
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಶೇ. 90ರಷ್ಟು ಪೂರ್ಣ| ಉಪಕರಣಗಳಿಗೆ ಅನುದಾನ ಕೊರತೆ
Team Udayavani, Dec 19, 2024, 3:11 PM IST

ಗಣಿ ಇಲಾಖೆಯ ಕಟ್ಟಡ
ಉಡುಪಿ: ನಗರ ಭಾಗದಲ್ಲಿರುವ ಕೆಲವೊಂದು ಸರಕಾರಿ ಕಟ್ಟಡಗಳು ಪೂರ್ಣಗೊಂಡಿದ್ದರೂ ಉದ್ಘಾಟನೆ ಭಾಗ್ಯ ಮಾತ್ರ ಇನ್ನೂ ಸಿಗಲಿಲ್ಲ.
ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಈಗಾಗಲೇ ಶೇ.90ರಷ್ಟು ಪೂರ್ಣಗೊಂಡಿದೆ. 115 ಕೋಟಿ ರೂ. ವೆಚ್ಚದಲ್ಲಿ 250 ಬೆಡ್‌ಗಳ ಆಸ್ಪತ್ರೆ ಇದಾಗಿದೆ. ಹೊಸ ಆಸ್ಪತ್ರೆಗೆ ಅಗತ್ಯವಿರುವ ಉಪಕರಣಗಳು, ಒಳಾಂಗಣ ಹಾಗೂ ಇತರ ಸೌಲಭ್ಯಗಳಿಗೆ ಅನುದಾನದ ಅಗತ್ಯವಿದೆ. ವೈದ್ಯರು, ತಜ್ಞರು, ನಾನ್ ಮೆಡಿಕಲ್ ಸಿಬಂದಿ ನೇಮಕದ ಬಗ್ಗೆಯೂ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದ್ದು, ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಈ ವರ್ಷದ ಜೂನ್ ತಿಂಗಳೊಳಗೆ ಉದ್ಘಾಟಿಸುವ ಗುರಿ ಹೊಂದಲಾಗಿತ್ತು. ಅನಂತರ ಅದು ವರ್ಷಾಂತ್ಯಕ್ಕೆ ವಿಸ್ತರಣೆಯಾಯಿತು. ಪ್ರಸ್ತುತ ಈ ವರ್ಷಾಂತ್ಯವಾಗುತ್ತಿದ್ದು, ಹೊಸ ಕಟ್ಟಡದ ಯಾವಾಗ ಉದ್ಘಾಟನೆಯಾಗುತ್ತದೆ ಎಂಬ ಕುತೂಹಲ ಜನರಲ್ಲಿದೆ.

ಜಿಲ್ಲಾಸ್ಪತ್ರೆ ಕಟ್ಟಡ
ಗಣಿ ಇಲಾಖೆ ಕಟ್ಟಡ
ದೊಡ್ಡಣಗುಡ್ಡೆಯ ಚಕ್ರತೀರ್ಥದಲ್ಲಿ 2 ವರ್ಷಗಳ ಹಿಂದೆ ಸುಮಾರು 2 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಟ್ಟಡ ನಿರ್ಮಾಣ ಸಂಪೂರ್ಣಗೊಂಡಿದ್ದರೂ ಇದುವರೆಗೂ ಉದ್ಘಾಟನೆಯಾಗಿಲ್ಲ. ಕಟ್ಟಡ ಸಂಪೂರ್ಣಗೊಂಡು ಬಣ್ಣ ಬಳಿದು ಕಾಂಪೌಂಡ್‌ಗಳನ್ನೂ ಇಲ್ಲಿ ನಿರ್ಮಾಣ ಮಾಡಲಾಗಿದೆ. ಸುತ್ತಲೂ ಪೊದೆಗಳು ಬೆಳೆದುನಿಂತಿದ್ದು, ಗಣಿ ಇಲಾಖೆಯ ಸಚಿವರ ಆಗಮನಕ್ಕೆ ಕಾಯುವಂತಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.