ಉಡುಪಿ: ಇಬ್ಬರಿಗೆ ನೆಗೆಟಿವ್‌, ಆಸ್ಪತ್ರೆಗೆ ಇಬ್ಬರು ದಾಖಲು

 ಆಸ್ಪತ್ರೆ ದಾಖಲಾದ ವಿದ್ಯಾರ್ಥಿಗಳಲ್ಲಿ ಸೋಂಕು ಇಲ್ಲ

Team Udayavani, Mar 14, 2020, 12:41 AM IST

ಉಡುಪಿ: ಇಬ್ಬರಿಗೆ ನೆಗೆಟಿವ್‌, ಆಸ್ಪತ್ರೆಗೆ ಇಬ್ಬರು ದಾಖಲು

ಉಡುಪಿ: ಕೊರೊನಾ ಸೋಂಕಿಗೆ ಸಂಬಂಧಿಸಿ ಗುರುವಾರ ಮಣಿಪಾಲ ಆಸ್ಪತ್ರೆಗೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇಲ್ಲ ಎಂದು ಪರೀಕ್ಷೆಯಿಂದ ದೃಢಪಟ್ಟಿದೆ.

ಆಂಧ್ರಪ್ರದೇಶ ಮತ್ತು ಕೇರಳ ಮೂಲದ ಈ ವಿದ್ಯಾರ್ಥಿಗಳು ಅಮೆರಿಕ ಮತ್ತು ಮಲೇಶ್ಯಾಕ್ಕೆ ಹೋಗಿ ಮಣಿಪಾಲಕ್ಕೆ ಆಗಮಿಸಿದ್ದರು. ಅವರಿಗೆ ಕಾಯಿಲೆಯ ಲಕ್ಷಣಗಳು ಕಂಡು ಬಂದಾಗ ಗಂಟಲು ದ್ರವ ಮತ್ತು ರಕ್ತ ಪರೀಕ್ಷೆಯನ್ನು ಶಿವಮೊಗ್ಗಕ್ಕೆ ಕಳುಹಿಸಲಾಯಿತು. ಇದೀಗ ಸೋಂಕು ಇಲ್ಲ ಎಂದು ವರದಿ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇನ್ನೊಬ್ಬ ದಾಖಲು
ಮಣಿಪಾಲದಲ್ಲಿರುವ ದುಬಾೖ ಮೂಲದ ವಿದ್ಯಾರ್ಥಿಯೊಬ್ಬರಿಗೆ ಶುಕ್ರವಾರ ಅನಾರೋಗ್ಯ ಕಂಡು ಬಂದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಗಂಟಲು ದ್ರವ ಮತ್ತು ರಕ್ತ ಪರೀಕ್ಷೆಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಶನಿವಾರ ವರದಿ ಕೈಸೇರಲಿದೆ ಎಂದು ಡಾ| ಸೂಡ ತಿಳಿಸಿದ್ದಾರೆ.

