಸಿದರು. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ
ಗೌರವಿಸಲಾಯಿತು. ಸಾಧನೆಗೈದ ಹಿರಿಯ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು.
ಸಿದ್ಧಾಂತ್ ಫೌಂಡೇಶನ್‌ನ ಟ್ರಸ್ಟಿ ನಮಿತಾ ಜಿ. ಭಟ್, ರಾಮ ಪ್ರಭು, ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಪ್ರೊ| ನಾರಾಯಣ ರಾವ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ
ಪ್ರೊ| ವಿಘ್ನೇಶ್ ಶೆಣೈ ಉಪಸ್ಥಿತರಿದ್ದರು.
ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ನಿಧಿ ಎನ್. ಪೈ ಸ್ವಾಗತಿಸಿ, ಪ್ರೊ| ರೆನಿಟಾ ವಂದಿಸಿದರು. ಅಂತಿಮ ಬಿಕಾಂನ ವಿದ್ಯಾರ್ಥಿಗಳಾದ ಸುಹಾನ್ ಶೆಟ್ಟಿ, ಲೆರಿನಾ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಬಗೆಯ ಸಂಸ್ಕೃತಿಕ ಕಾರ್ಯಕ್ರಮಗಳು
ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.