Udupi Video Scandal: ಉಡುಪಿಗೆ ಆಗಮಿಸಿದ ಸಿಐಡಿ ತಂಡ
Team Udayavani, Aug 8, 2023, 12:41 PM IST
ಉಡುಪಿ: ಇಲ್ಲಿನ ಖಾಸಗಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಿಐಡಿ ಡಿವ್ಯೆಎಸ್ಪಿ ಅಂಜುಮಾಲಾ ನಾಯಕ್ ನೇತ್ರತ್ವದ ತಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ತನಿಖಾಧಿಯಾಗಿದ್ದ ಬೆಳ್ಳಿಯಪ್ಪ ಸಹಿತ ಮಲ್ಪೆ ಠಾಣೆಯ ಪೊಲೀಸರು ಘಟನೆ ಹಾಗು ತನಿಖೆಯ ವರದಿಗಳನ್ನು ಸಿಐಡಿಗೆ ಹಸ್ತಾಂತರಿಸಿದರು. ಇನ್ನು ಮುಂದೆ ಅಂಜುಮಾಲಿ ನಾಯಕ್ ಈ ಪ್ರಕರಣದ ತನಿಖಾಧಿಕಾರಿಯಾಗಿರಲಿದ್ದಾರೆ.
ಇದನ್ನೂ ಓದಿ:Minister Chaluvarayaswamy ವಿರುದ್ದ ಪತ್ರ: ಪೊಲೀಸ್ ತನಿಖೆಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಉಡುಪಿಯ ಖಾಸಗಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಮಾಡಲಾಗಿದೆ ಎಂಬ ಆರೋಪ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಸರಕಾರದಿಂದ ಪ್ರಕರಣದ ನಿರಾಕರಣೆ ವಿಪಕ್ಷವನ್ನು ಕೆರಳಿಸಿತ್ತು. ಸರಕಾರದ ಧೋರಣೆಯನ್ನು ಖಂಡಿಸಿ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದರು. ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ವಹಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು. ಇವೆಲ್ಲದಕ್ಕೂ ಮಣಿದ ಸರಕಾರ ಈಗ ಸಿಐಡಿ ತನಿಖೆಗೆ ವಹಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.