Udupi: 10 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಉಡುಪಿ ಜಿಲ್ಲಾ ಪೊಲೀಸ್ ಶ್ವಾನ ‘ಐಕಾನ್’
Team Udayavani, Aug 30, 2024, 2:38 PM IST
ಉಡುಪಿ: ಕಳೆದ 10 ವರ್ಷ 25 ದಿನಗಳಿಂದ ಉಡುಪಿ ಜಿಲ್ಲೆಯ ಪೊಲೀಸ್ ಶ್ವಾನದಳದಲ್ಲಿ ಸ್ಫೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ ಐಕಾನ್ ನಿವೃತ್ತಿ ಹೊಂದಿದೆ.
ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಶ್ವಾನವು ಆಗಸ್ಟ್ 5, 2014 ರಂದು ಜನಿಸಿದ್ದು, ನವೆಂಬರ್ 5, 2014 ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡಿದೆ. ಎಪಿಸಿ. ಗಣೇಶ ಎಂ. 1444 ರವರು ಹ್ಯಾಂಡ್ಲರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಸಿ.ಎ.ಆರ್ ಸೌತ್ ಆಡುಗೋಡಿಯಲ್ಲಿ ಸ್ಫೋಟಕ ಪತ್ತೆ ಬಗ್ಗೆ 09 ತಿಂಗಳು ಕಠಿಣ ತರಬೇತಿಯನ್ನು ಪಡೆದು ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದ್ದು, ಈ ಶ್ವಾನವು ಗೌರವಾನ್ವಿತ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ವಿದೇಶಿ ಗಣ್ಯರು ಹಾಗೂ ಗಣ್ಯಾತಿಗಣ್ಯರ ಆಗಮನದ ಸಂಧರ್ಭದಲ್ಲಿ ಹಾಗೂ ಏರ್ ಶೋ, ಜಿ-20 ಶೃಂಗಸಭೆ, ದತ್ತ ಜಯಂತಿ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ, ಸಾಗರ ಕವಚ ಹಾಗೂ ಪ್ರತಿನಿತ್ಯದ ಕರ್ತವ್ಯದಲ್ಲಿ ಮಲ್ಪೆ ಬಂದರು, ಕಾಪು ಲೈಟ್‌ಹೌಸ್, ಮಣಿಪಾಲ ಯೂನಿವರ್ಸಿಟಿ, ರೈಲ್ವೇ ನಿಲ್ದಾಣ, ನಾಗಾರ್ಜುನ, ಮೈಸೂರು ದಸರಾ, ನ್ಯಾಷನಲ್ ನಾರ್ಕೋಟಿಕ್ಸ್ ಕಾನ್ಫರೆನ್ಸ್, ಬ್ರಹ್ಮಾವರದಲ್ಲಿ ಕಚ್ಚಾ ಬಾಂಬ್ ಪತ್ತೆ ಇತ್ಯಾದಿ ಸಂಧರ್ಭಗಳಲ್ಲಿ ಸ್ಪೋಟಕ ಪತ್ತೆ ಕಾರ್ಯದಲ್ಲಿ ಯಾವುದೇ ವಿಧ್ವಂಸಕ ಕೃತ್ಯ ನಡೆಯದಂತೆ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿತ್ತು.
ಫೆಬ್ರವರಿ 22, 2020 ರಂದು ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ಬೆಳ್ಳಿಯ ಪದಕ ಪಡೆದು, ಉಡುಪಿ ಜಿಲ್ಲೆಗೆ ಹಾಗೂ ಪೊಲೀಸ್ ಇಲಾಖೆಗೆ ಗೌರವವನ್ನು ತಂದು ಕೊಟ್ಟ ಕೀರ್ತಿ ಇದಕ್ಕಿದೆ.
ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರಾದ ಡಾ|| ಅರುಣ್ ಕೆ. ಐ.ಪಿ.ಎಸ್ , ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ಕೆ.ಎಸ್.ಪಿ.ಎಸ್., ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರಭು ಡಿ.ಟಿ, ಕೆ.ಎಸ್.ಪಿ.ಎಸ್ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಉಪಾಧೀಕ್ಷಕರಾದ ಶ್ರೀ ತಿಮ್ಮಪ್ಪ ಗೌಡ ಜಿ. ಕೆ.ಎಸ್.ಪಿ.ಎಸ್, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ನಿರೀಕ್ಷಕರಾದ ಶ್ರೀ ಎಸ್. ರವಿಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಇದನ್ನೂ ಓದಿ: Gujarat Floods: ಪ್ರವಾಹದಿಂದ ಮನೆಯ ಮೇಲೆ ರಕ್ಷಣೆ ಪಡೆದ ಮೊಸಳೆ… ಜೀವ ಭಯದಲ್ಲಿ ಜನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Dakshina Kannada ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.