ಮತ್ತೆ ಪರೀಕ್ಷೆ
ಸಾಗರ ತಾಲೂಕು ಆನಂದಪುರದ 68ರ ಹರೆಯದ ಮಹಿಳೆಗೆ ಕೊರೊನಾ ಸೋಂಕು ಇಲ್ಲ ಎಂದು ವರದಿ ಬಂದಿದ್ದರೂ ಆರೋಗ್ಯ ಸುಧಾರಣೆಯಾಗದ ಕಾರಣ ಮತ್ತೂಮ್ಮೆ ಗಂಟಲು ದ್ರವ ಮತ್ತು ರಕ್ತ ಮಾದರಿಯನ್ನು ಶಿವಮೊಗ್ಗಕ್ಕೆ ಕಳುಹಿಸಲಾಗಿದೆ ಎಂದು ಡಾ| ಸೂಡ ತಿಳಿಸಿದ್ದಾರೆ. ಮಹಿಳೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿರ್ವದ ವ್ಯಕ್ತಿ ಆಸ್ಪತ್ರೆಗೆ
ಶಿರ್ವ ಮೂಲದ 37 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಉಡುಪಿ ಜಿಲ್ಲಾಸ್ಪತ್ರೆಯ ವಿಶೇಷ ವಾರ್ಡ್‌ಗೆ ದಾಖಲಾಗಿದ್ದಾರೆ. ಅವರು ಕೊರೊನಾ ಹರಡುತ್ತಿದ್ದಾಗ ಜಪಾನ್‌ ಹಡಗಿನಲ್ಲಿದ್ದರು. ಅವರನ್ನು ಹಾಂಕಾಂಗ್‌ನಲ್ಲಿ 14 ದಿನ ಪರೀಕ್ಷೆಗೆ ಒಳಪಡಿಸಿ ಬಿಡುಗಡೆಗೊಳಿಸಲಾಗಿತ್ತು. ಊರಿಗೆ ಬಂದ ಬಳಿಕ ಕೆಮ್ಮು, ಶೀತ, ಜ್ವರ ಇಲ್ಲದಿದ್ದರೂ ಭೇದಿ ಮತ್ತು ಹೊಟ್ಟೆ ನೋವು, ಸ್ವಲ್ಪ ಉಸಿರಾಟದ ಸಮಸ್ಯೆ ತಲೆದೋರಿ ಆಸ್ಪತ್ರೆಗೆ ದಾಖಲಾದರು. ಇವರ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮಣಿಪಾಲದಲ್ಲಿ ಕಾರ್ಯಕ್ರಮ ರದ್ದು
ಮಣಿಪಾಲ ವಿ.ವಿ.ಯಲ್ಲಿ ಮಾ. 12ರಿಂದ ನಿಗದಿತವಾದ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಇದು ಎಷ್ಟು ದಿನವೆಂದು ನಿಗದಿಪಡಿಸಿಲ್ಲ ಎಂದು ವಿ.ವಿ. ಕುಲಸಚಿವ ಡಾ| ನಾರಾಯಣ ಸಭಾಹಿತ್‌ ತಿಳಿಸಿದ್ದಾರೆ.

ಸಮ್ಮೇಳನಗಳು ರದ್ದು
ಹಂಗಾರಕಟ್ಟೆಯಲ್ಲಿ ಮಾ. 14-15ರಂದು ನಡೆಯಬೇಕಾದ ಸಾಹಿತ್ಯ ಸಮ್ಮೇಳನ, ಮಾ. 14ರಂದು ಬ್ರಹ್ಮಾವರ ಬಂಟರ ಭವನದಲ್ಲಿ ನಡೆಯಬೇಕಾಗಿದ್ದ “ಬಾಂಧವ್ಯ’ ಕಾರ್ಯಕ್ರಮ, ಕಾರ್ಕಳದಲ್ಲಿ ಮಾ. 15ರಂದು ನಡೆಯಬೇಕಾದ ಮೊಗೇರ ಸಮ್ಮೇಳನವನ್ನು ಮುಂದೂಡಲಾಗಿದೆ.

ಸರಳ ಜಾತ್ರೆ
ಒಂದು ವಾರ ಜಾತ್ರೆ, ಉತ್ಸವಗಳನ್ನು ರದ್ದುಗೊಳಿಸಲು ಸರಕಾರ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಜಾತ್ರೆ, ಉತ್ಸವಗಳನ್ನು ಸರಳವಾಗಿ ಆಚರಿಸಲು ತಿಳಿಸುವುದಾಗಿ ಧಾರ್ಮಿಕ ದತ್ತಿ ಇಲಾಖೆ ಮೂಲಗಳು ತಿಳಿಸಿವೆ. ಸದ್ಯ ಕೊಲ್ಲೂರು, ಪೆರ್ಡೂರು, ಪಡುಬಿದ್ರಿ, ನಂದಿಕೂರು ಮೊದಲಾದ ದೇವಸ್ಥಾನಗಳಲ್ಲಿ ಜಾತ್ರೆ ನಿಗದಿಯಾಗಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.